ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣರವರ ನೇತೃತ್ವದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ

ಮಡಿಕೇರಿ: ಬೆಟ್ಟಗೇರಿಯ ಕಾರಗುಂದ ಭಾಗದ 15ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.
ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯವರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ನೇತೃತ್ವದಲ್ಲಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ ರವರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೌಕತ್ ಆಲೀ ರವರ, ವಲಯ ಕಾಂಗ್ರೆಸ್ ಅಧ್ಯಕ್ಷರು ಕೊಡಗನ ತೀರ್ಥ ಕುಮಾರ್ ರವರ ಹಾಗೂ ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರಾದ ಗೌರೀಶ್ ರೈ ರವರ ಸಮುಖದಲ್ಲಿ ಸೇರ್ಪಡೆಗೊಂಡರು.

ಎಲ್ಲರಿಗೂ ಪಕ್ಷದ ಧ್ವಜ ನೀಡಿ ಶಲ್ಯ ಹೊದಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಬರಮಾಡಿಕೊಂಡರು.
ಕಾಂಗ್ರೆಸ್ ಪಕ್ಷದ ಜನಪರ ಕಾಳಜಿ ಹಾಗೂ ಶಾಸಕ ಪೊನ್ನಣ್ಣನವರು ನಾಡಿನ ಹಾಗೂ ಜನತೆಯ ಅಭಿವೃದ್ಧಿಗೆ ತೋರಿಸುತ್ತಿರುವ ವಿಶೇಷ ಕಾಳಜಿ ಹಾಗೂ ಆಸಕ್ತಿಯನ್ನು ಮನಗಂಡು ಅವರಿಗೆ ಬೆಂಬಲವಾಗಿ ನಿಲ್ಲಲು ತಾವುಗಳು ನಿರ್ಧರಿಸಿದ್ದು, ಮುಂದಿನ ದಿನಗಳಲ್ಲಿ ಶಾಸಕರೊಂದಿಗೆ ಕೈಜೋಡಿಸಿಕೊಂಡು ಪಕ್ಷ ಹಾಗೂ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶಾಸಕರಿಗೆ ಶ್ರಮಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು ಅಬ್ದುಲ್ ರೆಹಮಾನ್, ಕೆಡಿಪಿ ಸದಸ್ಯರು ಬಾಚಮಾಂಡ ಲವ ಚಿಣ್ಣಪ್ಪ, ತಾಲೂಕು ಗ್ಯಾರಂಟಿ ಸದಸ್ಯರು ಸಿರಾಜ್ ಪರವಂಡ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!