ಕಂಪ್ಲಿ : ಇಲ್ಲಿನ ಸಮೀಪದ ಕೋಟೆಯ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ವಿದ್ಯಾರ್ಥಿನಿಯರಿಗಾಗಿ ‘ಸುರಕ್ಷಿತ ಬಚ್ಪನ್ ಅಭಿಯಾನ’ ಹಾಗೂ ‘ಪೋಕ್ಸೋ ಆಕ್ಟ್-2012’ (POCSO Act) ಜಾಗೃತಿ ಕಾರ್ಯಕ್ರಮವು ಇಂದು (ಮಂಗಳವಾರ) ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶಾಲೆಯ ಮುಖ್ಯಗುರುಗಳಾದ ಬಿ. ಜಿಲಾನಸಾಬ್ ಅವರು, “ಮಕ್ಕಳ ರಕ್ಷಣೆ ಮತ್ತು ಸುರಕ್ಷತೆ ನಮ್ಮೆಲ್ಲರ ಆದ್ಯತೆಯಾಗಬೇಕು. ಪ್ರಸ್ತುತ ದಿನಗಳಲ್ಲಿ ಮಕ್ಕಳು ತಮ್ಮ ಹಕ್ಕುಗಳು ಮತ್ತು ಸುರಕ್ಷತಾ ಕಾಯ್ದೆಗಳ ಬಗ್ಗೆ ಅರಿವು ಹೊಂದುವುದು ಅತ್ಯಂತ ಅಗತ್ಯವಾಗಿದೆ” ಎಂದು ತಿಳಿಸಿದರು. ಅಲ್ಲದೆ, ಪೋಕ್ಸೋ ಕಾಯ್ದೆಯ ಮಹತ್ವ ಮತ್ತು ಸಂಕಷ್ಟದ ಸಮಯದಲ್ಲಿ ಮಕ್ಕಳು ಹೇಗೆ ಜಾಗರೂಕರಾಗಿರಬೇಕು ಎಂಬ ಬಗ್ಗೆ ವಿದ್ಯಾರ್ಥಿನಿಯರಿಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕಿಯರಾದ ಕೆ. ಶ್ವೇತಾ, ವರ್ಷಾ ಮಜುಮದಾರ, ಕೆ. ಜಯಶ್ರೀ, ಜೆ. ಅಕ್ಷತಾ, ಪಿ. ಅಮೃತಾ, ಡಿ. ಉಮಾದೇವಿ, ಮಠದ ಸುನೀತಾ, ಅಮ್ರಿನ ಹಾಗೂ ಆಯಾ ಶರ್ಮಸ್ ಬೀ ಸೇರಿದಂತೆ ಶಾಲೆಯ ನೂರಾರು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ




















