ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದಿ ಕ್ಯಾಂಪ್ಕೋ ರೈತ ಸಂಪರ್ಕ ಸಪ್ತಾಹ

ಅಡಿಕೆ ತೋಟದಲ್ಲಿ ಮಿಶ್ರ ಬೆಳೆ ಪದ್ಧತಿ ಅಳವಡಿಸಿಕೊಳ್ಳಿ: ಕ್ಯಾಂಪ್ಕೋ ರೈತ ಸಂಪರ್ಕ ಸಪ್ತಾಹದಲ್ಲಿ ಸಂಪೂರ್ಣ ಮಾಹಿತಿ.

ಕೊರಟಗೆರೆ: ತಾಲ್ಲೂಕಿನ ಕಾದಿಲಾಪುರದಲ್ಲಿ ಕ್ಯಾಂಪ್ಕೋ ವತಿಯಿಂದ ರೈತ ವೆಂಕಟರಾಮು ಕೆ ವಿ ರವರ ತೋಟದಲ್ಲಿ ರೈತಸಂಪರ್ಕ ಸಪ್ತಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಅಡಿಕೆ ಬೆಳೆಯೊಂದಿಗೆ ಮಿಶ್ರ ಬೆಳೆಗಳನ್ನು ಬೆಳೆಸುವ ಕುರಿತು ರೈತರಿಗೆ ಮಾಹಿತಿ ನೀಡಲಾಯಿತು. ಅಡಿಕೆ ತೋಟಗಳಲ್ಲಿ ಉಪಬೆಳೆಗಳಾಗಿ ಕಾಫಿ, ಕೋಕೋ, ರಬ್ಬರ್ ,ಕಾಳುಮೆಣಸು ಹಾಗೂ ಏಲಕ್ಕಿ ಬೆಳೆಗಳನ್ನು ಬೆಳೆಸುವ ಮೂಲಕ ಕೃಷಿಯಲ್ಲಿ ವೈವಿಧ್ಯತೆ ಅಳವಡಿಸಿಕೊಳ್ಳುವ ಬಗ್ಗೆ ವಿವರಿಸಲಾಯಿತು.
ಅಡಿಕೆ ಮಾರುಕಟ್ಟೆಯಲ್ಲಿನ ಏರಿಳಿತ ಹಾಗೂ ಹವಾಮಾನ ವೈಪರೀತ್ಯದ ನಡುವೆ ಕಾಫಿ ಒಂದು ಸ್ಥಿರವಾದ ಉಪ ಆದಾಯದ ಮೂಲವಾಗಿ ರೈತರಿಗೆ ಹೊಸ ಭರವಸೆ ನೀಡುತ್ತಿದೆ. ಮಲೆನಾಡಿನ ಈ ಭಾಗದಲ್ಲಿ ಹೆಚ್ಚುತ್ತಿರುವ ಕೋ ಕೋ ಕೃಷಿಯ ಆಸಕ್ತಿಯು ಮುಂದಿನ ದಿನಗಳಲ್ಲಿ ಜಿಲ್ಲೆಯ ಆರ್ಥಿಕ ಭೂಪಟದಲ್ಲಿ ದೊಡ್ಡ ಬದಲಾವಣೆ ತರುವ ಸೂಚನೆ ನೀಡಿದೆ. ಅಡಿಕೆ ತೋಟಗಳ ನಡುವೆ ಉಪ ಬೆಳೆಯಾಗಿ ಕಾಫಿ ಹಾಗೂ ಕೋಕೋ ತನ್ನ ಸ್ಥಾನವನ್ನು ಗಟ್ಟಿಗೊಳಿಸಿಕೊಳ್ಳುತ್ತಿದ್ದು ಕ್ಯಾoಪ್ಕೋ ಹಾಗೂ ತೋಟಗಾರಿಕಾ ಇಲಾಖೆಯಿಂದ ರೈತರಿಗೆ ವೈಜ್ಞಾನಿಕವಾಗಿ ಕಾಫಿ, ಕೋಕೋ ಗಿಡಗಳನ್ನು ಬೆಳೆಸಲು ಮಾರ್ಗದರ್ಶನ ನೀಡಲಾಗುತ್ತಿದೆ. ಗಿಡಗಳ ವಿತರಣೆ ಜತೆಗೆ ಬೆಳೆ ನಿರ್ವಹಣೆ ಕುರಿತು ತಾಂತ್ರಿಕ ಮಾಹಿತಿ ಮತ್ತು ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ನಿರ್ದೇಶಕರಾದ ಶ್ರೀ ರಾಘವೇಂದ್ರ ಎಚ್. ಎಂ ರವರು ರೈತರಿಗೆ ಮಾಹಿತಿ ತಿಳಿಸಿದರು.
ಕೋಕೋ ವಸ್ತುಗಳನ್ನು ವಿದೇಶದಿಂದ ಆಮದು ಮಾಡಿಕೊಂಡು ವಿದೇಶಿ ಉತ್ಪನ್ನಗಳಿಗೆ ಹೆಚ್ಚು ಬೆಲೆಯನ್ನು ನೀಡುತ್ತಿದ್ದೇವೆ. ಕೋಕೋ ಬೆಳೆಯನ್ನು ನಮ್ಮ ವಾತಾವರಣದಲ್ಲಿ ಬೆಳೆದು ಸ್ವದೇಶಿ ಉತ್ಪನ್ನಗಳಿಗೆ ಉತ್ತಮ ಬೆಲೆ ನೀಡಿದರೆ ರೈತರಿಗೆ ಆರ್ಥಿಕ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಮ್ಯಾನೇಜರ್ ಶ್ರೀ ಹರೀಶ್ ಭಟ್ ರವರು ತಿಳಿಸಿದರು.
ತುಮಕೂರು ಜಿಲ್ಲೆಯ ದೇವರಾಯಪಟ್ಟಣದ ರೈತ ಹೇಮಂತ್ ಅವರು ತೋಟದಲ್ಲಿ ಆಯೋಜಿಸಿದ್ದ ಸಪ್ತಹ ಕಾರ್ಯಕ್ರಮದಲ್ಲಿ ತಮ್ಮ ಕೃಷಿ ಅನುಭವಗಳನ್ನು ಹಂಚಿಕೊಂಡು, ಅಡಿಕೆ ತೋಟದಲ್ಲಿ ಕಾಫಿ ಗಿಡಗಳನ್ನು , ಕೋ ಕೋ, ನೆಡುವುದರಿಂದ ಜಾಗದ ಸದ್ಬಳಕೆ ಆಗುತ್ತದೆ ಮತ್ತು ರೈತರಿಗೆ ಹೆಚ್ಚುವರಿ ಆದಾಯ ಸಿಗುತ್ತದೆ.
ಅಡಿಕೆ ತೋಟದಲ್ಲಿ ಮಿಶ್ರ ಬೆಳೆ ಪದ್ಧತಿ ಅನುಸರಿಸುವ ಉತ್ತಮ ಸಲಹೆಗಳನ್ನು ನೀಡಿದರು.
ಕಾರ್ಯಕ್ರಮದಲ್ಲಿ ಕ್ಯಾಂಪ್ಕೋ ಲಿಮಿಟೆಡ್‌ನ ನಿರ್ದೇಶಕರಾದ ಶ್ರೀ ರಾಘವೇಂದ್ರ ಎಚ್.ಎಂ., ರೀಜನಲ್ ಮ್ಯಾನೇಜರ್ ಶ್ರೀ ಹರೀಶ್ ಭಟ್ ಹಾಗೂ ತುಮಕೂರು ಕ್ಯಾಂಪ್ಕೋ ವಿಭಾಗದ ಮ್ಯಾನೇಜರ್ ಶ್ರೀ ನಿತಿನ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ರೈತರಿಗೆ ಕೃಷಿ ಪದ್ಧತಿಗಳ ಕುರಿತು ಮಾರ್ಗದರ್ಶನ ನೀಡುವುದರ ಜೊತೆಗೆ ರೈತರೊಂದಿಗೆ ಸಂವಾದ ನಡೆಸಲಾಯಿತು. ರೈತರು ಆಧುನಿಕ ಹಾಗೂ ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡು ಕೃಷಿಯಲ್ಲಿ ಉತ್ತಮ ಆದಾಯ ಗಳಿಸುವಂತೆ ಪ್ರೇರೇಪಿಸುವುದು ಕಾರ್ಯಕ್ರಮದ ಉದ್ದೇಶವಾಗಿತ್ತು.

ವರದಿ .ಪ್ರಸನ್ನ ಕುಮಾರ್. ಎಸ್. ಕೊರಟಗೆರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!