ಮಾಲೂರು ಕ್ಷೇತ್ರದ ಜನಪ್ರಿಯ ನಾಯಕರು, ಹಿರಿಯ ರಾಜಕಾರಣಿ ಹಾಗೂ ರಾಜ್ಯ ಸರ್ಕಾರದ ಮಾಜಿ ಸಚಿವರಾದ ಶ್ರೀ ಎಸ್.ಎನ್. ಕೃಷ್ಣಯ್ಯ ಶೆಟ್ಟಿ ಅವರ ಜನ್ಮದಿನದ ಸಂಭ್ರಮವನ್ನು ಅವರ ಅಭಿಮಾನಿಗಳು, ಹಿತೈಷಿಗಳು ಹಾಗೂ ಪಕ್ಷದ ಕಾರ್ಯಕರ್ತರು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಿದರು.
ಹುಟ್ಟುಹಬ್ಬದ ಅಂಗವಾಗಿ ಮಾಲೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಭಿಮಾನಿಗಳು ವಿವಿಧ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆ. ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ, ಮಾಲೂರು ಮಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಬಡವರಿಗೆ ಅನ್ನದಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಬಗ್ಗೆ ಮಾತನಾಡಿದ ಮಾಲೂರು ನಗರಸಭಾ ಮಾಜಿ ಸದಸ್ಯರಾದ ಭಾನುತೇಜಾ ರವರು ಮಾಲೂರು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿ, ಕ್ಷೇತ್ರದ ಪ್ರತಿ ಹಳ್ಳಿ ಹಾಗೂ ಪ್ರತಿಯೊಬ್ಬ ಕಾರ್ಯಕರ್ತನ ಕಷ್ಟ-ಸುಖಗಳಿಗೆ ಸದಾ ಸ್ಪಂದಿಸುತ್ತ ಬಂದಿರುವ ಜನಪ್ರಿಯ ನಾಯಕರು, ಮಾಜಿ ಸಚಿವರಾದ ಮಾನ್ಯ ಎಸ್.ಎನ್. ಕೃಷ್ಣಯ್ಯ ಶೆಟ್ಟಿ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಅವರು ಇನ್ನು ಹೆಚ್ಚಿನ ಆರೋಗ್ಯ ಹಾಗೂ ದೀರ್ಘಾಯುಷ್ಯದೊಂದಿಗೆ ಸಾರ್ವಜನಿಕ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ.” ಎಂದರು.
ಮಾಜಿ ಸಚಿವರ ಹುಟ್ಟುಹಬ್ಬದ ನಿಮಿತ್ತ ರಾಜ್ಯದ ವಿವಿಧ ಗಣ್ಯರು, ರಾಜಕೀಯ ಧುರೀಣರು, ವಿವಿಧ ಮಠಾಧೀಶರು ಹಾಗೂ ಹತ್ತಾರು ಸಾವಿರ ಸಂಖ್ಯೆಯಲ್ಲಿ ಆಗಮಿಸಿರುವ ಅಭಿಮಾನಿಗಳು ಶ್ರೀ ಕೃಷ್ಣಯ್ಯ ಶೆಟ್ಟಿ ಅವರಿಗೆ ದೂರವಾಣಿ ಮೂಲಕ ಹಾಗೂ ನೇರವಾಗಿ ಭೇಟಿ ಮಾಡಿ ಶುಭ ಹಾರೈಸಿದ್ದಾರೆ.
- ಕರುನಾಡ ಕಂದ ಸುದ್ದಿ




















