ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಡಾ.ಪುನೀತ್ ರಾಜಕುಮಾರ ಜನ್ಮ ದಿನಾಚರಣೆ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರದಲ್ಲಿ ಡಾ.ಪುನೀತ್ ರಾಜಕುಮಾರ ವೃತ್ತದಲ್ಲಿ
ಡಾ.ಪುನೀತ್ ರಾಜಕುಮಾರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು ಈ ಸಂದರ್ಭದಲ್ಲಿ ಮಾತನಾಡಿದ
ಶಿವಾನಂದ ಹಿರೇಮಠ ಅವರು ಪವರಸ್ಟಾರ್ ಪುನೀತ್ ರಾಜಕುಮಾರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಾಯಕನಟನಾಗಿ ಅಭಿಮಾನಿಗಳಿಂದ ಅಪ್ಪು ಎಂದೇ ಕರೆಯಿಸಿಕೊಳ್ಳುವ ಪುನೀತ್ ನಟನೆಯಲ್ಲದೇ ಹಿನ್ನಲೆ ಗಾಯಕರಾಗಿ ,ನಿರ್ಮಾಪಕರಾಗಿಯೂ ಸುಮಾರು ನಾಲ್ಕು ದಶಕಗಳ ತಮ್ಮ ಸಿನಿಜೀವನದಲ್ಲಿ ಬಾಲ ಕಲಾವಿದನಾಗಿ 14 ಮತ್ತು ನಾಯಕನಾಗಿ 25 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ ಹಾಗೂ ಬಾಲ್ಯದಲ್ಲೇ ನಟನೆ ಮೂಲಕ ಎಲ್ಲರ ಮನೆ ಗೆದ್ದಿದ್ದ ಇವರು ನಟನೆಗಾಗಿ ಕೇಂದ್ರ ಸರ್ಕಾರ ಅತ್ಯುತ್ತಮ ಬಾಲನಟ ಕೆಟಗರಿ ಅಡಿಯಲ್ಲಿ ರಾಷ್ಟ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಎಷ್ಟೇ ದೊಡ್ಡ ಕಲಾವಿದನಾದರೂ ಅಪ್ಪುರವರ ಸರಳತೆ, ವಿನಯತೆ ಎಲ್ಲರಿಗೂ ಮಾದರಿ ಅವರು ಸಾರ್ಥಕತೆಯ ಬದುಕನ್ನು ಬದುಕಿದ್ದರು. ಯಾವುದೇ ಪ್ರಚಾರ ಬಯಸದೇ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡು ಎಲ್ಲರಿಗೂ ಮಾದರಿಯಾಗಿದ್ದರು.ಅಪ್ಪು ಅಂದ್ರೆ ವಿನಯತೆ, ಸದ್ದಿಲ್ಲದೇ ಸಾಮಾಜಿಕ ಕಾರ್ಯಕ್ರಮಗಳ್ಲಿ ತೊಡಗಿಸಿಕೊಂಡ ರೀತಿಗೆ ಸಾಕ್ಷಿಯಾಗಿ ಅಷ್ಟು ದೊಡ್ಡ ಕಲಾವಿದನಾಗಿದ್ದರೂ, ಸದ್ದೇ ಮಾಡದೇ 26 ಅನಾಥಾಶ್ರಮ, 19 ಗೋಶಾಲೆ, 16 ವೃದ್ಧಾಶ್ರಮ ಹಾಗೂ 4800ಕ್ಕೂ ಹೆಚ್ಚು ಬಡ ವಿದ್ಯಾರ್ಥಿಗಳ ಓದಿಗೆ ನೀಡಿದ ದಾನವು ಸ್ಫೂರ್ತಿಯಾಗಿವೆ ಎಂದು ಹೇಳುವ ಮೂಲಕ ಇವತ್ತು ಅಪ್ಪು ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ
ಮಹಾಂತೇಶ ನವಣಿ ಅವರು ಮಾತನಾಡಿ ಮಾರ್ಚ್ 17 ರಂದು ಅಂದು ಚೆನ್ನೈನ ಕಲ್ಯಾಣಿ ಆಸ್ಪತ್ರೆಯಲ್ಲಿ ಪಾರ್ವತಮ್ಮರವರು ಗಂಡು ಮಗುವೊಂದಕ್ಕೆ ಜನ್ಮ ನೀಡುತ್ತಾರೆ. ಆ ಚಿಕ್ಕ ಬಾಲಕ ಮನೆ ಮಂದಿಗೆ ಮಾತ್ರವಲ್ಲದೇ ಇಡೀ ಕರುನಾಡಿಗೆ ಮುದ್ದಿನ ಮಗವಾಗಿದ್ದವರೇ ಡಾ.ಪುನೀತ್ ರಾಜ್‌ಕುಮಾರ್ !

ಈ ಸಂದರ್ಭದಲ್ಲಿ ಪವರ್ ಮ್ಯಾನಗಳಾದ ಐ ಡಿ ಬಿರಾದಾರ, ಲೊಹಿತ್ ಪವಾರ, ಕುಂಟೊಜಿ, ಮುಲ್ಲಾ, ಜತ್ತಿ, ಮತ್ತು ಗುತ್ತಿಗೆದಾರರಾದ ರವಿ ಸವದಿ, ರಾಮಪ್ಪ ರೊಡ್ಡ, ಮೊಶಿನ, ನದಾಪ ಹಾಗೂ ಭೀಮು ಮಾಳಿ, ಶಿವು ನೇಮಗೌಡ, 24×7 ಸಿಬ್ಬಂದಿ ವರ್ಗದವರು ಮತ್ತು ಇತರರು ಹಾಜರಿದ್ದರು.

ವರದಿ: ಶಿವು ಅವಟಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ