
ಮೈಸೂರು ಜಿಲ್ಲೆಯ ನಂಜನಗೂಡು ನಗರಸಭಾ ಕಾರ್ಯಾಲಯದ ವತಿಯಿಂದ ಪಟ್ಟಣದಲ್ಲಿ ಪೌರಕಾರ್ಮಿಕರ ದಿನಾಚರಣೆಯನ್ನು, ಹಬ್ಬದ ರೀತಿ ಅದ್ದೂರಿಯಾಗಿ ಆಚರಿಸಲಾಯಿತು. ಮೊದಲಿಗೆ ವೇದಿಕೆಯಲ್ಲಿದ್ದ ಎಲ್ಲಾ ಗಣ್ಯರು ಜ್ಯೋತಿ ಬೆಳಗಿಸುವುದರ ಮೂಲಕ ಸಮಾರಂಭವನ್ನು ಉದ್ಘಾಟಿಸಿದರು. ನಂತರ ಮಹಾತ್ಮ ಗಾಂಧೀಜಿ ಅಂಬೇಡ್ಕರ್ ಭಾವಚಿತ್ರಕ್ಕೆ ಭಕ್ತಿ ಭಾವಗಳಿಂದ ಪುಷ್ಪ ನಮನವನ್ನು ಸಲ್ಲಿಸಿದರು. ನಂತರ ನಗರಸಭೆ ಆಯುಕ್ತರಾದ ಬಸವರಾಜುರವರು ಪ್ರಾಥಮಿಕ ನುಡಿಗಳನ್ನಾಡಿ ಪೌರ ಕಾರ್ಮಿಕರನ್ನು ಸ್ಮರಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ದಿನನಿತ್ಯ ಪಟ್ಟಣವನ್ನು ಸ್ವಚ್ಛಗೊಳಿಸುವುದರಲ್ಲಿ ನಿರತರಾಗಿರುತ್ತಾರೆ. ಅವರ ಕಾರ್ಮಿಕ ಜಯಂತಿಗೆ ಶುಭವಾಗಲಿ ಜೈ ಎಂದರು. ನಂತರ ಮುಖ್ಯ ಭಾಷಣಕಾರರಾಗಿ ತಾಲೂಕಿನ ಜನಪ್ರಿಯ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ಅರ್ಥಪೂರ್ಣವಾಗಿ ಮಾತನಾಡುತ್ತಾ ನಂಜನಗೂಡು ನಗರವನ್ನು ಇಡೀ ದೇಶವನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ಪೌರಕಾರ್ಮಿಕರು ನಿರತರಾಗಿರುತ್ತಾರೆ. ಅವರನ್ನು ಸ್ಮರಿಸಿ ನೆನಪಿಸಿಕೊಳ್ಳುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ. ಅವರಿಗೆ ಅಪಾರ ಗೌರವವನ್ನು ನೀಡಬೇಕೆಂದರು. ಅವರಿಗೆ ಶಿಕ್ಷಣ ಉದ್ಯೋಗ ಕಲ್ಪಿಸುವುದರಲ್ಲಿ ಸರಕಾರವು ಯಶಸ್ವಿಯಾಗಿದೆ ಎಂದರು. ಕ್ರೀಡಾಕೂಟದಲ್ಲಿ ವಿಜೇತರಾದ ಪೌರ ಕಾರ್ಮಿಕರಿಗೆ ಬಹುಮಾನವನ್ನು ಸಭೆಯಲ್ಲಿ ನೀಡಲಾಯಿತು. ಇದೇ ಸಂದರ್ಭದಲ್ಲಿ 120 ಪೌರಮ ಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭದಲ್ಲಿ ಕಳಲೆ ಕೇಶವಮೂರ್ತಿ, ನಗರಸಭಾಧ್ಯಕ್ಷರಾದ ಶ್ರೀಕಾಂತ್ ಸೇರಿದಂತೆ ಮೊದಲಾದ ಹಲವಾರು ಗಣ್ಯರು ಹಾಜರಿದ್ದರು.
- ಕರುನಾಡ ಕಂದ ಸುದ್ದಿ




















