ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪೋಷಣ ಅಭಿಯಾನ ಮತ್ತು ಸೀಮಂತ ಕಾರ್ಯಕ್ರಮ

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹೆಬ್ಬಾಲೆ ಗ್ರಾಮದಲ್ಲಿ ಪೋಷಣ ಅಭಿಯಾನ ಕಾರ್ಯಕ್ರಮ ಮತ್ತು ಸೀಮಂತ ಕಾರ್ಯಕ್ರಮ ನಡೆಯಿತು.

ದಿನಾಂಕ 30-09-2026 ರಂದು ಗ್ರಾಮ ಪಂಚಾಯಿತಿ ಹೆಬ್ಬಾಲೆಯ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಹೆಬ್ಬಾಲೆ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಹೆಬ್ಬಾಲೆ ಇವರ ಸಂಯುಕ್ತಾಶ್ರಯದಲ್ಲಿ ಪೋಷಣ ಅಭಿಯಾನ ಕಾರ್ಯಕ್ರಮ ಮತ್ತು ಸೀಮಂತ ಕಾರ್ಯಕ್ರಮವನ್ನು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಹೆಬ್ಬಾಲೆ ಗ್ರಾಮ ಪಂಚಾಯಿತಿಯ ಪಿಡಿಒ ರವಿ ಕುಮಾರ್ ರವರು ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿಯನ್ನು ನೀಡಿದರು.
ಹೆಬ್ಬಾಲೆ ಆರೋಗ್ಯ ಕೇಂದ್ರದ ಮೇಲ್ವಿಚಾರಕರಾದ ಲತಾ ಕುಮಾರಿ ರವರು ಗರ್ಭಿಣಿ, ಬಾಣಂತಿ ಮಗುವಿನ ಆರೈಕೆ ಬಗ್ಗೆ ಮಾಹಿತಿಯನ್ನು ನೀಡಿದರು.
RKSK ಆಪ್ತ ಸಮಾಲೋಚಕರಾದ ಶೈಲಜಾ ರವರು ಹದಿಹರೆಯದ ಆರೋಗ್ಯದ ಬಗ್ಗೆ ಹಾಗೂ ಮಾದಕ ವಸ್ತುಗಳ ಬಳಕೆಯಿಂದ ಆಗುವ ತೊಂದರೆ ಬಗ್ಗೆ ಮಾಹಿತಿಯನ್ನು ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಮತಾರವರು ಗೃಹಲಕ್ಷ್ಮಿ ಬಗ್ಗೆ, ಮಾತೃ ವಂದನಾ ಬಗ್ಗೆ ಮಾಹಿತಿಯನ್ನು ನೀಡಿದರು.
ಆರೋಗ್ಯ ನಿರೀಕ್ಷಕರಾದ ಸಂಜಯ್ ರವರು ಶಿಶು ಮರಣ ಪ್ರಮಾಣ ಕಡಿಮೆ ಮಾಡಲು ಪ್ರತಿ ಅಂಗನವಾಡಿ ಕೇಂದ್ರದಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯದ ಬಗ್ಗೆ ಕಾರ್ಯಕ್ರಮ ಮಾಡಲು ತಿಳಿಸಿದರು.
4 ಗರ್ಭಿಣಿ ಮಹಿಳೆಯರಿಗೆ ಸೀಮಂತವನ್ನು ಮಾಡಲಾಯಿತು.
ಅಂಗನವಾಡಿ ಕಾರ್ಯಕರ್ತೆಯರಾದ ವನಜಾಕ್ಷಿ ಮತ್ತು ಸುಧಾ ರವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯ ಮುಖಂಡರಾದ ಸರಸ್ವತಿ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಹೆಬ್ಬಾಲೆಯ ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಚಂದ್ರಶೇಖರ, ಹೆಬ್ಬಾಲೆ ಮತ್ತು ಕೂಡಿಗೆ ಗ್ರಾಮ ಪಂಚಾಯಿತಿಯ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ‌, ಆಶಾ ಕಾರ್ಯಕರ್ತೆಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!