ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಷ್ಟ್ರೀಯ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ಗೆ ಕಂಪ್ಲಿಯ ಜಿ. ಖುಷಿ ಆಯ್ಕೆ: ಗಂಗಮತ ಬೆಸ್ತ ಸಮಾಜದಿಂದ ಹಾರ್ದಿಕ ಅಭಿನಂದನೆ

ಇಡೀ ಜಿಲ್ಲೆಗೆ ಹೆಮ್ಮೆಯ ಕ್ಷಣ.

ಬಳ್ಳಾರಿ / ಕಂಪ್ಲಿ : ತಾಲೂಕಿನ ಗಂಗಮತ ಬೆಸ್ತ ಸಮಾಜದ ಹೆಮ್ಮೆಯ ಪುತ್ರಿಯಾದ ಕುಮಾರಿ ಜಿ. ಖುಷಿ ಅವರು 51ನೇ ಸಬ್ ಜೂನಿಯರ್ ರಾಷ್ಟ್ರೀಯ ಬಾಸ್ಕೆಟ್ ಬಾಲ್ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗುವ ಮೂಲಕ ಕಂಪ್ಲಿ ತಾಲೂಕು ಹಾಗೂ ಸಮುದಾಯಕ್ಕೆ ಕೀರ್ತಿ ತಂದಿದ್ದಾರೆ.
ಕಂಪ್ಲಿ ತಾಲೂಕಿನ ಗ್ರಾಮೀಣ ಭಾಗದ ಪ್ರತಿಭೆಯಾದ ಜಿ. ಖುಷಿ ಅವರು ಕಠಿಣ ಪರಿಶ್ರಮ ಮತ್ತು ಕ್ರೀಡಾ ಕೌಶಲ್ಯದ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವುದು ಇಡೀ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ಇವರ ಈ ಅಪೂರ್ವ ಸಾಧನೆಯನ್ನು ಕಂಪ್ಲಿ ತಾಲೂಕು ಗಂಗಮತ ಬೆಸ್ತ ಸಮಾಜವು ಮುಕ್ತ ಕಂಠದಿಂದ ಶ್ಲಾಘಿಸಿದೆ.

ಸಮಾಜದ ಅಧ್ಯಕ್ಷರ ಶುಭ ಹಾರೈಕೆ:
ಜಿ. ಖುಷಿ ಅವರ ಸಾಧನೆಗೆ ಹರ್ಷ ವ್ಯಕ್ತಪಡಿಸಿರುವ ಕಂಪ್ಲಿ ತಾಲೂಕು ಗಂಗಮತ ಸಮಾಜದ ಅಧ್ಯಕ್ಷರಾದ ಎಲಿಗಾರ್ ನಾಗರಾಜ್ ಅವರು, “ನಮ್ಮ ಸಮಾಜದ ಪುತ್ರಿ ರಾಷ್ಟ್ರ ಮಟ್ಟದ ಬಾಸ್ಕೆಟ್‌ಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿರುವುದು ಅತ್ಯಂತ ಸಂತಸದ ವಿಷಯ. ಭಗವಂತನು ಆಕೆಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ನೀಡಿ ಆಶೀರ್ವದಿಸಲಿ. ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಜಿ. ಖುಷಿ ಅವರು ಅತ್ಯುತ್ತಮ ಪ್ರದರ್ಶನ ನೀಡಿ, ಅವರ ಸಾಧನೆಯ ಕೀರ್ತಿಯ ಕಿರೀಟ ಹೀಗೆಯೇ ನಿರಂತರವಾಗಿ ಮುಂದುವರೆಯಲಿ. ಮುಂಬರುವ ದಿನಗಳಲ್ಲಿ ಅವರು ದೇಶವನ್ನು ಪ್ರತಿನಿಧಿಸುವಂತಾಗಲಿ” ಎಂದು ತುಂಬು ಹೃದಯದಿಂದ ಹಾರೈಸಿದ್ದಾರೆ.
ಸಮಾಜದ ಪದಾಧಿಕಾರಿಗಳು ಹಾಗೂ ಸಮಸ್ತರ ಪರವಾಗಿ ವಿಜೇತ ಕ್ರೀಡಾಪಟು ಜಿ. ಖುಷಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಗಿದ್ದು, ಮುಂದಿನ ಪಂದ್ಯಾವಳಿಗಳಿಗೆ ಶುಭ ಕೋರಲಾಗಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!