ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸರ್ಕಾರದ ಯೋಜನೆಗಳನ್ನು ಜನತೆಗೆ ತಲುಪಿಸುವುದು ಅತಿಮುಖ್ಯ : ತಹಶೀಲ್ದಾರ್ ಜೂಗಲ್ ಮಂಜುನಾಯಕ

ಬಳ್ಳಾರಿ / ಕಂಪ್ಲಿ: ಜನರ ಅಹವಾಲುಗಳು, ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲಿ ಪರಿಹರಿಸಿ, ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ಮುಟ್ಟಿಸುವ ನಿಟ್ಟಿನಲ್ಲಿ ಪ್ರಜಾಸೇವಾ ಆಂದೋಲನವನ್ನು ಸರ್ಕಾರ ಜಾರಿಗೆ ತಂದಿದೆ ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ಹೇಳಿದರು.
ತಾಲೂಕಿನ ಸಣಾಪುರ ಗ್ರಾಮದ ಉದ್ಭವ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ತಾಲೂಕು ಆಡಳಿತದ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರಜಾಸೇವಾ ಆಂದೋಲನಾ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ, ಗೃಹ ಲಕ್ಷ್ಮಿ, ಪಿಂಚಣಿ, ವೃದ್ಧಾಪ್ಯ ಯೋಜನೆ, ಜಾತಿ ಪ್ರಮಾಣ, ಜೆಸ್ಕಾಂ ಸೇರಿದಂತೆ ಇನ್ನಿತರ ಯೋಜನೆಗಳಿಗೆ ಸಂಬಂಧಿಸಿದಂತೆ ಜನರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲಾಗುವುದು. ತಾಲೂಕು ಮಟ್ಟದ ಅಧಿಕಾರಿಗಳು ಪ್ರತಿಯೊಬ್ಬ ಜನರ ಸಮಸ್ಯೆಗಳ ಅರ್ಜಿಗಳಿಗೆ ಸಕಾಲದಲ್ಲಿ ವಿಲೇವಾರಿ ಮಾಡಿ, ಅವರ ನೆಮ್ಮದಿಯ ಬದುಕಿಗೆ ಅವಕಾಶ ಮಾಡಿಕೊಡುವ ಜೊತೆಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವುದು ಅತಿಮುಖ್ಯವಾಗಿದೆ. ಈ ಪ್ರಜಾಸೇವಾ ಆಂದೋಲನಾದ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ನಂತರ ವೇದಿಕೆ ಮೇಲೆಯೇ ಸಮಸ್ಯೆಗಳ ಒತ್ತು ತಂದಂತಹ ಜನರನ್ನು ಕರೆದು, ಸ್ಥಳದಲ್ಲಿದ್ದ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ಅರ್ಜಿ ವಿಲೇವಾರಿಗೆ ಕ್ರಮ ವಹಿಸಿದರು.
ಇಲ್ಲಿನ ವಿವಿಧ ಇಲಾಖೆಯ ಯೋಜನೆಗಳ ಸಂಬಂಧದ ವಸ್ತು ಪ್ರದರ್ಶನಗಳಿಗೆ ಭೇಟಿ ನೀಡಿ, ಪರಿಶೀಲಿಸಿ, ಚಾಲನೆ ನೀಡುವ ಜೊತೆಗೆ ಯೋಜನೆಗಳ ಜಾಗೃತಿ ಮೂಡಿಸುವುದು ಒಳ್ಳೆಯ ಬೆಳವಣಿಗೆ ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ತಿಳಿಸಿದರು.
ಪ್ರಜಾಸೇವಾ ಆಂದೋಲನದಲ್ಲಿ ಆರ್‌ಡಿಪಿಆರ್ 274, ಕಂದಾಯ 4, ಕೆಎಸ್‌ಆರ್‌ಟಿಸಿ, ಶಿಕ್ಷಣ ಇಲಾಖೆ ತಲಾ 1 ಅರ್ಜಿ, ಆಹಾರ ಇಲಾಖೆ 2, ಸರ್ವೆ 10, ಜೆಸ್ಕಾಂ 3, ಸಿಡಿಪಿಒ 3 ಸೇರಿದಂತೆ ಒಟ್ಟು 298 ಅರ್ಜಿಗಳು ಬಂದಿದ್ದು, ಹಂತ ಹಂತದಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ ವಹಿಸಿದರು.

ಸರ್ವರ್ ಸಮಸ್ಯೆಯಲ್ಲಿ ಜನರು:

ಇಲ್ಲಿನ ವಿವಿಧ ಇಲಾಖೆಯಿಂದ ತೆರೆದಿದ್ದ ಸಾರ್ವಜನಿಕರ ಆನ್‌ಲೈನ್ ಅರ್ಜಿ ಕೌಂಟರ್‌ಗಳಲ್ಲಿ ಕೆಲ ಸಮಯ ಸರ್ವರ್ ಸಮಸ್ಯೆಯಿಂದ ಅರ್ಜಿದಾರರು ನಾಮುಂದು ತಾಮುಂದು ಎಬ್ಬಂತೆ ನೂಕುನುಗ್ಗಲಿನ ನಡುವೆ ಸಮಸ್ಯೆ ಎದುರಿಸಿದರು. ಸಮಸ್ಯೆಗಳ ಅರ್ಜಿಗಳನ್ನು ಅರ್ಜಿಸಲು ಬಂದ ಜನರು, ಇಲ್ಲಿನ ಸರ್ವರ್ ಸಮಸ್ಯೆಯಲ್ಲೇ ಕಾಲ ಕಳೆಯಬೇಕಾಗಿದೆ. ಕೊನೆಗೆ ಸಮಸ್ಯೆಗಳ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗೆ ನೀಡಿ, ಪರಿಹರಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ತಾ. ಪಂ. ಕಾರ್ಯ ನಿರ್ವಾಹಕ ಅಧಿಕಾರಿ ಆರ್.ಕೆ.ಶ್ರೀಕುಮಾರ್, ಎಡಿ ಮಲ್ಲನಗೌಡ ಕೆ.ಎಸ್, ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಮೋಹನ್ ಕಾಳಾಪುರ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಲ್ಲಿಕಾರ್ಜುನ, ಗ್ರಾಮ ಆಡಳಿತಾಧಿಕಾರಿಗಳಾದ ಲಕ್ಷ್ಮಣ ನಾಯ್ಕ್, ಮನೋಜಕುಮಾರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!