ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಾಪೂಜಿ ಪ್ರಬಂಧ ಸ್ಪರ್ಧೆ

ಬಾಗಲಕೋಟೆ ಜಿಲ್ಲೆಯ ರಹಿಮಾನಸಾಬ ನದಾಫ್ ರಾಜ್ಯಕ್ಕೆ ಪ್ರಥಮ.

ಹುನಗುಂದ : ಮಹಾತ್ಮಾ ಗಾಂಧೀಜಿಯವರ 157ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪದವಿ ಹಾಗೂ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಬಾಗಲಕೋಟೆ ಜಿಲ್ಲೆಯ ರಹಿಮಾನಸಾಬ ಕೆ. ನದಾಫ್ ಅವರು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಗಾಂಧೀಜಿಯವರ ಕುರಿತು ವಿವಿಧ ವಿಷಯಗಳನ್ನು ಆಧರಿಸಿ ಪ್ರೌಢಶಾಲೆ, ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ವಿಭಾಗಗಳಲ್ಲಿ ಜಿಲ್ಲಾ ಹಾಗೂ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು. ಜಿಲ್ಲಾ ಮಟ್ಟದಲ್ಲಿ ವಿವಿಧ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳ ಪ್ರಬಂಧಗಳನ್ನು ರಾಜ್ಯಮಟ್ಟದ ಸ್ಪರ್ಧೆಗೆ ಕಳುಹಿಸಲಾಗಿತ್ತು.

ಅದರಂತೆ ಪದವಿ ಹಾಗೂ ಸ್ನಾತಕೋತ್ತರ ವಿಭಾಗದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ರಹಿಮಾನಸಾಬ ಕೆ. ನದಾಫ್ ಪ್ರಥಮ ಸ್ಥಾನ ಗಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ವಿದ್ಯಾರ್ಥಿ ದ್ವಿತೀಯ ಹಾಗೂ ಬೆಳಗಾವಿ ಜಿಲ್ಲೆಯ ವಿದ್ಯಾರ್ಥಿ ತೃತೀಯ ಸ್ಥಾನ ಪಡೆದಿದ್ದಾರೆ.
ರಾಜ್ಯಮಟ್ಟದಲ್ಲಿ ಆಯ್ಕೆಯಾದವರಿಗೆ ಪ್ರಥಮ ಬಹುಮಾನವಾಗಿ ₹31 ಸಾವಿರ, ದ್ವಿತೀಯ ₹21 ಸಾವಿರ ಹಾಗೂ ತೃತೀಯ ₹11 ಸಾವಿರ ನಗದು ಪುರಸ್ಕಾರ ನೀಡಲಾಗುವುದು ಎಂದು ಜಿಲ್ಲಾ ವಾರ್ತಾಧಿಕಾರಿ ಕಸ್ತೂರಿ ಪಾಟೀಲ ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!