ಹನೂರು :ಪ್ರಸಿದ್ಧ ಯಾತ್ರಾ ಸ್ಥಳವಾದ ಶ್ರೀ
ಮಲೆ ಮಹದೇಶ್ವರ ಬೆಟ್ಟದ ದೀಪದಗಿರಿ ಒಡ್ಡಿನಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ 108 ಅಡಿ ಎತ್ತರದ ಮಹದೇಶ್ವರ ಸ್ವಾಮಿಯ ಪ್ರತಿಮೆ ಇಂದು ಉದ್ಘಾಟನೆಯಾಗಲಿದೆ. ಪ್ರಾಧಿಕಾರದ ಅಧ್ಯಕ್ಷರಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಇಂದು ಅನಾವರಣಗೊಳಿಸಲಾಯಿತು
ಸುಮಾರು 20 ಕೋಟಿ ರೂಗಳ ಅಂದಾಜು ವೆಚ್ಚದಲ್ಲಿ ನಿರ್ಮಾಣವಾಗಿರುವ ಪ್ರತಿಮೆ ನಿರ್ಮಾಣ ಮತ್ತು ಪ್ರತಿಮೆಯ ಕೆಳಭಾಗದ ಕಲ್ಲು ಬಂಡೆ ರಚನೆಯ ಒಳಗೆ ಮಲೆ ಮಾದಪ್ಪನ ಚರಿತ್ರೆ ಸಾರುವ ಮ್ಯೂಸಿಯಂ ನಿರ್ಮಾಣ ಮತ್ತು ಸುತ್ತಲೂ ಉದ್ಯಾನವನ ನಿರ್ಮಾಣ ಆಗಲಿದೆ.
ಪ್ರತಿಮೆ ಅನಾವರಣ ಉದ್ದೇಶದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಮುಖ್ಯಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಮತ್ತು ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಿ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ದಪಡಿಸಲಾಗಿದೆ ಎಂದು ಪ್ರಾಧಿಕಾರದ ಅಧಿಕಾರಿಗಳು ನೀಡಿದ್ದಾರೆ.
ವರದಿ :ಉಸ್ಮಾನ್ ಖಾನ್.