ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಿಜೆಪಿ ಮುಖಂಡರ ಮೇಲೆ ಪೊಲೀಸ್ ದೌರ್ಜನ್ಯ; ಅಧಿಕಾರಿಗಳ ಅಮಾನತಿಗೆ ವೈ.ಎಂ.ಸತೀಶ್ ಆಗ್ರಹ

ಬಳ್ಳಾರಿ: ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿರುವ ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ್, ದೌರ್ಜನ್ಯಕ್ಕೆ ಕಾರಣರಾದ ಪೊಲೀಸ್ ಅಧಿಕಾರಿಗಳನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಹಾಗೂ ಎಸ್‌ಐಆರ್ ಪ್ರಕರಣಗಳಲ್ಲಿ ನೇರವಾಗಿ ದೂರು ದಾಖಲಿಸಲು ಪೊಲೀಸರಿಗೆ ಕಾನೂನಿನಲ್ಲಿ ಅವಕಾಶವಿಲ್ಲ. ಆದಾಗ್ಯೂ, ಪೊಲೀಸರು ಆಡಳಿತ ಪಕ್ಷದ ಒತ್ತಡಕ್ಕೆ ಮಣಿದು ಬಿಜೆಪಿ ಕಾರ್ಯಕರ್ತರ ಮೇಲೆ ಕಾನೂನು ಬಾಹಿರವಾಗಿ ದೂರು ದಾಖಲಿಸಿದ್ದಾರೆ. ನಾನು ಎಂಎಲ್‌ಸಿ ಆಗಿದ್ದರೂ ನನ್ನ ಮೇಲೆಯೇ ನಕಲಿ ಕೇಸು ದಾಖಲಿಸಲಾಗಿದೆ. ಈ ಬಗ್ಗೆ ಸದನದಲ್ಲಿ ಹೋರಾಟ ನಡೆಸಿದರೂ ನ್ಯಾಯ ಸಿಕ್ಕಿಲ್ಲ ಎಂದರೆ ಇನ್ನು ಸಾಮಾನ್ಯ ಜನರ ಪಾಡೇನು?” ಎಂದು ಪ್ರಶ್ನಿಸಿದರು.
“ನಿನ್ನೆ ನಡೆದ ಪ್ರತಿಭಟನೆಯಲ್ಲಿ ನಮ್ಮ ಕಾರ್ಯಕರ್ತರನ್ನು ಮನಬಂದಂತೆ ಎಳೆದಾಡಿ ಗಾಯಗೊಳಿಸಿರುವ ಬ್ರೂಸ್ ಪೇಟೆ ಹಾಗೂ ಎಪಿಎಂಸಿ ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ತಕ್ಷಣವೇ ಅಮಾನತು ಮಾಡಬೇಕು. ಪೊಲೀಸರು ಕೇವಲ ಸುಳ್ಳು ಕೇಸು ದಾಖಲಿಸುವುದನ್ನೇ ತಮ್ಮ ಕಾಯಕ ಮಾಡಿಕೊಂಡಿದ್ದಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಗಾಲಿ ಸೋಮಶೇಖರ ರೆಡ್ಡಿ ಆರೋಪ
ನಗರದ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಮಾತನಾಡಿ, ” ನಿನ್ನೆಯ ಪ್ರತಿಭಟನೆ ವೇಳೆ ಪೊಲೀಸರು ರಾಜಕೀಯ ಒತ್ತಡಕ್ಕೆ ಒಳಗಾಗಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಅನಿಲ್ ನಾಯ್ಡು ಮತ್ತು ಮುಖಂಡ ಎರಗುಡಿ ಮಲ್ಲಿ ಅವರನ್ನು ಗುರಿಯಾಗಿಸಿಕೊಂಡು ಎಳೆದಾಡಿದ್ದಾರೆ. ಪೊಲೀಸರ ಈ ದೌರ್ಜನ್ಯದಿಂದಾಗಿ ಜಿಲ್ಲಾ ಅಧ್ಯಕ್ಷರ ಕೈ ಫ್ರಾಕ್ಚರ್ ಆಗಿದೆ. ಈ ದೌರ್ಜನ್ಯದಲ್ಲಿ ಓರ್ವ ಎಎಸ್‌ಪಿ ಹಾಗೂ ಇಬ್ಬರು ಸಿಪಿಐಗಳು ಶಾಮೀಲಾಗಿದ್ದಾರೆ ” ಎಂದು ಆರೋಪಿಸಿದರು.
ಪಾಲಿಕೆ ಆಯುಕ್ತ ಮಂಜುನಾಥ್ ಅವರು ನೀಡಿದ ತಪ್ಪು ಮಾಹಿತಿಯೇ ಇದಕ್ಕೆ ಕಾರಣ ಎಂದು ದೂರಿದ ಅವರು, “ನಾವು ಫಾರಂ 7 ತುಂಬಿ ಕೊಟ್ಟಿಲ್ಲ, ಕೇವಲ ವಿವರ ನೀಡಿದ್ದೇವಷ್ಟೇ. ನಮಗೆ ತಪ್ಪು ಮಾಹಿತಿ ನೀಡಿದ ಆಯುಕ್ತರ ಮೇಲೂ ಕೇಸು ದಾಖಲಿಸಬೇಕು. ಈ ಇಡೀ ಪ್ರಕರಣದ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಮತ್ತು ನ್ಯಾಯಾಲಯದಲ್ಲಿ ಖಾಸಗಿ ಮೊಕದ್ದಮೆ ಹೂಡಲು ಚಿಂತನೆ ನಡೆಸಲಾಗಿದೆ” ಎಂದರು.
ಸಿ.ಎಂ. ವಿರುದ್ಧ ಸಣ್ಣ ಪಕ್ಕೀರಪ್ಪ ವಾಗ್ದಾಳಿ
ಮಾಜಿ ಸಂಸದ ಸಣ್ಣ ಪಕ್ಕೀರಪ್ಪ ಮಾತನಾಡಿ, “ಪೊಲೀಸರ ಈ ದೌರ್ಜನ್ಯಕ್ಕೆ ರಾಜ್ಯದ ಮುಖ್ಯಮಂತ್ರಿಗಳೇ ನೇರ ಕಾರಣ. ರಾಜ್ಯದಲ್ಲಿ 70 ರಿಂದ 80 ಕಾಂಗ್ರೆಸ್ ಶಾಸಕರು ಮುಂಬರುವ ಚುನಾವಣೆಯಲ್ಲಿ ಸೋಲುತ್ತಾರೆಂಬ ಗುಪ್ತಚರ ವರದಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರ ಹತಾಶೆಗೊಂಡು ಈ ರೀತಿ ಮಾಡುತ್ತಿದೆ. ಮತದಾರರ ಹೆಸರನ್ನು ಡಿಲೀಟ್ ಮಾಡುವ ಹಕ್ಕು ಬಿಜೆಪಿಗೆ ಇಲ್ಲ” ಎಂದು ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಅನಿಲ್ ನಾಯ್ಡು, ಪ್ರಮುಖ ಮುಖಂಡರಾದ ಕೆ.ಎ.ರಾಮಲಿಂಗಪ್ಪ, ಸಾಧನಾ ಹಿರೇಮಠ, ಎಸ್.ಮಲ್ಲನಗೌಡ, ರವಿಕುಮಾರ್, ರಘು ಮತ್ತಿತರರು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!