ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗಾಂಧೀಜಿಯವರ ಹೋರಾಟ ನಮಗೆಲ್ಲಾ ಆದರ್ಶ : ಬಸವರಾಜ ಬಾದರ್ಲಿ

ಸಿಂಧನೂರು: ಇಡೀ ವಿಶ್ವದಲ್ಲಿ ಸತ್ಯ ಮತ್ತು ಅಹಿಂಸೆಯಲ್ಲಿ ಅಪಾರ ನಂಬಿಕೆಯನ್ನು ಇಟ್ಟುಕೊಂಡು ಹೋರಾಡಿದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ನಮಗೆಲ್ಲಾ ಆದರ್ಶವಾಗಿದ್ದಾರೆ ಎಂದು ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಬಸವರಾಜ ಬಾದರ್ಲಿ ಹೇಳಿದರು.
ಅವರು ಶುಕ್ರವಾರದಂದು ನಗರದ ಪಿ.ಎಂ.ಶ್ರೀ ಆದರ್ಶ ವಿದ್ಯಾಲಯ ಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀ ಮತ್ತು ಲಾಲ್ ಬಹದ್ದೂರು ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಗಾಂಧೀಜಿಯವರ ಸತ್ಯ ಮತ್ತು ಅಹಿಂಸೆಯ ತತ್ವಗಳು ಇಡೀ ಜಗತ್ತಿಗೇ ದಾರಿದೀಪವಾಗಿವೆ. ಸ್ವಾತಂತ್ರ್ಯ ಚಳುವಳಿಯಲ್ಲಿ ಅವರ ಕರೆಗೆ ಇಡೀ ದೇಶವೇ ಎಚ್ಚರಗೊಳ್ಳುತ್ತಿತ್ತು. ಗಾಂಧೀಜಿಯವರ ಅಹಿಂಸಾ ಹೋರಾಟ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಮುಖ ಪಾತ್ರವಹಿಸಿದೆ. ವಿದ್ಯಾರ್ಥಿಗಳು, ಯುವಕರು ಇಂತಹ ಮಹನೀಯರ ಆದರ್ಶ ಗುಣಗಳನ್ನು ಇಟ್ಟುಕೊಂಡು ನಮ್ಮ ದೇಶವನ್ನು ಸರಿದಾರಿಯಲ್ಲಿ ನಡೆಸಬೇಕು ಎಂದು ಹೇಳಿದರು.
ಪ್ರಭಾರಿ ಮುಖ್ಯೋಪಾಧ್ಯಾಯರಾದ ವೀರೇಶ ಗೋನವಾರ ಅವರು ಮಾತನಾಡುತ್ತಾ, ವಿಶ್ವಸಂಸ್ಥೆ ಸೇರಿದಂತೆ ಜಗತ್ತಿನಾದ್ಯಂತ ಅಕ್ಟೋಬರ್-2ನ್ನು ‘ಅಂತಾರಾಷ್ಟ್ರೀಯ ಅಹಿಂಸಾ ದಿನ’ವಾಗಿ ಆಚರಿಸಲಾಗುತ್ತಿದ್ದು, ಜಾಗತಿಕ ಶಾಂತಿ ಮತ್ತು ಸಹಬಾಳ್ವೆಯ ಸಂಕೇತವಾಗಿದೆ. ಗಾಂಧೀಜಿಯವರ ಆತ್ಮ ಚರಿತ್ರೆಯನ್ನು ಓದಿಕೊಂಡು ನಮ್ಮ ಜೀವನವನ್ನು ಬದಲಾವಣೆ ಮಾಡಿಕೊಳ್ಳಬೇಕು. ಗಾಂಧೀಜಿಯವರ ಆದರ್ಶಗಳು, ಅವರ ಜೀವನ ಮತ್ತು ಹೋರಾಟದ ಪ್ರಸ್ತುತತೆಯನ್ನು ಇಂದಿನ ಯುವ ಪೀಳಿಗೆ ಅರ್ಥ ಮಾಡಿಕೊಳ್ಳಬೇಕು. ಆಶ್ರಮದಲ್ಲಿ ಸ್ವಚ್ಛತೆ ಮತ್ತು ಕುಷ್ಠ ರೋಗಿಗಳ ಆರೈಕೆಗೆ ಗಾಂಧೀಜಿಯವರು ಮೊದಲ ಆದ್ಯತೆಯನ್ನು ನೀಡಿದ್ದರು ಎನ್ನುವುದು ಅವರ ಜೀವನ ಚರಿತ್ರೆಯಿಂದ ತಿಳಿದು ಬರುತ್ತದೆ ಎಂದರು.
ಕನ್ನಡ ಭಾಷಾ ಶಿಕ್ಷಕರಾದ ಭೀಮರೆಡ್ಡಿ ಅವರು ಮಾತನಾಡುತ್ತಾ, ಸ್ವಾತಂತ್ರ್ಯದ ಚಳುವಳಿಯಲ್ಲಿ ಗಾಂಧಿಜಿಯವರು ಅತ್ಯಂತ ಪ್ರಮುಖವಾದ ಪಾತ್ರವನ್ನು ವಹಿಸಿದ್ದಾರೆ. ಜೊತೆಗೆ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅತ್ಯಂತ ಪ್ರಾಮಾಣಿಕ ರಾಜಕಾರಣಿಯಾಗಿ ಹೊರಹೊಮ್ಮಿದ್ದಾರೆ. ಗಾಂಧೀಜಿ ಮತ್ತು ಶಾಸ್ತ್ರಜಿ ಅವರ ಜೀವನದ ವಿವಿಧ ದೃಷ್ಟಾಂತಗಳನ್ನು ಹೇಳಿದರು.
ಎಸ್ ಡಿ ಎಂ ಸಿ ಸದಸ್ಯರಾದ ಮಲ್ಲಿಕಾರ್ಜುನ ಹಿರೇಮಠ ಮಾತನಾಡುತ್ತಾ, ಗಾಂಧೀಜಿಯವರ ಜೀವನದ ಆದರ್ಶಗಳನ್ನು ಇಟ್ಟುಕೊಂಡು ನಮ್ಮ ಜೀವನವನ್ನು ಸಾರ್ಥಕ ಮಾಡಿಕೊಳ್ಳಬೇಕು. ಗುರುಗಳ ಬಗ್ಗೆ ಅಪಾರ ಗೌರವ, ನಂಬಿಕೆಯನ್ನು ಇಟ್ಟುಕೊಂಡಾಗ ಮಾತ್ರ ನಿಮ್ಮ ಜೀವನ ಉಜ್ವಲವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಗಜಲ್ ವಾಚನ:

ಇದೇ ಸಂದರ್ಭದಲ್ಲಿ ಗಾಂಧೀಜಿಯವರ ಕುರಿತು ಗಣಿತ ಶಿಕ್ಷಕರಾದ ಸಾವನ್ ಕೆ ಅವರು ‘ಗಾಂಧಿ ಅಲ್ಲದೆ ಇನ್ಯಾರು?’ ಎನ್ನುವ ಶೀರ್ಷಿಕೆ ತಮ್ಮ ಸ್ವರಚಿತ ಗಜಲ್ ಕವನ ವಾಚಿಸಿದರು.
ವೇದಿಕೆ ಮೇಲೆ ಎಸ್ ಡಿ ಎಂ ಸಿ ಸದಸ್ಯರಾದ ಮೌಲಾಸಾಬ್, ಶಿಕ್ಷಕರಾದ ಕೆ ಮಲ್ಲಪ್ಪ, ಬಸವರಾಜ ಆನೆಗುಂದಿ, ಮೌನೇಶಪ್ಪ, ಉಮೇಶ, ಜಡೇಶ, ಶಾರದಮ್ಮ, ಅಕ್ಕಮಹಾದೇವಿ ಸೇರಿದಂತೆ ಇತರರಿದ್ದರು
ಎಂಟನೇ ತರಗತಿಯ ವಿದ್ಯಾರ್ಥಿನಿಯರಾದ ಶ್ರೀರಕ್ಷಾ ಮತ್ತು ಭುವನೇಶ್ವರಿ ಮಾತನಾಡಿದರು.

ಸಾಮೂಹಿಕ ಭಜನೆ: ಗಾಂಧಿೀಜಿಯವರ ನೆಚ್ಚಿನ ‘ರಘುಪತಿ ರಾಘವ ರಾಜಾರಾಮ್’ ಎನ್ನುವ ಭಜನೆಯನ್ನು ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಸಾಮೂಹಿಕವಾಗಿ ಹಾಡಿದರು.

ಸ್ವಚ್ಛತಾ ಕಾರ್ಯಕ್ರಮ: ಗಾಂಧಿ ಜಯಂತಿಯ ಅಂಗವಾಗಿ ಶಾಲಾ ಆವರಣದಲ್ಲಿ ಮತ್ತು ಶಾಲಾ ಸುತ್ತಮುತ್ತ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಮಾಡಲಾಯಿತು. ಇದರಲ್ಲಿ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಭಾಗವಹಿಸಿದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!