ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗಾಂಧಿ ಮೈದಾನದಲ್ಲಿ ಸ್ವಚ್ಚತಾ ಅಭಿಯಾನ :- ವರ್ಷದ ೩೬೫ ದಿನಗಳೂ ಸ್ವಚ್ಛತೆಗೆ ಆದ್ಯತೆ ನೀಡಿ‌ ಶಾಸಕ ಡಾ.‌ಮಂತರ್ ಗೌಡ

ಮಡಿಕೇರಿ : ದಸರಾ ಹಬ್ಬದ ಹಿನ್ನೆಲೆ ನವರಾತ್ರಿ ಉತ್ಸವಕ್ಕೆಋ ಸಾಕ್ಷಿಯಾಗಿದ್ದ ನಗರದ ಗಾಂಧಿ ಮೈದಾನದಲ್ಲಿ ಸ್ವಚ್ಛತಾ ಅಭಿಯಾನವು ಶುಕ್ರವಾರ ನಡೆಯಿತು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಸ್ವಚ್ಛತಾ ಸೇನಾನಿಗಳಾದ ಪೌರಕಾರ್ಮಿಕರ ಜೊತೆ ಸ್ವಚ್ಛತಾ ಅಭಿಯಾನದಲ್ಲಿ ಕೈಜೋಡಿಸಿ, ಗಮನ ಸೆಳೆದರು.

ಈ ಸಂದರ್ಭ ಮಾತನಾಡಿದ ಶಾಸಕರು, ಹಬ್ಬ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳು ಮುಗಿದ ಬಳಿಕ ಸ್ವಚ್ಛತೆ ಕಾಪಾಡುವುದು ಕೇವಲ ಒಂದು ದಿನದ ಕೆಲಸವಲ್ಲ. ವರ್ಷದ 365 ದಿನವೂೃ ಪರಿಸರ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಸ್ವಚ್ಛತಾ ಕಾರ್ಯವು ಎಲ್ಲರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಸಾರ್ವಜನಿಕರಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಪ್ಲಾಸ್ಟಿಕ್ ಸೇರಿದಂತೆ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ, ನಿಗದಿತ ಕಸದ ತೊಟ್ಟಿಗಳಲ್ಲಿ ಹಾಕುವ ಅಭ್ಯಾಸವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದು ಶಾಸಕರು ತಿಳಿಸಿದರು. ದಸರಾ ಸೇರಿದಂತೆ ವಿವಿಧ ಹಬ್ಬಗಳ ಸಂದರ್ಭದಲ್ಲಿ ಜನರು ಸಂಭ್ರಮದಿಂದ ಭಾಗವಹಿಸುತ್ತಾರೆ. ಆದರೆ ಕಾರ್ಯಕ್ರಮ ಮುಗಿದ ಮರುದಿನವೇ ಸ್ವಚ್ಛತೆಯ ಬಗ್ಗೆ ನಿಲಕ್ಷ್ಯ ವಹಿಸುವುದು ಸರಿಯಲ್ಲ. ಹಬ್ಬದ ಸಂದರ್ಭದಲ್ಲಿ ಉಂಟಾಗುವ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವ ಮೂಲಕ ನಗರದ ಸ್ವಚ್ಛತೆ ಮತ್ತು ಸೌಂದರ್ಯವನ್ನು ಕಾಪಾಡಲು ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.

ದಸರಾ ಸಂದರ್ಭದಲ್ಲಿ ನಗರದ ವಿವಿಧೆಡೆ ಕಸದ ತೊಟ್ಟಿಗಳನ್ನು ಇರಿಸಲಾಗಿರುತ್ತದೆ. ಸಾರ್ವಜನಿಕರು ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ರಸ್ತೆಗಳಲ್ಲೇ ಕಸ ಎಸೆಯುವುದನ್ನು ನಿಲ್ಲಿಸಿ, ಪೌರಕಾರ್ಮಿಕರೊಂದಿಗೆ ಕೈಜೋಡಿಸುವ ಮನೋಭಾವ ಬೆಳೆಸಿಕೊಳ್ಳಬೇಕು.
ಒಂದು ದಿನ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸುವುದರಿಂದ ಮಾತ್ರ ಸ್ವಚ್ಛ ನಗರ ನಿರ್ಮಾಣ ಸಾಧ್ಯವಿಲ್ಲ. ವರ್ಷದ ಎಲ್ಲ ದಿನಗಳಲಿಯೂ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.
ಮಡಿಕೇರಿ ನಗರದ ಸೌಂದರ್ಯವನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸ್ವಚ್ಛತೆಯನ್ನು ಕೇವಲ ಪೌರಕಾರ್ಮಿಕರ ಕರ್ತವ್ಯವೆಂದು ಭಾವಿಸದೆ, ಸಾರ್ವಜನಿಕರೂ ತಮ್ಮ ಹೊಣೆಗಾರಿಕೆಯನ್ನು ಅರಿತು ನಡೆದುಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಸದಸ್ಯರಾದ ಆರ್.ಪಿ.ಚಂದ್ರಶೇಖರ್, ಮಿನಾಜ್ ಪ್ರವೀಣ್, ನಗರಸಭೆ ನಾಮ ನಿರ್ದೇಶಿತ
ಸದಸ್ಯರಾದ ಜುಲೆಕಾಬಿ, ಮುದ್ದುರಾಜ್, ಸದಾಮುದ್ದಪ್ಪ, ಪ್ರಮುಖರಾದ ಪ್ರಕಾಶ್ ಆಚಾರ್ಯ, ಹಂಸ ಕೊಟ್ಟಮುಡಿ, ಓಂಕಾರೇಶ್ವರ ದೇವಾಲಯ ಸಮಿತಿ ಅಧ್ಯಕ್ಷರಾದ ಚುಮ್ಮಿ ದೇವಯ್ಯ, ಸದಸ್ಯರಾದ ಅಂಬಿಕಲ್ ಕುಶಾಲಪ್ಪ, ಜಿ.ರಾಜೇಂದ್ರ, ಜಯಂತಿ ಶೆಟ್ಟಿ, ಮೋಹನ್ ವಿ.ಜಿ, ಫ್ಯಾನ್ಸಿ ಪಾರ್ವತಿ, ಕೊಚನ ಚೇತನ್, ಜಾನ್ಸನ್ ಪಿಂಟೊ, ಶಶಿ, ಪ್ರೇಮಲಿಂಗಪ್ಪ, ರವಿ ಪಾಪು, ವಸಂತ ಭಟ್, ಅಂಬಿಕಲ್ ನವೀನ್, ಹಬಿಬ್ ಕೀರ್ತನ್, ಲೀಲಾ ಶೇಷಮ್ಮ, ಕವನ್ ಕೊಟ್ಟೊಳ್ಳಿ, ಅರ್ಜುನ್, ಸೂರ್ಯ ಇತರರು ಉಪಸ್ಥಿತರಿದ್ದರು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!