ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೊಡಗಿನ ಭರತ್ ಕುಮಾರ್ ಅಧಿಕಾರ ಸ್ವೀಕಾರ

ವಿರಾಜಪೇಟೆ : ಕರ್ನಾಟಕ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ ಮೂಲದ, ಬೆಂಗಳೂರು ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಎಸ್.ಭರತ್ ಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಿದರು.
ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಕೆ.ಎಸ್.ಭರತ್ ಕುಮಾರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಅಭಿನಂದಿಸಿದರು.

ಬೆಂಗಳೂರು ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಎಸ್.ಭರತ್ ಕುಮಾರ್ ಅವರು ವಿರಾಜಪೇಟೆಯವರಾಗಿದ್ದು, ಬೋರೇಗೌಡ ಕಾಂಪ್ಲೆಕ್ಸ್ ಮಾಲೀಕರು, ಜಿಲ್ಲಾ ಪರಿಷತ್ ಮಾಜಿ ಸದಸ್ಯರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಬಿ.ಶಾಂತಪ್ಪ ಹಾಗೂ ರತ್ನಮ್ಮ ಅವರ ಜ್ಯೇಷ್ಠ ಪುತ್ರರಾಗಿದ್ದಾರೆ.

ಇವರು 2002 ರಿಂದ 2004 ರವರೆಗೆ ಜಮ್ಶೆಡ್ ಪುರದ ಟಾಟಾ ಸ್ಟೀಲ್ ಸಂಸ್ಥೆಯಲ್ಲಿ ಮುಖ್ಯ ಕಾನೂನು ಸಲಹೆಗಾರರಾಗಿ, 2004 ರಿಂದ 2015 ರವರೆಗೆ ಕರ್ನಾಟಕ ಹೈಕೋರ್ಟ್ ನ ವಕೀಲರಾಗಿ ಕಾರ್ಯ ನಿರ್ವಹಿಸಿದರು.
2015ರಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ಆಯ್ಕೆಯಾಗಿ 2019 ರವರೆಗೆ ತುಮಕೂರು ಜಿಲ್ಲಾ ನ್ಯಾಯಾಧೀಶರಾಗಿ ಕಾರ್ಯನಿರ್ವಹಣೆ ಮಾಡಿದ್ದಾರೆ.
2019 ರಿಂದ 2020ರ ವರೆಗೆ ಮೈಸೂರು ಜಿಲ್ಲಾ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಣೆ, 2020 ರಿಂದ ಕರ್ನಾಟಕ ಹೈಕೋರ್ಟ್ ನಲ್ಲಿ ರಿಜಿಸ್ಟ್ರಾರ್ ಜುಡಿಷಿಯಲ್, ರಿಜಿಸ್ಟ್ರಾರ್ ವಿಜಿಲೆನ್ಸ್ ಹಾಗೂ ರಿಜಿಸ್ಟ್ರಾರ್ ಜನರಲ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. 2026 ಜೂನ್ 1 ರಿಂದ ಬೆಂಗಳೂರು ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಕರ್ನಾಟಕ ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೆ.ಎಸ್.ಭರತ್ ಕುಮಾರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ಒಂದರಿಂದ ಏಳನೇ ತರಗತಿಯವರೆಗೆ ಅಮೃತಿಯ ಗುಡ್ ಶಫರ್ಡ್ ಶಾಲೆ, ಎಂಟನೇ ತರಗತಿಯಿಂದ ಪಿಯುಸಿಯವರೆಗೆ ಅಳಿಕೆಯ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡಿದರು. ಬೆಂಗಳೂರು ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ ವಕೀಲ ಪದವಿ ಪಡೆದರು. ಕಾಲೇಜ್ ನ ಕುಲಪತಿಗಳಾದ ಅಂದಿನ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಾದ ಆನಂದ್ ಅವರಿಂದ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿಯೊಂದಿಗೆ ಚಿನ್ನದ ಪದಕ ಪಡೆದಿರುವ ಹೆಗ್ಗಳಿಕೆಗೆ ಕೆ.ಎಸ್.ಭರತ್ ಕುಮಾರ್ ಪಾತ್ರರಾಗಿದ್ದಾರೆ.
ತಮ್ಮ ಪುತ್ರನ ಸಾಧನೆಯ ಬಗ್ಗೆ ಕೆ.ಬಿ.ಶಾಂತಪ್ಪ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!