ಕಂಪ್ಲಿ: ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಇಲಾಖೆಯ ವತಿಯಿಂದ ಅರ್ಹ ರೈತರಿಗೆ ಉಚಿತವಾಗಿ ಬಿತ್ತನೆ ಬೀಜಗಳನ್ನು ವಿತರಿಸಲಾಯಿತು. ಫಲಾನುಭವಿ ರೈತರಿಗೆ ತಲಾ 16 ಕೆ.ಜಿ ಕಡಲೆಬೀಜ, (ಶೇಂಗಾ) ಹಾಗೂ ಜೋಳದ ಬೀಜೋಪಚಾರ, ಬಿತ್ತನೆ ಬೀಜಗಳನ್ನು ವಿತರಿಸಲಾಯಿತು.
ಬೀಜ ವಿತರಿಸಿ ಮಾತನಾಡಿದ, ಸಹಾಯಕ ಕೃಷಿ ನಿರ್ದೇಶಕ ಮಂಜುನಾಥ್ ರೆಡ್ಡಿ, “ಕೃಷಿ ಇಲಾಖೆಯಿಂದ ನೀಡಲಾಗುವ ಗುಣಮಟ್ಟದ ಬಿತ್ತನೆ ಬೀಜಗಳನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು. ಸಕಾಲಕ್ಕೆ ವೈಜ್ಞಾನಿಕ ಪದ್ಧತಿಯಲ್ಲಿ ಬಿತ್ತನೆ ಮಾಡುವ ಮೂಲಕ ಉತ್ತಮ ಇಳುವರಿ ಪಡೆಯಬೇಕು ” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪ್ರಭಾರಿ ಕೃಷಿ ಅಧಿಕಾರಿ, ಟಿ. ಜ್ಯೋತಿ, ತಾಂತ್ರಿಕ ವ್ಯವಸ್ಥಾಪಕರಾದ ಶಿವಾಜಿ ರಾಥೋಡ್, ನಾಗರಾಜ್ ಹಾಗೂ ಕೃಷಿ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ರೈತರಾದ ಹೊನ್ನುರಪ್ಪ, ತಿಪ್ಪೇಸ್ವಾಮಿ, ತಿಪ್ಪಮ್ಮ, ವೆಂಕೋಬ್ಬ, ದೇವರಾಜ, ರಾಘು, ಜಡೆಪ್ಪ ಹುಲಿಗೆಮ್ಮ ಸೇರಿದಂತೆ ಹಲವು ರೈತರು ಪಾಲ್ಗೊಂಡು ಬಿತ್ತನೆ ಬೀಜಗಳನ್ನು ಪಡೆದುಕೊಂಡರು.
ವರದಿ : ಜಿಲಾನಸಾಬ್ ಬಡಿಗೇರ್



















