ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರೈಫಲ್ ಶೂಟಿಂಗ್‌ನಲ್ಲಿ ಮೆಟ್ರಿ ಗ್ರಾಮದ ಚಿನ್ನರಾಜ ಕಮಾಲ್: ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹತೆ

ಬಳ್ಳಾರಿ / ಕಂಪ್ಲಿ : ಕಲಬುರಗಿಯಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಪ್ರಸಕ್ತ ಸಾಲಿನ ಪ್ರತಿಷ್ಠಿತ ಕಲಬುರಗಿ ವಿಭಾಗ ಮಟ್ಟದ ದಸರಾ ಸಿಎಂ ಕಪ್-2026 ಕ್ರೀಡಾಕೂಟದಲ್ಲಿ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ಪ್ರತಿಭಾನ್ವಿತ ಕ್ರೀಡಾಪಟು ಸಿ.ಡಿ. ಚಿನ್ನರಾಜ ಅವರು ಅಮೋಘ ಸಾಧನೆ ಮಾಡಿದ್ದಾರೆ. ಹಿರಿಯರ ವಿಭಾಗದ 10 ಮೀಟರ್ ಏರ್ ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ಅತ್ಯುತ್ತಮ ಗುರಿ ಪ್ರದರ್ಶಿಸಿದ ಅವರು ಪ್ರಥಮ ಸ್ಥಾನ (ಚಿನ್ನದ ಪದಕ) ಗಳಿಸುವುದರೊಂದಿಗೆ ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ.
ವಿಭಾಗ ಮಟ್ಟದ ತೀವ್ರ ಪೈಪೋಟಿಯಿಂದ ಕೂಡಿದ್ದ ಈ ಸ್ಪರ್ಧೆಯಲ್ಲಿ ಆರಂಭದಿಂದಲೂ ಸ್ಥಿರತೆ ಕಾಯ್ದುಕೊಂಡ ಚಿನ್ನರಾಜ, ಅಂತಿಮ ಸುತ್ತಿನಲ್ಲಿ ಅತ್ಯಂತ ನಿಖರವಾದ ಗುರಿ ಇಟ್ಟು ಅಗ್ರಸ್ಥಾನವನ್ನು ತಮ್ಮದಾಗಿಸಿಕೊಂಡರು. ಗ್ರಾಮೀಣ ಭಾಗದಲ್ಲಿ ಸೂಕ್ತ ಸೌಲಭ್ಯಗಳ ಕೊರತೆಯಿದ್ದರೂ, ತಮ್ಮ ಕಠಿಣ ಪರಿಶ್ರಮ ಹಾಗೂ ನಿರಂತರ ಅಭ್ಯಾಸದಿಂದ ಈ ಮೈಲಿಗಲ್ಲು ತಲುಪಿರುವ ಅವರು ಮೆಟ್ರಿ ಗ್ರಾಮ, ಕಂಪ್ಲಿ ತಾಲೂಕು ಹಾಗೂ ಬಳ್ಳಾರಿ ಜಿಲ್ಲೆಯ ಕೀರ್ತಿಯನ್ನು ರಾಜ್ಯ ಮಟ್ಟದಲ್ಲಿ ಬೆಳಗುವಂತೆ ಮಾಡಿದ್ದಾರೆ.

ಚಿನ್ನರಾಜ ಅವರ ಈ ಪ್ರಶಂಸನೀಯ ಸಾಧನೆಯ ಸುದ್ದಿ ತಿಳಿಯುತ್ತಿದ್ದಂತೆ ಮೆಟ್ರಿ ಗ್ರಾಮದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಕ್ರೀಡಾಪಟುವಿನ ಸಾಹಸಕ್ಕೆ ಗ್ರಾಮದ ಹಿರಿಯರು, ಪ್ರಮುಖ ಮುಖಂಡರು, ಯುವಕರು ಹಾಗೂ ಕ್ರೀಡಾಭಿಮಾನಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಮುಂಬರುವ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲೂ ಚಿನ್ನರಾಜ ಅವರು ಇದೇ ರೀತಿಯ ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಹೆಮ್ಮೆ ತರಲಿ ಎಂದು ಸಾರ್ವಜನಿಕರು ಮತ್ತು ಸ್ನೇಹಿತರ ಬಳಗ ಸಿಹಿ ಹಂಚಿ ಶುಭ ಹಾರೈಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!