ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿ: ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ನಿರ್ಲಕ್ಷ್ಯಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಮಾಜ ಸೇವಾ ಕಾರ್ಯಕರ್ತರ ವೇದಿಕೆ ಆಗ್ರಹ.

ಕಂಪ್ಲಿ: ಕರ್ನಾಟಕ ಸರ್ಕಾರದ ಕಡ್ಡಾಯ ಆದೇಶವಿದ್ದರೂ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಸಕಾಲದಲ್ಲಿ ಆಚರಿಸದೆ ಮತ್ತು ಸಂಪೂರ್ಣವಾಗಿ ಗೈರುಹಾಜರಾಗಿ ನಿರ್ಲಕ್ಷ್ಯ ವಹಿಸಿರುವ ಕಚೇರಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶಿರಸ್ತೆದಾರ್ ಪಂಪಾಪತಿ ಅವರಿಗೆ ಮನವಿ ಸಲ್ಲಿಸಲಾಯಿತು.


ಸಮಾಜ ಸೇವಾ ಕಾರ್ಯಕರ್ತರ ವೇದಿಕೆಯ ರಾಜ್ಯ ಕಾರ್ಯಾಧ್ಯಕ್ಷರಾದ ಟಿ.ಹೆಚ್.ಎಂ. ರಾಜಕುಮಾರ್ ಹಾಗೂ ಕಂಪ್ಲಿ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಹೆಚ್. ಗೋಪಾಲ್ ಅವರ ನೇತೃತ್ವದಲ್ಲಿ ಈ ದೂರು ನೀಡಲಾಯಿತು.

ಸರ್ಕಾರದ ಆದೇಶ ಉಲ್ಲಂಘನೆ :

ದಿನಾಂಕ 01-11-2026 ರಂದು ರಾಜ್ಯ ಸರ್ಕಾರದ ಸ್ಪಷ್ಟ ಆದೇಶದಂತೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ರಾಜ್ಯೋತ್ಸವವನ್ನು ಕಡ್ಡಾಯವಾಗಿ ಆಚರಿಸಬೇಕಾಗಿತ್ತು. ಆದರೆ, ಕಂಪ್ಲಿಯ ಕರ್ನಾಟಕ ನೀರಾವರಿ ನಿಗಮ ನಿಯಮಿತ ನಂ. 1 ಕಾಲುವೆ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಅತ್ಯಂತ ತಡವಾಗಿ ಧ್ವಜಾರೋಹಣ ನೆರವೇರಿಸಿದ್ದಾರೆ. ಇನ್ನು ಸೋಮಪ್ಪ ಕೆರೆ ಆವರಣದ ಅನಧಿಕೃತ ಕಟ್ಟಡದಲ್ಲಿರುವ ಗ್ರಂಥಾಲಯದ ಮೇಲ್ವಿಚಾರಕರು, ಅಧಿಕಾರಿಗಳು ಮತ್ತು ಸಿಬ್ಬಂದಿ ಧ್ವಜಾರೋಹಣವನ್ನೂ ಮಾಡದೆ, ಆಚರಣೆಯನ್ನೂ ನಡೆಸದೆ ಸರ್ಕಾರದ ನಿಯಮಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿದ್ದಾರೆ ಎಂದು ವೇದಿಕೆಯ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಅಸ್ಮಿತೆಗೆ ಅಪಚಾರ :
ರಾಜ್ಯದ ಅಸ್ಮಿತೆಯಾದ ಕನ್ನಡ ರಾಜ್ಯೋತ್ಸವದ ದಿನದಂದೇ ಕಚೇರಿಗೆ ಗೈರುಹಾಜರಾಗಿ, ಬೇಜವಾಬ್ದಾರಿತನ ಪ್ರದರ್ಶಿಸಿರುವ ಅಧಿಕಾರಿಗಳ ನಡೆ ಕನ್ನಡ ಭಾಷೆ, ನಾಡು ಹಾಗೂ ಸರ್ಕಾರಿ ನಿಯಮಾವಳಿಗಳಿಗೆ ಮಾಡಿದ ಅಪಚಾರವಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಸರ್ಕಾರದ ಆದೇಶವನ್ನು ಉಲ್ಲಂಘಿಸಿದ ಸದರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಸೂಕ್ತ ಇಲಾಖಾ ವಿಚಾರಣೆ ನಡೆಸಿ, ಕಠಿಣ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!