ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಯವರ ಜಯಂತಿ ಆಚರಿಸಿದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ

ವಿರಾಜಪೇಟೆ: ಗಾಂಧಿ ಜಯಂತಿ ಹಾಗೂ ಮಾನ್ಯ ಲಾಲ್ ಬಹದ್ದೂರ್ ಶಾಸ್ತ್ರಿಗಳ ಜಯಂತಿಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯವರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣರವರು ಪಕ್ಷದ ಮುಖಂಡರು ಹಾಗೂ ಜನಸಾಮಾನ್ಯರೊಂದಿಗೆ ಆಚರಿಸಿದರು.

ವಿರಾಜಪೇಟೆಯ ಗೃಹ ಕಚೇರಿಯಲ್ಲಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಮಾನ್ಯ ಶಾಸಕರು, ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹಾತ್ಮಾ ಗಾಂಧೀಜಿಯವರ ಪಾತ್ರ ಹಾಗೂ ಮಾರ್ಗದರ್ಶನ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಕೆಚ್ಚೆದೆಯ ಹೋರಾಟದ ಬಗ್ಗೆ ಸ್ಮರಿಸಿದರು. ಮಹಾತ್ಮರ ತತ್ವಗಳನ್ನು ನಾವು ಆದರ್ಶವಾಗಿ ತೆಗೆದುಕೊಂಡು ಅದನ್ನು ಪಾಲಿಸಿದರೆ ಅವರ ಪ್ರಯತ್ನಕ್ಕೆ ಸಾರ್ಥಕತೆ ದೊರಕಿದಂತಾಗುತ್ತದೆ ಹಾಗೂ ನಮಗೆ ಹಾಗೂ ದೇಶಕ್ಕೆ ಒಳ್ಳೇದು ಆಗುತ್ತದೆ ಎಂದು ತಿಳಿಸಿದರು. ಹಾಗೂ ಇದೇ ಸಂದರ್ಭದಲ್ಲಿ ಸ್ವಚ್ಛತಾ ಅಭಿಯಾನದಲ್ಲೂ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಉಪಾಧ್ಯಕ್ಷರು ಜೋಕಿಮ್, ತಾಲೂಕು, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ವಿರಾಜಪೇಟೆ ಯುವ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಕ್ಷಿತ್ ಚಂಗಪ್ಪ ವಿರಾಜಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಬೀರ್, ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಹಂಸ ಕೊಡಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!