ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮನೆಗಳಲ್ಲಿ ದೇವರ ಜಗುಲಿಯಂತೆ ಪುಸ್ತಕಕ್ಕೂ ಜಾಗವಿರಲಿ : ಜಡೇಶತಾತ

ಎಮ್ಮಿಗನೂರು (ಕಂಪ್ಲಿ): ‘ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವನ್ನೂ ನೀಡಬೇಕಿದೆ. ಮನೆಗಳಲ್ಲಿ ದೇವರ ಜಗುಲಿಗೆ ಜಾಗ ಮೀಸಲಿರಿಸುವಂತೆ, ಪುಸ್ತಕಗಳನ್ನು ಇಡಲೂ ಪ್ರತ್ಯೇಕ ಜಾಗ ಮೀಸಲಿಡಬೇಕು’ ಎಂದು ಎಚ್.ವೀರಾಪುರದ ಜ್ಞಾನಜ್ಯೋತಿ ಶಿವಲಿಂಗಮಂದಿರದ ಪೀಠಾಧಿಪತಿ ಜಡೇಶತಾತ ಸಲಹೆ ನೀಡಿದರು.
ಗ್ರಾಮದ ಸರ್ಕಾರಿ ಬಾಲಕರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ಡಾ.ಅಬ್ದುಲ್ ಕಲಾಂ ಎಸ್.ಪಿ. ಚಾರಿಟಬಲ್ ಫೌಂಡೇಷನ್ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ 71ನೇ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ಕವಿತಾ ವಾಚನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಕನ್ನಡ ಶಾಲೆಗಳ ಉಳಿವಿನ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸುವುದು ಇಂದಿನ ಅಗತ್ಯವಾಗಿದೆ. ಯಾವುದೇ ಕಾರಣಕ್ಕೂ ಕನ್ನಡ ಶಾಲೆಗಳನ್ನು ಉಪೇಕ್ಷಿಸಬಾರದು’ ಎಂದರು.
ಕವಿತಾ ವಾಚನ ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಲೇಖಕ ಬಂಗಿ ದೊಡ್ಡ ಮಂಜುನಾಥ ಮಾತನಾಡಿ, ‘ಮಕ್ಕಳು ಯಾವುದೇ ಮಾಧ್ಯಮದಲ್ಲಿ ಓದಿದರೂ ನಿತ್ಯದ ಸಂವಹನದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸಬೇಕು. ಉತ್ತಮ ಕವಿತೆ ಕಟ್ಟುವ ಮೊದಲು ಶ್ರೇಷ್ಠ ಕವಿತೆಗಳ ಅಧ್ಯಯನ ಮಾಡುವುದು ಅತ್ಯಗತ್ಯ’ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಒಟ್ಟು 59 ಮಕ್ಕಳು ನಾಡಿನ ಖ್ಯಾತ ಕವಿಗಳ ಹಾಗೂ ತಮ್ಮ ಸ್ವರಚಿತ ಕವಿತೆಗಳನ್ನು ವಾಚಿಸಿ ಗಮನ ಸೆಳೆದರು.
ಫೌಂಡೇಷನ್ ಅಧ್ಯಕ್ಷ ಬಿ.ಸಬೀನಾ ಪೀರಾವಲಿ, ನಿಲಯ ಪಾಲಕ ಕೆ.ವಿರುಪಾಕ್ಷಪ್ಪ, ಪಶು ವೈದ್ಯಾಧಿಕಾರಿ ಡಾ.ದೇವೇಂದ್ರಪ್ಪ, ಸ್ವಸಹಾಯ ಸಂಘದ ಅಧ್ಯಕ್ಷೆ ರೇಣುಕಾ, ಎಸ್‌ಡಿಎಂಸಿ ಅಧ್ಯಕ್ಷ ರಮೇಶ, ಪ್ರಮುಖರಾದ ಪೀರಾವಲಿ ಹಂಚಿನಾಳ, ಮಾರೆಮ್ಮ, ವಿನಯ, ಸಾದಕಲಿಸಾಬ್, ಭೀಮೇಶ್, ಎಸ್.ರಾಮು, ಗಾದಿಲಿಂಗ ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!