ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೋಳಾಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಯಶಸ್ವಿ.

ಕೋಳಾಲ: ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ, ಅವರಲ್ಲಿನ ಸೃಜನಶೀಲತೆ, ಕಲಾಸಕ್ತಿ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ಉದ್ದೇಶದಿಂದ 2026-27ನೇ ಸಾಲಿನ ಕೋಳಾಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ನವೆಂಬರ್ 6ರಂದು ಕೋಳಾಲದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಕಟಪೂರ್ವ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಶ್ರೀನಿವಾಸಮೂರ್ತಿ ವಹಿಸಿದ್ದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗಣ್ಯರು, ಪ್ರತಿಭಾ ಕಾರಂಜಿಯು ಮಕ್ಕಳಲ್ಲಿ ಅಡಗಿರುವ ವಿವಿಧ ಪ್ರತಿಭೆಗಳನ್ನು ಹೊರತರಲು ಉತ್ತಮ ವೇದಿಕೆಯಾಗಿದ್ದು, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕಲೆ, ಸಾಹಿತ್ಯ, ಸಂಗೀತ, ನೃತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನವಕೋಟಿ ನಾರಾಯಣಸ್ವಾಮಿ, ರೋಟೇರಿಯನ್ ನರಸಿಂಹಮೂರ್ತಿ, ಬಿ.ಆರ್.ಪಿ. ದೊರೇಶ್ ಹಾಗೂ ಸಿ.ಆರ್.ಪಿ. ಹುಸೇನ್ ತಾಜ್ ಭಾಗವಹಿಸಿದ್ದರು.
ಕೋಳಾಲ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ರಾಜಶೇಖರ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಅನ್ಸರ್ ಖಾನ್ ಉಪಸ್ಥಿತರಿದ್ದರು.
ಸುರೇಶ್ ಟಿ.ಎಚ್. ಅವರು ಸ್ವಾಗತಿಸಿದರು. ವಸಂತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಜಯಲಕ್ಷ್ಮಮ್ಮ ಅವರು ಕಾರ್ಯಕ್ರಮದ ವ್ಯವಸ್ಥೆಯಲ್ಲಿ ಸಹಕರಿಸಿದರು.
ಕೋಳಾಲ ಕ್ಲಸ್ಟರ್ ವ್ಯಾಪ್ತಿಯ 15 ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.
ಮಕ್ಕಳ ಪ್ರತಿಭೆಗೆ ಸೂಕ್ತ ವೇದಿಕೆ ಕಲ್ಪಿಸುವ ಇಂತಹ ಕಾರ್ಯಕ್ರಮಗಳು ಅವರ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿವೆ ಎಂಬ ಅಭಿಪ್ರಾಯ ಕಾರ್ಯಕ್ರಮದಲ್ಲಿ ವ್ಯಕ್ತವಾಯಿತು.

ವರದಿ. ಪ್ರಸನ್ನ ಕುಮಾರ್. ಎಸ್. ಕೊರಟಗೆರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!