ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಮುನ್ನೆಚ್ಚರಿಕೆ ಅಗತ್ಯ

ವಿಶ್ವ ಹೃದಯ ದಿನಾಚರಣೆ: 88 ಮಂದಿಗೆ ಉಚಿತ ಬಿಪಿ, ಮಧುಮೇಹ ತಪಾಸಣೆ

ಸಿರುಗುಪ್ಪ : ಬದಲಾದ ಜೀವನಶೈಲಿ, ದೈಹಿಕ ಚಟುವಟಿಕೆಗಳ ಕೊರತೆ, ಅಸಮರ್ಪಕ ಆಹಾರ ಸೇವನೆ ಹಾಗೂ ಧೂಮಪಾನ, ಮದ್ಯಪಾನ ಸೇರಿದಂತೆ ವಿವಿಧ ವ್ಯಸನಗಳಿಂದ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಾಗುತ್ತಿದೆ. ಹೀಗಾಗಿ ಸಕಾಲದಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಾರ್ವಜನಿಕ ಆಸ್ಪತ್ರೆಯ ಕಣ್ಣಿನ ತಜ್ಞ ಶರಣಪ್ಪ ಸಲಹೆ ನೀಡಿದರು.

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಅಸಾಂಕ್ರಾಮಿಕ ರೋಗಗಳ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇಂದಿನ ಜೀವನಶೈಲಿಯಲ್ಲಿ ದೈಹಿಕ ಚಟುವಟಿಕೆ ಕಡಿಮೆಯಾಗಿದ್ದು, ಪೌಷ್ಟಿಕಾಂಶವಿಲ್ಲದ ಆಹಾರ, ಜಂಕ್ ಫುಡ್, ಧೂಮಪಾನ, ಮದ್ಯಪಾನ ಹಾಗೂ ಮಾದಕ ವಸ್ತುಗಳ ಸೇವನೆಯಂತಹ ಅಭ್ಯಾಸಗಳು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿವೆ.
ರಾಸಾಯನಿಕ ಬಣ್ಣ ಹೊಂದಿರುವ ಪಾನೀಯಗಳ ಅತಿಯಾದ ಸೇವನೆಯೂ ಆರೋಗ್ಯಕ್ಕೆ ಹಾನಿಕರವಾಗಬಹುದು. ಇಂತಹ ಜೀವನಶೈಲಿಯಿಂದ ಹೃದಯ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದ್ದು, ಲಕ್ಷಣಗಳನ್ನು ನಿರ್ಲಕ್ಷಿಸದೆ ಸೂಕ್ತ ಸಮಯದಲ್ಲಿ ವೈದ್ಯರನ್ನು ಸಂಪರ್ಕಿಸಬೇಕು ಎಂದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮೊಹಮ್ಮದ್ ಖಾಸಿಂ ಮಾತನಾಡಿ, 30 ವರ್ಷ ಮೇಲ್ಪಟ್ಟವರು ನಿಯಮಿತವಾಗಿ ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ ಮಾಡಿಸಿಕೊಳ್ಳಬೇಕು.
ಮೆಟ್ಟಿಲು ಏರುವಾಗ ಅತಿಯಾದ ಆಯಾಸ, ಎಡಗೈಯಲ್ಲಿ ಸೆಳೆತ ಅಥವಾ ಎದೆ ಭಾಗದಲ್ಲಿ ನೋವು ಕಾಣಿಸಿಕೊಂಡರೆ ನಿರ್ಲಕ್ಷಿಸದೆ ತಕ್ಷಣ ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕು. ಅಗತ್ಯವಿದ್ದಲ್ಲಿ ಇಸಿಜಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಆರೋಗ್ಯವಂತ ಹೃದಯಕ್ಕಾಗಿ ಪ್ರತಿದಿನ ಯೋಗ, ಧ್ಯಾನ ಹಾಗೂ ನಿಯಮಿತ ದೈಹಿಕ ಚಟುವಟಿಕೆ ರೂಢಿಸಿಕೊಳ್ಳುವುದರ ಜತೆಗೆ ಸಮತೋಲಿತ ಆಹಾರ ಸೇವನೆಗೆ ಆದ್ಯತೆ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆಯ ದಂತ ವೈದ್ಯ ಡಾ. ಪವನ್ ವರ್ಮ, ವೈದ್ಯರಾದ ಡಾ. ಶ್ರೀಹರಿ, ಡಾ. ಕಲಂದರ್, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಬಿಪಿಎಂ ಪ್ರಹ್ಲಾದ್, ಹಿರಿಯ ನಿರೀಕ್ಷಣಾಧಿಕಾರಿ ಭೀಮರೆಡ್ಡಿ, ಸಾಂಕ್ರಾಮಿಕ ರೋಗಶಾಸ್ತ್ರಜ್ಞ ನವೀನ್ ಕುಮಾರ್, ಎನ್‌ಸಿಡಿ ವಿಭಾಗದ ಆಪ್ತ ಸಮಾಲೋಚಕ ಮಲ್ಲೇಶಪ್ಪ ಸೇರಿದಂತೆ ಆರೋಗ್ಯ ಸಿಬ್ಬಂದಿ, ಸಾರ್ವಜನಿಕರು ಹಾಗೂ ಪತ್ರಿಕಾ ಮಾಧ್ಯಮದವರು ಉಪಸ್ಥಿತರಿದ್ದರು.

ಶಿಬಿರದಲ್ಲಿ ಸುಮಾರು 88 ಮಂದಿಗೆ ರಕ್ತದೊತ್ತಡ ಮತ್ತು ಮಧುಮೇಹದ ಉಚಿತ ತಪಾಸಣೆ ನಡೆಸಲಾಯಿತು.

ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!