ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕ್ರಿಶ್ಚಿಯನ್ ಮುಖಂಡರಿಂದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರ ನೇತೃತ್ವದಲ್ಲಿ ಸಚಿವ ಯು.ಟಿ .ಖಾದರ್ ಭೇಟಿ

ವಿರಾಜಪೇಟೆ :ವಿಧಾನಸಭಾ ಕ್ಷೇತ್ರದ ಕ್ರಿಶ್ಚಿಯನ್ ಮುಖಂಡರು ಹಾಗೂ ವಂದನೀಯ ಗುರುಗಳ ಪ್ರಮುಖ ನಿಯೋಗವು ಬೆಂಗಳೂರಿನ ವಿಧಾನಸೌಧದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಮಾತುಕತೆ ನಡೆಸಿತು.

ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರು ಸಭೆಯಲ್ಲಿ ಉಪಸ್ಥಿತರಿದ್ದರು. ಕ್ಷೇತ್ರದ ಅಭಿವೃದ್ಧಿ ಸಮಸ್ಯೆಗಳು, ಕ್ರಿಶ್ಚಿಯನ್ ಸಮುದಾಯ ಹಾಗೂ ಸಾರ್ವಜನಿಕರ ಉನ್ನತಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಚಿವರೊಂದಿಗೆ ಸವಿಸ್ತಾರವಾಗಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಸಮುದಾಯದ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಸಚಿವರಿಗೆ ಸಲ್ಲಿಸಲಾಯಿತು.

ಮನವಿಯನ್ನು ಸ್ವೀಕರಿಸಿದ ಸಚಿವ ಯು.ಟಿ. ಖಾದರ್ ಅವರು, ಮುಖಂಡರು ಮಂಡಿಸಿದ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸುವುದಾಗಿ ಭರವಸೆ ನೀಡಿದರು. ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಶಾಸಕ ಎ.ಎಸ್. ಪೊನ್ನಣ್ಣ ಅವರು ಮಾತನಾಡಿ, ಸ್ಥಳೀಯ ಅಗತ್ಯಗಳಿಗೆ ಸ್ಪಂದಿಸುವುದರ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೆ ತಮ್ಮ ಸಂಪೂರ್ಣ ಬೆಂಬಲವಿರುವುದಾಗಿ ಹೇಳಿದರು.

ನಿಯೋಗದಲ್ಲಿ ವಿರಾಜಪೇಟೆ ಡೀನ್ ವಂ. ಜೇಮ್ಸ್ ಡೊಮಿನಿಕ್, ಸೇಂಟ್ ಆನ್ಸ್ ಕಾಲೇಜು ಪ್ರಾಂಶುಪಾಲರು ಹಾಗೂ ಅಮ್ಮತ್ತಿ ಪ್ಯಾರಿಷ್ ಪಾದ್ರಿ ವಂ. ಮದಲ್ ಮುತ್ತು, ದೇವರಪುರದ ಸೇಂಟ್ ಜೋಸೆಫ್ ಆಶ್ರಮದ ವಂ. ಹರ್ಷಿತ್ ದೇವ್, ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಎ.ಜೆ. ಬಾಬು, ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಉಪಾಧ್ಯಕ್ಷ ಜೋಕಿಂ ರೊಡ್ರಿಗಸ್, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಜಾನ್ಸನ್ ಪಿ.ವಿ., ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಕಾರ್ಯಾಧ್ಯಕ್ಷ ಆಂಟನಿ ರಾಬಿನ್, ಸಿದ್ದಾಪುರದ ಹಿರಿಯ ಕಾಂಗ್ರೆಸ್ ಮುಖಂಡ ಜೋಸೆಫ್ ಸ್ಯಾಮ್, ಗೋಣಿಕೊಪ್ಪದ ಕಾಂಗ್ರೆಸ್ ಮುಖಂಡ ಹಾಗೂ ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಸ್ಟಾಲಿನ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!