ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮೋದಿ ತಂದೆ ಕುರಿತು ಖರ್ಗೆ ಹೇಳಿಕೆ ವಿವಾದ : ಬಳ್ಳಾರಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ, ಡಿಸಿಗೆ ಮನವಿ.

ಬಳ್ಳಾರಿ: ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ದಿವಂಗತ ತಂದೆಯವರ ಕುರಿತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿದ್ದಾರೆನ್ನಲಾದ ಆಕ್ಷೇಪಾರ್ಹ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿ, ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಪ್ರಮುಖ ರಸ್ತೆಯಾದ ರಾಯಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ನಡೆದ ಬೃಹತ್ ರ‍್ಯಾಲಿಯಲ್ಲಿ ಪಕ್ಷದ ಪ್ರಮುಖ ನಾಯಕರು, ಜನಪ್ರತಿನಿಧಿಗಳು ಮತ್ತು ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷರು ಮತ್ತು ಪ್ರಮುಖ ನಾಯಕರು, “ಜವಾಬ್ದಾರಿಯುತ ಸ್ಥಾನದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಜೀವನದ ಘನತೆಯನ್ನು ಮರೆತು ಪ್ರಧಾನಿಯವರ ಕುಟುಂಬದ ವಿರುದ್ಧ ವೈಯಕ್ತಿಕ ನಿಂದನೆಗೆ ಇಳಿದಿರುವುದು ಖಂಡನೀಯ. ಅವರು ತಕ್ಷಣವೇ ದೇಶದ ಜನತೆಯ ಮತ್ತು ಪ್ರಧಾನಿಯವರ ಕ್ಷಮೆಯಾಚಿಸಬೇಕು” ಎಂದು ಪಟ್ಟುಹಿಡಿದರು.
ಪ್ರತಿಭಟನೆಯಲ್ಲಿ ಬಿಜೆಪಿಯ ಪ್ರಮುಖ ಸ್ಥಳೀಯ ಮುಖಂಡರು, ಮಾಜಿ ಜನಪ್ರತಿನಿಧಿಗಳು, ಪಾಲಿಕೆ ಸದಸ್ಯರು ಹಾಗೂ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಮುಂಚೂಣಿಯಲ್ಲಿದ್ದು ಕಾಂಗ್ರೆಸ್ ನಾಯಕರ ವಿರುದ್ಧ ಘೋಷಣೆಗಳನ್ನು ಕೂಗಿದರು.
ರ‍್ಯಾಲಿಯ ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದ ಪ್ರಮುಖ ನಾಯಕರ ನಿಯೋಗವು ಡಿಸಿ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿತು. ರಾಜಕೀಯ ಸಿದ್ಧಾಂತಗಳು ಏನೇ ಇದ್ದರೂ ಸಾರ್ವಜನಿಕ ಜೀವನದಲ್ಲಿ ಗೌರವಯುತ ಮಾತು ಮತ್ತು ಸಂಯಮವನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ. ಇಂತಹ ಆಕ್ಷೇಪಾರ್ಹ ಹೇಳಿಕೆಗಳ ವಿರುದ್ಧ ಕಠಿಣ ನಿಲುವು ತಳೆಯಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಪ್ರತಿಭಟನೆಯಲ್ಲಿ ಪಕ್ಷದ ಮುಖಂಡ ರುಗಳಾದ ಜಿ.ವೆಂಕಟ ರಮಣ, ಎಸ್‌.ಗುರುಲಿಂಗನಗೌಡ, ಗೋನಾಳ್ ಮುರಹರಗೌಡ, ಎಸ್.ಮಲ್ಲನಗೌಡ,
ಹೆಚ್.ಹನುಂಮತಪ್ಪ, ಕೆ.ಎಸ್.ದಿವಾಕರ್, ಪಾಲಿಕೆ ಪ್ರತಿ ಪಕ್ಷದ ನಾಯಕ ಮೋತ್ಕರ್ ಶ್ರೀನಿವಾಸ್, ಸದಸ್ಯ ಕೆ.ಹ ನುಂಮತಪ್ಪ, ಮುಖಂಡರುಗಳಾದ ಶಂಕ್ರಪ್ಪ, ಡಾ.ರೇಣುಕಾ ಮಂಜುನಾಥ, ಕೆ.ಎ.ವೇಮಣ್ಣ, ಹಂಪಿ ರಮಣ,ಕೆ.ಎಂ.ಮಹೇಶ್ವರಸ್ವಾಮಿ, ಪಿ.ಎಸ್. ಸೋಮಲಿಂಗನಗೌಡ, ದರೂರು ಶಾಂತನಗೌಡ, ಕೆ.ಆ‌ರ್ ಮಲ್ಲೇಶ್, ಕೋಳೂರು ಚಂದ್ರಶೇಖ ರಗೌಡ, ರಾಮಾಂಜಿನಿ ಗುಗ್ಗರಹಟ್ಟಿ, ಅಲ್ಲಾ ಬಕಾಷ್, ಮಲ್ಲಿಕಾರ್ಜುನ ಗೌಡ ಶಂಕರಬಂಡೆ, ,ಜಿಲ್ಲಾ ಮೋರ್ಚಾಗಳ ಪದಾಧಿಕಾರಿಗಳು, ಪಕ್ಷದ ಇನ್ನಿತರ ಮುಖಂಡರು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!