ಗದಗ : ಎಚ್.ಸಿ.ಇ.ಎಸ್. ಕಾನೂನು ಮಹಾವಿದ್ಯಾಲಯ, ಗದಗ, ಪ್ರಾಥಮಿಕ ಶಾಲೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕದ ಸಹಯೋಗದಲ್ಲಿ ಇಂದು (ನವೆಂಬರ್ 14) ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
(ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಎಂಬ ಮಾತು ಅಕ್ಷರಶಃ ಸತ್ಯ ಆದ ಕಾರಣ ಮಕ್ಕಳಲ್ಲಿ ಮಾನವೀಯ ಮೌಲ್ಯಗಳ ಮತ್ತು ಒಳ್ಳೆಯ ಜ್ಞಾನವನ್ನು ನೀಡುವ ಮೂಲಕ ದೇಶದ ಏಳಿಗೆಗೆ ನಾವೇಲ್ಲರೂ ಶ್ರಮಿಸಬೇಕು ಎಂದು ಮಹಾವಿದಾಲಯ್ಯದ ಪ್ರಾಚಾರ್ಯರಾದ ಪಲ್ಲವಿ ಭೋವಿಹಾರ್ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಪಲ್ಲವಿ ಬುಯ್ಯಾರ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಎಂ. ಡಿ. ಬಂಡಿ ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮಕ್ಕಳ ದಿನಾಚರಣೆಯ ಮಹತ್ವ, ಮಕ್ಕಳ ಹಕ್ಕುಗಳು, ಶಿಕ್ಷಣದ ಪ್ರಾಮುಖ್ಯತೆ ಹಾಗೂ ಮಕ್ಕಳ ಸರ್ವತೋಮುಖ ಅಭಿವೃದ್ಧಿಯ ಕುರಿತು ಮಾತನಾಡಲಾಯಿತು. ಮಕ್ಕಳೇ ದೇಶದ ಭವಿಷ್ಯದ ಸಂಪತ್ತು. ಅವರಿಗೆ ಉತ್ತಮ ಶಿಕ್ಷಣ, ಸಂಸ್ಕಾರ ಮತ್ತು ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಗಣ್ಯರು ತಿಳಿಸಿದರು
ಈ ಸಂದರ್ಭದಲ್ಲಿ ಮಕ್ಕಳಲ್ಲಿ ಸಂತಸ, ಆತ್ಮವಿಶ್ವಾಸ ಮತ್ತು ಸೃಜನಶೀಲತೆಯನ್ನು ಬೆಳೆಸುವ ಅಗತ್ಯವನ್ನು ಒತ್ತಿ ಹೇಳಲಾಯಿತು.
ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಉಪನ್ಯಾಸಕರು, NSS ಘಟಕದ ಪದಾಧಿಕಾರಿಗಳು, ಪ್ರಾಥಮಿಕ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಮಕ್ಕಳ ದಿನಾಚರಣೆಯ ಕಾರ್ಯಕ್ರಮವು ಅತ್ಯಂತ ಉತ್ಸಾಹಭರಿತ ವಾತಾವರಣದಲ್ಲಿ ಯಶಸ್ವಿಯಾಗಿ ನೆರವೇರಿತು.




















