ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗಡಿನಾಡ ಕವಿಯ ಎಲೆ ಮರೆಯ ಸೇವೆ

ಶ್ರೀ ಯುತ ಬ್ಯಾಡನೂರು ವೀರಭದ್ರಪ್ಪ ಶಿವಶರಣ, ಎಸ್. ರವರು ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಬ್ಯಾಡನೂರು ಗ್ರಾಮದ ಬಡ ರೈತ ಕುಟುಂಬದ ಶ್ರೀ ಮತಿ ಶ್ರೀ ಮಲ್ಲಮ್ಮ ಮತ್ತು ಶ್ರೀ ಸದಾಶಿವಪ್ಪ ದಂಪತಿಗಳ ಪುತ್ರರು.
ಬಡತನದ ಕಾರಣದಿಂದ ಹೆಚ್ಚಿನ ವಿದ್ಯಾಭ್ಯಾಸ ಮಾಡಲಾಗದೇ ಪಿ,
ಯು, ಸಿ ಯಲ್ಲಿ ಅನುತ್ತೀರ್ಣಗೊಂಡು ನಂತರ ಐ,ಟಿ,ಐ ವಿಭಾಗದಲ್ಲಿ ಎಲೆಕ್ಟ್ರಿಕಲ್ ಕೋರ್ಸ್ ಮುಗಿಸಿಕೊಂಡು ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಬಂದು ವಿದ್ಯುತ್ ಇಲಾಖೆ ಹಾಗೂ ಎನ್,ಎ, ಎಲ್ ಸಂಸ್ಥೆಗಳಲ್ಲಿ ಕೆಲ ವರ್ಷಗಳ ಕಾಲ ದುಡಿದರೂ ಎಲ್ಲಿಯೂ ನೆಲೆ ಕಾಣದೆ ಪ್ರಸ್ತುತ ಐ, ಎಸ್, ಎಸ್, ಫೆಸಿಲಿಟಿ ಸರ್ವೀಸಸ್ ಅಡಿಯಲ್ಲಿ ಖಾಸಗಿ ಬ್ಯಾಂಕೊಂದರಲ್ಲಿ ಗುತ್ತಿಗೆ ಆಧಾರಿತ ತಾತ್ಕಾಲಿಕ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಡತನದಲ್ಲೇ ಹುಟ್ಟಿ ಬಡತನದಲ್ಲೇ ಸಾಗುತ್ತಿರುವ ಇವರು ಸಾಹಿತ್ಯವನ್ನು ಪ್ರವೃತ್ತಿಯನ್ನಾಗಿಸಿಕೊಂಡು ಇದುವರೆಗೆ ಐದು ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ ಇವರು ಸಾಹಿತ್ಯದ ನಾನಾ ಪ್ರಕಾರಗಳಾದ ಕವನ, ಚುಟುಕು,ಹನಿಗವನ, ಹಾಯ್ಕು,ಟಂಕಾ,ತನಗ,ರುಬಾಯಿ ಹಾಗೂ ವಚನಗಳನ್ನು ರಚಿಸಿದ್ದಾರೆ. ಸಾಹಿತ್ಯ ಕ್ಷೇತ್ರವಲ್ಲದೆ ಸಾಮಾಜಿಕವಾಗಿಯೂ ಗುರುತಿಸಿಕೊಂಡಿರುವ ಇವರು ತುರ್ತು ಸಂದರ್ಭದಲ್ಲಿ ಅವಶ್ಯಕತೆ ಇರುವ ರೋಗಿಗಳಿಗೆ ಸುಮಾರು ಆರುನೂರಕ್ಕೂ ಹೆಚ್ಚು ಜನರಿಗೆ ರಕ್ತ ಒದಗಿಸಿಕೊಟ್ಟ ಹೆಗ್ಗಳಿಕೆ ಇವರದ್ದು.
ಕೋವಿಡ್ ಸಂದರ್ಭದಲ್ಲಿ ಬರುವ ಅಲ್ಪ ವೇತನದಲ್ಲಿಯೂ ಸುಮಾರು ಮೂರು ಸಾವಿರ ಸಾರ್ವಜನಿಕರಿಗೆ ಅನ್ನದಾನ, ಮಾಸ್ಕ್, ಸ್ಯಾನಿಟೈಜರ್ಗಳನ್ನು ಒದಗಿಸಿಕೊಟ್ಟಿದ್ದಾರೆ, ಮತ್ತು ಪುಸ್ತಕ ಓದುವ ಹವ್ಯಾಸಕ್ಕೆ ಪ್ರೇರಣೆ ಎಂಬಂತೆ ಎರಡು ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ಶಾಲಾ ಕಾಲೇಜುಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಚಿತವಾಗಿ ದಾನ ಮಾಡಿದ್ದಾರೆ. ಇವರ ಸಾಹಿತ್ಯ ಹಾಗೂ ಸಾಮಾಜಿಕ ಸೇವೆಗಳಿಗೆ ತಾಲ್ಲೂಕು ರಾಜ್ಯೋತ್ಸವ ಪ್ರಶಸ್ತಿಯೂ ಸೇರಿದಂತೆ ಇಪ್ಪತ್ತೈದಕ್ಕೂ ಹೆಚ್ಚು ಪ್ರಶಸ್ತಿ ಪುರಸ್ಕಾರಗಳು ಸಂದಿವೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!