ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಳ್ಳಾರಿ: ಸಿಬಿ ಆರ್‌ಸೆಟಿಯಿಂದ ಉಚಿತ ‘ಕೃಷಿ ಉದ್ಯಮಿ’ ತರಬೇತಿಗೆ ಚಾಲನೆ

ಸಮಗ್ರ ಕೃಷಿ ಪದ್ಧತಿಯಿಂದ ಆರ್ಥಿಕ ಪ್ರಗತಿ ಸಾಧ್ಯ: ಡಾ. ಸದಾಶಿವ ಉಪ್ಪಾರ

ಬಳ್ಳಾರಿ: ರೈತರು ಕೇವಲ ಸಾಂಪ್ರದಾಯಿಕ ಕೃಷಿಗೆ ಸೀಮಿತವಾಗದೆ ಹೈನುಗಾರಿಕೆ, ಕೋಳಿ ಸಾಕಾಣಿಕೆ ಹಾಗೂ ಎರೆಹುಳು ಗೊಬ್ಬರ ತಯಾರಿಕೆಯಂತಹ ಪೂರಕ ಚಟುವಟಿಕೆಗಳನ್ನು ಒಳಗೊಂಡ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡಾಗ ಮಾತ್ರ ಆರ್ಥಿಕವಾಗಿ ಸದೃಢರಾಗಲು ಸಾಧ್ಯ ಎಂದು ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ. ಸದಾಶಿವ ಉಪ್ಪಾರ ಹೇಳಿದರು.

ನಗರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ (ಸಿಬಿ ಆರ್‌ಸೆಟಿ) ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ 13 ದಿನಗಳ ಉಚಿತ ‘ಕೃಷಿ ಉದ್ಯಮಿ’ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಾಲೂಕು ಮಟ್ಟದಲ್ಲಿ ಪಶು ಸಂಗೋಪನಾ ಇಲಾಖೆಯಿಂದ ಸಿಗುವ ವಿವಿಧ ಸೌಲಭ್ಯಗಳು ಮತ್ತು ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಇದೇ ವೇಳೆ ಕರೆ ನೀಡಿದರು.

ಸಂಸ್ಥೆಯ ನಿರ್ದೇಶಕ ವಿನಯ್ ಕುಮಾರ್ ಬಿ. ಕೊಳ್ಳೂರುಮಠ ಮಾತನಾಡಿ, ” ನಮ್ಮ ಸಂಸ್ಥೆಯಲ್ಲಿ ಕೃಷಿ ತಾಂತ್ರಿಕತೆಯ ಜೊತೆಗೆ ಶಿಬಿರಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ, ಆತ್ಮವಿಶ್ವಾಸ ವೃದ್ಧಿ ಹಾಗೂ ಸಂವಹನ ಕೌಶಲ್ಯಗಳ ತರಬೇತಿಯನ್ನು ನೀಡಲಾಗುತ್ತದೆ. ಇದು ಅವರು ವೃತ್ತಿ ಜೀವನದಲ್ಲಿ ಯಶಸ್ವಿಯಾಗಿ ಮುನ್ನಡೆಯಲು ಸಹಕಾರಿಯಾಗಲಿದೆ ” ಎಂದರು.

ಕೆನರಾ ಬ್ಯಾಂಕ್‌ನ ಜಿಲ್ಲಾ ಲೀಡ್ ವ್ಯವಸ್ಥಾಪಕ ಗಿರೀಶ್ ವಿ. ಕುಲಕರ್ಣಿ ಅವರು ಕೃಷಿ ಮತ್ತು ಸ್ವ-ಉದ್ಯೋಗ ಕೈಗೊಳ್ಳಲು ವಿವಿಧ ಬ್ಯಾಂಕ್‌ಗಳಲ್ಲಿ ಲಭ್ಯವಿರುವ ಸಾಲ ಸೌಲಭ್ಯಗಳು ಹಾಗೂ ಆರ್ಥಿಕ ನೆರವಿನ ಕುರಿತು ವಿಸ್ತೃತ ಮಾಹಿತಿ ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ರಾಜೇಂದ್ರ, ಜಿಲ್ಲಾ ಪಂಚಾಯತ್ ಎನ್‌ಆರ್‌ಎಲ್‌ಎಂ ಸಿಬ್ಬಂದಿ, ಉಪನ್ಯಾಸಕರಾದ ಜಡೆಪ್ಪ, ಸಿದ್ದಲಿಂಗಮ್ಮ, ಸಂತೋಷ್ ಕುಮಾರ್, ಪರಮೇಶ ಉಪಸ್ಥಿತರಿದ್ದರು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿರುವ 35 ಶಿಬಿರಾರ್ಥಿಗಳು ಈ ಉಚಿತ ವಸತಿ ಸಹಿತ ತರಬೇತಿಯಲ್ಲಿ ಪಾಲ್ಗೊಂಡಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!