ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣರವರಿಂದ 2.63ಕೋಟಿಯ ಅಭಿವೃದ್ಧಿ ಕಾಮಗಾರಿಗಳಿಗೆ ಉಧ್ಘಾಟನೆ

ವಿರಾಜಪೇಟೆ: ಪುರಸಭೆ ವ್ಯಾಪ್ತಿಯ ಛತ್ರಕೆರೆಯ ₹ 1 ಕೋಟಿ 31 ಲಕ್ಷಗಳ ಹಾಗೂ ಗೌರಿ ಕೆರೆ ಭಾಗಕ್ಕೆ ₹1 ಕೋಟಿ 32 ಲಕ್ಷಗಳ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆಗೆ, ವಿರಾಜಪೇಟೆ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯವರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಇಂದು ಭೇಟಿ ನೀಡಿದರು.
ಈ ಭಾಗಗಳಲ್ಲಿ ಮಾನ್ಯ ಶಾಸಕರು ನೀಡಿದ ವಿಶೇಷ ಅನುದಾನದಲ್ಲಿ ಪೂರ್ಣಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನಡೆಯಿತು.

ಸ್ಥಳೀಯ ಪ್ರಮುಖರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಒಟ್ಟು ₹ 2 ಕೋಟಿ 63 ಲಕ್ಷಗಳ ಕಾಮಗಾರಿಗಳ ಉದ್ಘಾಟನೆಗಳನ್ನು ನೆರವೇರಿಸಿ ಶುಭ ಕೋರುತ್ತಾ ಮಾತನಾಡಿದ ಮಾನ್ಯ ಶಾಸಕರು, ಕ್ಷೇತ್ರದ ಹಾಗೂ ವಿಶೇಷವಾಗಿ ಈ ಭಾಗಗಳ ಅಭಿವೃದ್ಧಿಗೆ ಸರಕಾರದಿಂದ ವಿಶೇಷ ಅನುದಾನಗಳನ್ನು ತಂದು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಉತ್ತಮ ಕೆಲಸ ಮಾಡಿದ ಸಂದರ್ಭದಲ್ಲಿ ಜನರು ಸಹ ಅದಕ್ಕೆ ಬೆಂಬಲ ನೀಡುತ್ತಿರುವುದು ಸಂತಸದ ಸಂಗತಿ. ಕ್ಷೇತ್ರಾದ್ಯಂತ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯಬೇಕಿದ್ದು, ಜನರ ಬೆಂಬಲದೊಂದಿಗೆ ಮತ್ತಷ್ಟು ಅನುದಾನವನ್ನು ತಂದು ಜನರ ಆಶೋತ್ತರಗಳಿಗೆ ಸ್ಪಂದಿಸುವುದಾಗಿ ಮಾನ್ಯ ಶಾಸಕರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ನಗರ ಅಧ್ಯಕ್ಷರಾದ ಮಾಳೇಟೀರ ಬೋಪಣ್ಣ, ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷರು ಮಾದಂಡ ತಿಮ್ಮಯ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಕಾಳಮಂಡ ನೈನಾ ಜಗತ್, ಪುರಸಭೆ ಮಾಜಿ ಉಪಾಧ್ಯಕ್ಷರಾದ ಫಸಿಯಾ ತಬ್ಸುಂ, ವಿರಾಜಪೇಟೆ ತಾಲೂಕು ಬಗರ್ ಹುಕುಂ ಅಧ್ಯಕ್ಷರಾದ ಸಲೀಂ, ತಾಲೂಕು ಅಲ್ಪಸಂಖ್ಯಾತರ ಅಧ್ಯಕ್ಷರಾದ ರಫೀಕ್, ಶಶಿ, ವಿರಾಜಪೇಟೆ ಬ್ಲಾಕ್ ಉಪಾಧ್ಯಕ್ಷರಾದ ಜೋಕಿಂ ವಿರಾಜಪೇಟೆ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಕೊಡೀರ ವಿನೋದ್ ನಾಣಯ್ಯ, ಕುಂಡಚ್ಚಿರ ಮಂಜು ದೇವಯ್ಯ, ಕಾಳಮಾಂಡ ಜಗತ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಕ್ಷಿತ್ ಚಂಗಪ್ಪ, ವಿರಾಜಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶಬೀರ್ ಉಪಸ್ಥಿತರಿದ್ದರು.

ವರದಿ : ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!