ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕುರಿಕೋಟ ಗ್ರಾಮದಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನ ಆಚರಣೆ ಪ್ರಯುಕ್ತ ಅನ್ನ ಸಂತರ್ಪಣೆ

ಕಮಲಾಪುರ : ತಾಲೂಕಿನ ಕುರಿಕೋಟಾ ಗ್ರಾಮದ ಮುಖ್ಯ ರಸ್ತೆ ಅಂಬೇಡ್ಕರ್ ಸರ್ಕಲ್ ಹತ್ತಿರ 70ನೇ ಧಮ್ಮಚಕ್ರ ಪ್ರವರ್ತನ ದಿನಾಚರಣೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ಮಂಗಳವಾರ ಸಂಭ್ರಮದಿಂದ ಜರುಗಿತು.
ಕಾರ್ಯಕ್ರಮ ಕುರಿತು ಭೀಮ್ ಆರ್ಮಿ ರಾಜ್ಯಾಧ್ಯಕ್ಷ ಸಂತೋಷ್ ಪಾಳ, ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಹುಗ್ಗಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಷ್ಣುಸ್ವಾಮಿ ಮಾತನಾಡಿದರು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬೌದ್ಧ ಧಮ್ಮ ಸ್ವೀಕರಿಸಿ ನಮಗೆ ಸಮಾನತೆಯ ಹಾದಿ ತೋರಿಸಿದ ದಿನವೇ ಧಮ್ಮಚಕ್ರ ಪ್ರವರ್ತನ ದಿನವಾಗಿದೆ. ಅವರ ತತ್ವ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಗುರುಕುಲ ಗ್ರಾಮದ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಚಿಕ್ಕನಾಗವ, ಕುರಿಕೋಟ ಗ್ರಾಮದ ದಲಿತ ಹಿರಿಯ ಮುಖಂಡರಾದ ಶಿವಪ್ಪ ಮರ್ಪಳ್ಳೆ, ಪ್ರಕಾಶ್ ಸಾಗರ್, ಚಿತ್ತಾಪುರ ತಾಲೂಕಾಧ್ಯಕ್ಷ ನಾಗರಾಜ್ ಗಾಯಕವಾಡ, ನಾಗರಾಜ್ ಬೇವಿನಕರ್, ಇಂಡಿಯನ್ ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಗೌರಿಶಂಕರ ವೀರನ, ಯುವ ಮುಖಂಡರಾದ ಅಭಿಲಾಷ್, ರಾನೋಜಿ, ಸಾಲಿವನ್ ವಾಡಿ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾರ್ಯಕ್ರಮವು ಭೀಮ್ ಆರ್ಮಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಷ್ಣುಸ್ವಾಮಿ ಅವರ ನೇತೃತ್ವದಲ್ಲಿ ಜರುಗಿತು.

ವರದಿ ಚಂದ್ರಶೇಖರ್ ಆರ್. ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!