ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬ್ರಿಟಿಷರ ವಿರುದ್ಧ ಗುಡುಗಿದ ಚೆನ್ನಮ್ಮನ ಶೌರ್ಯ ಮಹಿಳೆಯರಿಗೆ ಆದರ್ಶ: ಬಿ.ವಿ. ಗೌಡ

ಬಳ್ಳಾರಿ / ಕಂಪ್ಲಿ: ಬ್ರಿಟಿಷರ ದಾಸ್ಯದ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಧೈರ್ಯ ಮತ್ತು ಸಾಹಸದ ಪ್ರತೀಕವಾಗಿದ್ದು, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಅವರು ತೋರಿದ ಅಸಾಧಾರಣ ಶೌರ್ಯ ನಾಡಿನ ಪ್ರತಿಯೊಬ್ಬ ಮಹಿಳೆಗೂ ಆದರ್ಶಪ್ರಾಯವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಮತ್ತು ವೀರಶೈವ ಸಮಾಜದ ಯುವ ಮುಖಂಡ ಬಿ.ವಿ. ಗೌಡ ತಿಳಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಸಹಯೋಗದಲ್ಲಿ ಏರ್ಪಡಿಸಿದ್ದ ‘ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ’ ಆಚರಣೆಯಲ್ಲಿ ರಾಣಿಯ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಅವರು ಮಾತನಾಡಿದರು. ಚೆನ್ನಮ್ಮ ತನ್ನ ಸಾಮ್ರಾಜ್ಯದ ರಕ್ಷಣೆಗಾಗಿ ಮತ್ತು ನಾಡಿನ ಒಳಿತಿಗಾಗಿ ಬ್ರಿಟಿಷರ ವಿರುದ್ಧ ಯುದ್ಧ ಸಾರಿದ ದೇಶದ ಪ್ರಥಮ ಮಹಿಳೆಯಾಗಿದ್ದಾರೆ. ಇಂತಹ ಧೀರ ರಮಣಿಯ ಜೀವನದ ಮೌಲ್ಯಗಳನ್ನು ಇಂದಿನ ಮಹಿಳೆಯರು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಹಾಗೂ ತಹಸಿಲ್ದಾರ್ ಜೂಗಲ್ ಮಂಜುನಾಯಕ ಮಾತನಾಡಿ, “ಆಧುನಿಕ ಜಗತ್ತಿನಲ್ಲಿ ಮಹಿಳೆಯರು ಸ್ವಾವಲಂಬಿಗಳಾಗಬೇಕು. ಶೋಷಣೆ ಮತ್ತು ಅನ್ಯಾಯದ ವಿರುದ್ಧ ಹೋರಾಡುವ ದೃಢ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು” ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸಮಾಜದ ಪ್ರಮುಖ ಮುಖಂಡರಾದ ಜಿ. ಅಮರೇಗೌಡ, ಚನ್ನಬಸವ ಕೋರಿ, ಕನಕಗಿರಿ ರೇಣುಕಗೌಡ, ಟಿ.ಎಚ್.ಎಂ. ರಾಜಕುಮಾರ್ ಸೇರಿದಂತೆ ಕಂದಾಯ ಇಲಾಖೆಯ ಶಿರಸ್ತೆದಾರರಾದ ಎಸ್.ಕೆ. ರಮೇಶ್, ಜಿ. ಪಂಪಾಪತಿ, ಆಹಾರ ಇಲಾಖೆಯ ನಿರೀಕ್ಷಕ ವಿರೂಪಾಕ್ಷಗೌಡ ಹಾಗೂ ವೈಷ್ಣವಿ, ರಾಧಾ, ಟಿ. ಜ್ಯೋತಿ ಮತ್ತು ವಿವಿಧ ಸಮಾಜಗಳ ಗಣ್ಯರು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!