ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಡಾಕ್ಟರ್ ಮದನ್ ಪಟೇಲ್ ಅವರ ನಾಮನಿರ್ದೇಶನಕ್ಕೆ ಮನವಿ.

ಬೆಂಗಳೂರು: ಸೆಪ್ಟೆಂಬರ್ 28 ಕರ್ನಾಟಕ ವಿಧಾನ ಪರಿಷತ್ ಗೆ ಸಾಂಸ್ಕೃತಿಕ ವರ್ಗದಲ್ಲಿ ಪ್ರಥಮ ಬಾರಿಗೆ ಪರಿಶಿಷ್ಟ ಜಾತಿಯ ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ಕಲಾವಿದರಾದ ಡಾಕ್ಟರ್ ಮದನ್ ಪಟೇಲ್ ಅವರನ್ನು ನಾಮನಿರ್ದೇಶನ ಮಾಡುವಂತೆ ಮನವಿ.

ರಾಷ್ಟ್ರೀಯ ಅಹಿಂದ ಸಂಘಟನೆ ಸಮಾಜದ ಹಿಂದುಳಿದ ವರ್ಗಗಳ ಹಕ್ಕು ಅವಕಾಶ ಮತ್ತು ಪ್ರತಿನಿಧಿತ್ವಕ್ಕಾಗಿ ನಿರಂತರವಾಗಿ ಹೋರಾಟ ನಡೆಸುತ್ತಿರುವ ಸಂಘಟನೆಯಾಗಿದ್ದು ಡಾಕ್ಟರ್ ಮದನ್ ಪಟೇಲ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ 1998ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ನಟ, ಲೇಖಕ, ಸಂಗೀತ ನಿರ್ದೇಶಕ ನಿರ್ಮಾಪಕರಾಗಿ 1968ರಿಂದ ಅಂದರೆ ಸುಮಾರು 58 ವರ್ಷಗಳ ಕಾಲ ಸಾಂಸ್ಕೃತಿಕ ಕ್ಷೇತ್ರದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇವರು ಕರ್ನಾಟಕ ರಾಜ್ಯ ಡಾಕ್ಟರ್ ಗಂಗೂಬಾಯಿ ಹಾನಗಲ್ ಸಂಗೀತ ಪ್ರದರ್ಶನ ಕಲೆ ವಿಶ್ವವಿದ್ಯಾಲಯದ ಡಾಕ್ಟರ್ ಆಫ್ ಲಿಟರೇಟರ್ ಪದವಿಯನ್ನು ಪಡೆದಿದ್ದಾರೆ. ಇವರು ನಿಷ್ಠೆಯಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಸೇವೆ ಸಲ್ಲಿಸುತ್ತಿದ್ದು, ಕಲೆ ಸಾಹಿತ್ಯ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಗಣ್ಯ ವ್ಯಕ್ತಿಗಳಿಗೆ ಮೀಸಲಾದ 5 ಸ್ಥಾನಗಳಲ್ಲಿ ಇದುವರೆಗೆ ಪರಿಶಿಷ್ಟ ಜಾತಿಗೆ ಸೇರಿದ ಕಲಾವಿದರಿಗೆ ಅವಕಾಶ ನೀಡಲಾಗಿಲ್ಲ ಸಮಾನ ಅವಕಾಶ ನಮಗೂ ಕೂಡ ನೀಡುವುದು ಅತ್ಯಂತ ಅಗತ್ಯವಾಗಿದೆ. ಆದ್ದರಿಂದ ಪ್ರಥಮ ಬಾರಿಗೆ ಪರಿಶಿಷ್ಟ ಜಾತಿಗೆ ಸೇರಿದ ಕಲಾವಿದರಿಗೆ ಅವಕಾಶ ಕಲ್ಪಿಸುವುದು ಕಾಂಗ್ರೆಸ್ ಪಕ್ಷದ ಬದ್ಧತೆಯನ್ನು ಸಂದೇಶವನ್ನು ತಳ ಸಮುದಾಯಗಳಿಗೆ ತಲುಪಿಸುತ್ತದೆ. ಡಾಕ್ಟರ್ ಮದನ್ ಪಟೇಲ್ ಅವರ ದೀರ್ಘಕಾಲದ ಸಾಂಸ್ಕೃತಿಕ ಸೇವೆ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕೊಡುಗೆಯನ್ನು ಪರಿಗಣಿಸಿ ಸಾಂಸ್ಕೃತಿಕ ವರ್ಗದ ಅಡಿಯಲ್ಲಿ ಕರ್ನಾಟಕ ವಿಧಾನ ಪರಿಷತ್ ಸದಸ್ಯತ್ವಕ್ಕೆ ನಾಮ ನಿರ್ದೇಶನ ಮಾಡುವಂತೆ ನಮ್ಮ ಸಂಘಟನೆಯೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿತು.
ಈ ನಿಯೋಗದಲ್ಲಿ ದಾದಾಪೀರ್ ರಾಜ್ಯ ಕಾರ್ಯದರ್ಶಿ ಚಿತ್ರದುರ್ಗ, ರತ್ನಮ್ಮ ರಾಜ್ಯಾಧ್ಯಕ್ಷರು ಮಹಿಳಾ ಘಟಕ, ಸುಶೀಲಾ ರಾಜ್ಯಾಧ್ಯಕ್ಷರು ಕಾರ್ಮಿಕ ಘಟಕ, ಸಂಜು ಬಿಳಗೇರಿ ರಾಜ್ಯಾಧ್ಯಕ್ಷರು ಹೋರಾಟ ಸಮಿತಿ, ನಿತೀಶ್ ಮಹಾರಾಜ್ ವೇಣುಗೋಪಾಲ್ ರಾಜಕುಮಾರ್ ಪದಾಧಿಕಾರಿಗಳು ಹಾಗೂ ಮಂತಾದ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!