ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಾಟಕ ಸಾಮಾಜಿಕ ಮೌಲ್ಯಗಳನ್ನು ಜೀವಂತವಾಗಿಡುವ ಶಕ್ತಿಯುತ ಮಾಧ್ಯಮ: ದೊಡ್ಡನಗೌಡ ಜಿ. ಪಾಟೀಲ

ಇಳಕಲ್ಲ: ನಗರದಲ್ಲಿ ನಾಲತ್ತವಾಡದ ಖ್ಯಾತ ನಾಟ್ಯಸಂಘದ ವತಿಯಿಂದ ನಡೆಯುತ್ತಿರುವ ನಾಟಕ ಪ್ರದರ್ಶನಕ್ಕೆ ಹುನಗುಂದ ಮತಕ್ಷೇತ್ರದ ಮಾಜಿ ಶಾಸಕ ದೊಡ್ಡನಗೌಡ ಜಿ. ಪಾಟೀಲ ಅವರು ಭೇಟಿ ನೀಡಿ ನಾಟಕ ವೀಕ್ಷಿಸಿದರು.
ನಾಟಕ ಪ್ರದರ್ಶನದ ಬಳಿಕ ಮಾತನಾಡಿದ ಅವರು, ರಂಗಭೂಮಿ ಕಲಾವಿದರ ಜೀವನ ಸವಾಲುಗಳಿಂದ ಕೂಡಿದ್ದು, ಅವರ ಪರಿಶ್ರಮ ಹಾಗೂ ಕಲಾ ಸೇವೆಯನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದರು.
ನಾಟಕ ಕೇವಲ ಮನರಂಜನೆಯ ಮಾಧ್ಯಮವಲ್ಲ. ಅದು ನಮ್ಮ ಗ್ರಾಮೀಣ ಸಂಸ್ಕೃತಿ, ಪರಂಪರೆ ಹಾಗೂ ಸಾಮಾಜಿಕ ಮೌಲ್ಯಗಳನ್ನು ಜೀವಂತವಾಗಿಡುವ ಶಕ್ತಿಯುತ ಮಾಧ್ಯಮವಾಗಿದೆ ಎಂದು ಅವರು ಹೇಳಿದರು.
ರಂಗಭೂಮಿ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಕಲಾವಿದರು ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಆದ್ದರಿಂದ ಕ್ಷೇತ್ರದ ಸಾರ್ವಜನಿಕರು ಹಾಗೂ ಕಲಾಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ನಾಟಕಗಳನ್ನು ವೀಕ್ಷಿಸಿ ಕಲಾವಿದರಿಗೆ ಪ್ರೋತ್ಸಾಹ ಮತ್ತು ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.
ಖ್ಯಾತ ಹಾಸ್ಯ ಕಲಾವಿದ ಹಾಗೂ ನಾಟಕ ಕಂಪನಿಯ ತಾ. ಸಿದ್ದು ನಾಲತ್ತವಾಡ ಅವರು ಮಾಜಿ ಶಾಸಕರನ್ನು ಆತ್ಮೀಯವಾಗಿ ಸನ್ಮಾನಿಸಿದರು. ಇದೇ ವೇಳೆ ನಾಟ್ಯಸಂಘದ ಕಾರ್ಯಚಟುವಟಿಕೆಗಳು ಹಾಗೂ ಕಲಾವಿದರು ಎದುರಿಸುತ್ತಿರುವ ವಿವಿಧ ಸವಾಲುಗಳ ಕುರಿತು ಅವರಿಗೆ ವಿವರಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಅರವಿಂದ ಮಂಗಳೂರು, ಶ್ಯಾಮ್ ಕರವಾ ಹಾಗೂ ಚಂದ್ರಶೇಖರ ಏಕಬೋಟೆ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!