ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿ: ‘ಸೇವಾ ಸೇತು’ ಶಿಬಿರದಲ್ಲಿ ಉಚಿತ ಸೋಲಾರ್ ರೂಫ್‌ಟಾಪ್ ನೋಂದಣಿ; ₹78 ಸಾವಿರದವರೆಗೆ ಸಬ್ಸಿಡಿ ಸೌಲಭ್ಯ

ಬಳ್ಳಾರಿ / ಕಂಪ್ಲಿ : ತಾಲೂಕಿನಾದ್ಯಂತ ದಿನಾಂಕ 05, 06 ಮತ್ತು 07 ರಂದು ಆಯೋಜಿಸಲಾಗಿರುವ ‘ಸೇವಾ ಸೇತು’ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಪಿ.ಎಂ. ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ” ಅಡಿಯಲ್ಲಿ ಸೋಲಾರ್ ರೂಫ್‌ಟಾಪ್ (ಮೇಲ್ಛಾವಣಿ ಸೌರ ವಿದ್ಯುತ್ ಘಟಕ) ಅಳವಡಿಕೆಗೆ ಸ್ಥಳದಲ್ಲೇ ನೋಂದಣಿ ಪ್ರಕ್ರಿಯೆ ಮತ್ತು ಮಾರ್ಗದರ್ಶನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜೆಸ್ಕಾಂ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮನೆಗಳ ಮೇಲ್ಛಾವಣಿಯ ಮೇಲೆ ಸೌರ ವಿದ್ಯುತ್ ಘಟಕ ಸ್ಥಾಪಿಸುವುದರಿಂದ ಮಾಸಿಕ ವಿದ್ಯುತ್ ಬಿಲ್ ಗಣನೀಯವಾಗಿ ಕಡಿತಗೊಂಡು, ಬಹುತೇಕ ಶೂನ್ಯ ಬಿಲ್ ಪಡೆಯುವ ಅವಕಾಶವಿರುತ್ತದೆ. ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ (DBT) ಸಬ್ಸಿಡಿ ಜಮೆಯಾಗಲಿದೆ.
1 ಕಿಲೋವ್ಯಾಟ್ ಘಟಕಕ್ಕೆ ₹30,000, 2 ಕಿಲೋವ್ಯಾಟ್‌ಗೆ ₹60,000 ಹಾಗೂ 3 ಕಿಲೋವ್ಯಾಟ್ ಅಥವಾ ಅದಕ್ಕಿಂತ ಹೆಚ್ಚಿನ ಘಟಕಕ್ಕೆ ಗರಿಷ್ಠ ₹78,000 ವರೆಗೆ ಸಬ್ಸಿಡಿ ಸಿಗಲಿದೆ.
ಉತ್ಪಾದನೆಯಾದ ವಿದ್ಯುತ್ ಸ್ವಂತ ಬಳಕೆಯ ನಂತರ ಉಳಿದಲ್ಲಿ, ಅದನ್ನು ನೆಟ್ ಮೀಟರ್ ಮೂಲಕ ಗ್ರಿಡ್‌ಗೆ ಸರಬರಾಜು ಮಾಡಿ ಹೆಚ್ಚುವರಿ ಆದಾಯವನ್ನೂ ಗಳಿಸಬಹುದು. ಸೋಲಾರ್ ಘಟಕ ಅಳವಡಿಕೆಗೆ ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವೂ ಲಭ್ಯವಿದೆ.
ನೋಂದಣಿಗೆ ಇತ್ತೀಚಿನ ವಿದ್ಯುತ್ ಬಿಲ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಹಾಗೂ ಮೇಲ್ಛಾವಣಿಯ ಹಕ್ಕಿನ ದಾಖಲೆ/ಕಂದಾಯ ರಸೀದಿಯನ್ನು ತರಬೇಕು. ಕಂಪ್ಲಿ ಉಪ-ವಿಭಾಗದ ಸಮಸ್ತ ವಿದ್ಯುತ್ ಗ್ರಾಹಕರು ಈ 3 ದಿನಗಳ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 9449597416 ಅನ್ನು ಸಂಪರ್ಕಿಸಬಹುದು ಎಂದು ಜೆಸ್ಕಾಂ ಕೋರಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!