ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಲೆ ಮಹದೇಶ್ವರ ಬೆಟ್ಟದಲ್ಲಿ 108 ಆಡಿ ಎತ್ತರದ ಮಾದಪ್ಪನ ಪ್ರತಿಮೆ ಉದ್ಘಾಟನೆ ಮಾಡಿದ ರಾಜ್ಯದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ

ಹನೂರು:: ಪ್ರಸಿದ್ಧ ಯಾತ್ರಾ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಸನ್ನಿಧಿಯಲ್ಲಿ ಅಭಿವೃದ್ಧಿ ಪರ್ವ

ಪ್ರಾರಂಭವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಕ್ಷೇತ್ರದಲ್ಲಿ 108 ಅಡಿ ಎತ್ತರದ ಮಲೆ ಮಹದೇಶ್ವರ ಪ್ರತಿಮೆ ಅನಾವರಣಗೊಳಿಸಿ, ಬೆಳ್ಳಿ ರಥ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದರು.
ಮಲೆ ಮಹದೇಶ್ವರನ ಪವಾಡಗಳು ಜನರ ಮನದಾಳದಲ್ಲಿವೆ. ದಕ್ಷಿಣ ಕರ್ನಾಟಕದಲ್ಲಿ ಜಾತಿ, ಮತ, ಪಂಥಗಳ ಭೇಧವಿಲ್ಲದೇ ಮಲೆ ಮಹದೇಶ್ವರನಿಗೆ ಶ್ರದ್ಧೆಯಿಂದ ನಡೆದುಕೊಳ್ಳುತ್ತಾರೆ.


ಸಮಗ್ರ ವ್ಯವಸ್ಥೆ:
ಪ್ರತಿ ವರ್ಷ ಸಾವಿರಾರು ಜನ ಕಾಲ್ನಡಿಗೆಯಲ್ಲಿ ಬಂದು ವಿಶೇಷ ಪೂಜೆ ಮಾಡಿ ದರ್ಶನ ಪಡೆಯುತ್ತಾರೆ. ಮಹದೇಶ್ವರ ಕ್ಷೇತ್ರದ ಅಭಿವೃದ್ಧಿಗೆ ಪ್ರಾಧಿಕಾರ ರಚನೆಯಾಗಿದೆ. ನೂರಾರು ಕೋಟಿ. ರೂ.ಗಳ ಅಭಿವೃದ್ದಿ ಕೆಲಸ ವನ್ನು ಹಮ್ಮಿಕೊಳ್ಳಲಾಗಿದೆ. ಇಲ್ಲಿ ಬರುವ ಜನರಿಗೆ ಊಟ, ವಸತಿ, ದರ್ಶನದ ವ್ಯವಸ್ಥೆ, ಹಾಗೂ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ನೆನೆಗುದಿಗೆ ಬಿದ್ದಿದ್ದ ಹಲವಾರು ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ನೆರವೇರಿಸಿದ್ದಾರೆ ಎಂದರು. ಶಾಸಕ ಮಹೇಶ್ ಅವರೂ ಕೂಡ ಪೂರಕವಾಗಿ ಕೆಲಸ ಮಾಡಿದ್ದಾರೆ.

ಕ್ಷೇತ್ರದ ಮಹತ್ವವನ್ನು ಎತ್ತಿ ಹಿಡಿಯುವ ಕೆಲಸ ಈ ಪ್ರತಿಮೆ ಮಾಡಿದೆ
ಇಷ್ಟು ದೊಡ್ಡ ಪ್ರತಿಮೆ ಮನುಷ್ಯನ ಭಾವನೆಗಳು ಸ್ಥಳದ ಮೇಲೆ ಅವಲಂಬಿತವಾಗಿರುತ್ತದೆ. ದೇವಸ್ಥಾನಕ್ಕೆ ಹಿದಾಗ ಶಾಂತಿ ಸಮಾಧಾನ ನೆಲೆಸುತ್ತದೆ. ಈ ಪ್ರದೇಶದಲ್ಲಿ ಈ ಕ್ಷೇತ್ರದ ಮಹತ್ವವನ್ನು ಎತ್ತಿ ಹಿಡಿಯುವ ಕೆಲಸ ಈ ಪ್ರತಿಮೆ ಮಾಡಿದೆ. ಜೀವಕಳೆ ಇರುವ ಪ್ರತಿಮೆ ನಿರ್ಮಾಣವಾಗಿದೆ.ಕ್ಷೇತ್ರಕ್ಕೆ ಬರುವವರನ್ನು ಈ ಪ್ರತಿಮೆ ಆಕರ್ಷಿಸುತ್ತದೆ. ಸಮಸ್ತ ಕನ್ನಡಿಗರ ಬದುಕು ಬಂಗಾರವಾಗಬೇಕೆಂಬ ಇಚ್ಛೆ ನನ್ನದು ಎಂದರು.

ಶಿಕಾರಿಪುರದಲ್ಲಿ 68 ಅಡಿ ಅಕ್ಕಮಹಾದೇವಿ ಪ್ರತಿಮೆ ಉದ್ಘಾಟಿಸುವ ಭಾಗ್ಯ ನನ್ನದಾಯಿತು. ಥೀಮ್ ಪಾರ್ಕ್ ಕೂಡ ಆಗಿದೆ. ಇಲ್ಲಿ ಮಾಡಪ್ಪನ ದರ್ಶನ ಹಾಗೂ ಪ್ರತಿಮೆ ಅನಾವರಣದ ಭಾಗ್ಯ ದೊರೆತಿದೆ. ಇಡೀ ನಾಡಿನ ದಾರ್ಶನಿಕರಿಂದ ನಾವು ಪ್ರೇರಣೆ ಪಡೆಯಬೇಕು. ಅದರಂತೆ ನಡೆಯಬೇಕು.
ಮಲೆ ಮಹದೇಶ್ವರಕ್ಕೆ ತನ್ನದೇ ಆದ ಇತಿಹಾಸ ಇದೆ. ಚಾಮರಾಜನಗರಕ್ಕೆ ಸೋಮಣ್ಣನವರ ಸಮರ್ಥ ಉಸ್ತುವಾರಿ ಇದೆ. ಮಹದೇಶ್ವರ ಕ್ಷೇತ್ರದ ಅಭಿವೃದ್ಧಿಗೆ ಶ್ರಮ.

ಹುಟ್ಟು ಸಾವು ಮನುಷ್ಯನ ಕೈಯಲ್ಲಿ ಇಲ್ಲ. ಬದುಕಿನ ಉದ್ದಕ್ಕೂ ಜನಸೇವೆ ಮಾಡಬೇಕು. ಕಾಯಕ ನಿಷ್ಠೆ ಇರಬೇಕು. ಮಾದೇಶ್ವರನ ಪ್ರರಿಮೆ ಕಾಲಾತೀತವಾದುದು. ಇದರ ಸಲುವಾಗಿ ಕೆಲಸ ಮಾಡಿರುವವರು ತಮ್ಮ ಬದುಕಿನ ಸಾರ್ಥಕತೆಯನ್ನು ಕಂಡುಕೊಂಡಿದ್ದಾರೆ ಎಂದರು.

ಸಮಸ್ಯೆಗಳಿಗೆ ಪರಿಹಾರ
ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣ ಮಾಡಲಾಗುವುದು. ಈ ಭಾಗದ ಸಮಸ್ಯೆಗಳ ಬಗ್ಗೆ ವರದಿ ಕಳುಹಿಸಲು ಸೂಚಿಸಿದ್ದು, ವರದಿ ಕಳುಹಿಸಲಾಗಿದೆ. ಎರಡು ದಿನಗಳಲ್ಲಿ ಈ ಬಗ್ಗೆ ಆದೇಶ ಹೊರಡಿಸಲಾಗುವುದು. ಪಿ.ಹೆಚ್.ಸಿ.ಕೇಂದ್ರ ಕಾಮಗಾರಿ ಪ್ರಾರಂಭವಾಗುತ್ತಿದೆ. ಇಲ್ಲಿನ ರೈತರ ಭೂಮಿಯ ಸಮಸ್ಯೆ ಕೂಡ ಬಗೆಹರಿಸಲಾಗುತ್ತಿದೆ ಎಂದರು.

ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಾಲೂರು ಬೃಹನ್ಮಠಾಧೀಶ್ವರ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸಚಿವ ಎಸ್.ಟಿ. ಸೋಮಶೇಖರ್ , ಶಾಸಕರುಗಳಾದ ಆರ್ ನರೇಂದ್ರ, ಎನ್ ಮಹೇಶ್,ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ದತ್ತೇಷ್ ಕುಮಾರ್ ,ಬಿಜೆಪಿ ಯುವ ಮುಖಂಡ ನಿಶಾಂತ್,ಜನಧ್ವನಿ ವೆಂಕಟೇಶ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ