ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜನರ ಮನೆ ಬಾಗಿಲಿಗೆ ಆಡಳಿತವನ್ನು ಕೊಂಡೊಯ್ಯುವ ಅಭಿಯಾನ ಪ್ರಜಾಸೇವಾ ಯೋಜನೆ ಡಿಸಿಎಂ ಡಾ. ಜಿ. ಪರಮೇಶ್ವರ.

ಜನರ ಅರ್ಜಿಗಳಿಗೆ ತ್ವರಿತ ಸ್ಪಂದನೆ ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಪಾರದರ್ಶಕ ವ್ಯವಸ್ಥೆ.

ಕೊರಟಗೆರೆ ಜನರ ಆಶೀರ್ವಾದವೇ ನನ್ನ ಶಕ್ತಿ. ಅಭಿವೃದ್ಧಿ ಹರಿಕಾರರ ನುಡಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ಮತ್ತು ಯೋಜನೆಗಳ ಶಂಕುಸ್ಥಾಪನೆ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಪಟ್ಟಣ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಪ್ರಜಾಸೇವೆ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಸೇವೆ ಅಭಿಯಾನವು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೃದಯಕ್ಕೆ ಹತ್ತಿರವಾದ ಕಾರ್ಯಕ್ರಮವಾಗಿದ್ದು, ರಾಜ್ಯಾದ್ಯಂತ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಜನರ ಮನೆ ಬಾಗಿಲಿಗೆ ಆಡಳಿತ; ಅರ್ಜಿಗಳ ತ್ವರಿತ ವಿಲೇವಾರಿಗೆ ಆದ್ಯತೆ. ಜನರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಹಲವು ಬಾರಿ ಅಲೆದಾಡಬೇಕಾದ ಪರಿಸ್ಥಿತಿಯಿದೆ. ಸಣ್ಣ ಕೆಲಸವೂ ಆಗದಿದ್ದಾಗ ಜನರು ನಿರಾಸೆಗೊಳ್ಳುತ್ತಾರೆ. ಇಂತಹ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಸರ್ಕಾರವೇ ಜನರ ಬಳಿಗೆ ಹೋಗಬೇಕೆಂಬ ಆಶಯದಿಂದ ಪ್ರಜಾಸೇವೆ ಅಭಿಯಾನವನ್ನು ರೂಪಿಸಲಾಗಿದೆ ಎಂದರು.

ಅಭಿಯಾನದಲ್ಲಿ ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸಲ್ಲಿಸಬಹುದು. ಅವುಗಳಿಗೆ ಅಧಿಕಾರಿಗಳು ಕೂಡಲೇ ಸ್ಪಂದಿಸಿ, ಸಾಧ್ಯವಾದಷ್ಟು ಅರ್ಜಿಗಳನ್ನು ಅಂದೇ ಸಂಜೆ ವೇಳೆಗೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಿದ್ದಾರೆ. ಬಾಕಿ ಉಳಿದಿರುವ ಸಾರ್ವಜನಿಕರ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ತಮ್ಮ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಕೂಡ ತಮ್ಮ ಜಿಲ್ಲೆಗಳಲ್ಲಿ ಪ್ರಜಾಸೇವೆ ಅಭಿಯಾನ ನಡೆಸುತ್ತಿದ್ದಾರೆ. ರಾಜ್ಯಾದ್ಯಂತ ಈಗಾಗಲೇ ಸಾವಿರಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ತುಮಕೂರು ಜಿಲ್ಲೆಯ ತಿಪಟೂರು, ಗುಬ್ಬಿ ಮತ್ತು ಕುಣಿಗಲ್‌ನಲ್ಲಿ ಕಾರ್ಯಕ್ರಮಗಳು ನಡೆದಿದ್ದು, ಇದೀಗ ಕೊರಟಗೆರೆಯಲ್ಲಿ ಆಯೋಜಿಸಲಾಗಿದೆ. ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿಯೂ ಈ ಅಭಿಯಾನ ನಡೆಯುತ್ತಿದೆ ಎಂದು ತಿಳಿಸಿದರು.

ಸರ್ಕಾರವು ಪ್ರತಿವರ್ಷ ಸುಮಾರು ರೂ.50 ಸಾವಿರ ಕೋಟಿ ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಿದೆ. ಈವರೆಗೆ ಒಟ್ಟು ರೂ1.62 ಲಕ್ಷ ಕೋಟಿ ವೆಚ್ಚ ಮಾಡಲಾಗಿದೆ. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ .
ಗೃಹಲಕ್ಷ್ಮೀ ಯೋಜನೆಯಡಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ₹2,000 ನೀಡಲಾಗುತ್ತಿದೆ. ಮಹಿಳೆಯರಲ್ಲಿ ಆತ್ಮಸ್ಥೈರ್ಯ ಬೆಳೆಸುವುದು ಹಾಗೂ ಆರ್ಥಿಕವಾಗಿ ಸಬಲರನ್ನಾಗಿಸುವುದು ಇದರ ಉದ್ದೇಶವಾಗಿದೆ.
ರಾಜ್ಯಾದ್ಯಂತ ನಿವೇಶನರಹಿತ ಬಡ ಕುಟುಂಬಗಳಿಗೆ 15 ಲಕ್ಷ ನಿವೇಶನಗಳನ್ನು ಒದಗಿಸಲು ನಿರ್ಧರಿಸಲಾಗಿದೆ. ಇನ್ನು ಮುಂದೆ 20×30 ಅಡಿ ಅಳತೆಯ ನಿವೇಶನಗಳ ಬದಲಿಗೆ 30×40 ಅಡಿ ಅಳತೆಯ ನಿವೇಶನಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ತುಮಕೂರು ಜಿಲ್ಲೆಯಲ್ಲಿ ಈಗಾಗಲೇ 20 ಸಾವಿರ ನಿವೇಶನಗಳನ್ನು ಸಿದ್ಧಪಡಿಸಲಾಗಿದೆ. ಹಳ್ಳಿಹಳ್ಳಿಗಳಲ್ಲಿ ಗ್ರಾಮಸಭೆಗಳನ್ನು ನಡೆಸಿ, ಅರ್ಹ ಬಡ ಕುಟುಂಬಗಳನ್ನು ಗುರುತಿಸಿ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು. ಪ್ರತಿಯೊಂದು ಬಡ ಕುಟುಂಬಕ್ಕೂ ಸ್ವಂತ ನೆಲೆಯ ಭದ್ರತೆ ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ ಎಂದರು.

ರೈತರು ಪಹಣಿ, ಆಕಾರ್‌ಬಂದ್, ನಕಾಶೆ ಸೇರಿದಂತೆ ತಮ್ಮ ಭೂಮಿಗೆ ಸಂಬಂಧಿಸಿದ ದಾಖಲೆಗಳನ್ನು ಪಡೆಯಲು ಹಣ ವೆಚ್ಚ ಮಾಡಿ, ಅರ್ಜಿಗಳನ್ನು ಸಲ್ಲಿಸಿ ಸರ್ಕಾರಿ ಕಚೇರಿಗಳಿಗೆ ಅಲೆಯುವ ಪರಿಸ್ಥಿತಿಯಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಹೊಸ ಮಾದರಿಯ ‘ನಮೂನೆ 16ಎ’ ಪಹಣಿ ವ್ಯವಸ್ಥೆಯನ್ನು ರೂಪಿಸಲಾಗಿದೆ ಎಂದು ಹೇಳಿದರು.

ಈ ಹೊಸ ಪಹಣಿಯಲ್ಲಿ ರೈತನ ವಿವರಗಳು, ಬೆಳೆ ಮಾಹಿತಿ, ಆಧಾರ್ ಮಾಹಿತಿ, ಭಾವಚಿತ್ರ ಸೇರಿದಂತೆ ಭೂಮಿಗೆ ಸಂಬಂಧಿಸಿದ ಹಲವು ಮಾಹಿತಿಗಳು ಒಂದೇ ದಾಖಲೆಯಲ್ಲಿ ಲಭ್ಯವಾಗಲಿವೆ. ಇದು ದೇಶದಲ್ಲಿಯೇ ಮೊದಲ ಬಾರಿಗೆ ರೂಪಿಸಲಾಗುತ್ತಿರುವ ವ್ಯವಸ್ಥೆಯಾಗಿದೆ ಎಂದು ತಿಳಿಸಿದರು.

ರೈತರಿಗೆ ತಮ್ಮ ಭೂದಾಖಲೆಗಳನ್ನು ಸುಲಭವಾಗಿ ಪಡೆಯಲು ಅನುಕೂಲ ಕಲ್ಪಿಸುವುದು ಹಾಗೂ ಕಂದಾಯ ಇಲಾಖೆಯ ಸೇವೆಗಳನ್ನು ಮತ್ತಷ್ಟು ಸರಳಗೊಳಿಸುವುದು ಈ ವ್ಯವಸ್ಥೆಯ ಉದ್ದೇಶವಾಗಿದೆ ಎಂದರು.

ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ 4,500 ಎಲೆಕ್ಟ್ರಿಕ್ ಬಸ್‌ಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ರೂ. 6,000 ಕೋಟಿ ವೆಚ್ಚ ಮಾಡುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ರಾಜ್ಯದಲ್ಲಿ ಕುಡಿಯುವ ನೀರಿನ ಯೋಜನೆಗಳಿಗೆ ರೂ.16 ಸಾವಿರ ಕೋಟಿ ವೆಚ್ಚ ಮಾಡಲಾಗಿದೆ. ಕೊರಟಗೆರೆ ಕ್ಷೇತ್ರದ ರಸ್ತೆ ಅಭಿವೃದ್ಧಿಗೆ ರೂ.25 ಕೋಟಿ ಅನುದಾನ ಒದಗಿಸಲಾಗಿದೆ.
ಎತ್ತಿನಹೊಳೆ ಯೋಜನೆಯನ್ನು ಸಿದ್ದರಾಮಯ್ಯ ಅವರು ಘೋಷಿಸಿದಾಗ ಕೆಲವರು ವ್ಯಂಗ್ಯವಾಡಿದ್ದರು. ಚೊಂಬಿನಲ್ಲಿ ನೀರು ತರಬೇಕಾಗುತ್ತದೆ ಎಂದು ಟೀಕಿಸಿದ್ದರು. ಆದರೆ ಇಂದು ಈ ಯೋಜನೆಗೆ ಸುಮಾರು ರೂ.23 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತಿದೆ ಯೋಜನೆಯಿಂದ ಕೊರಟಗೆರೆ ತಾಲ್ಲೂಕಿನ 69 ಕೆರೆಗಳು ಭರ್ತಿಯಾಗಲಿವೆ.
ಎತ್ತಿನಹೊಳೆ ಯೋಜನೆಗೆ ಭೂಮಿ ನೀಡುವುದಿಲ್ಲ ಎಂದು ಕೆಲವರು ಹೇಳಿದ್ದರು. ಆದರೂ ಯೋಜನೆಗಾಗಿ 3,717 ಎಕರೆ ಜಮೀನು ಪಡೆಯಲಾಗಿದೆ. ರೈತರಿಗೆ ರೂ.5.50 ಕೋಟಿ ಪರಿಹಾರ ನೀಡಲಾಗಿದೆ.
ರೂ.199 ಕೋಟಿ ವೆಚ್ಚದಲ್ಲಿ ಸರ್ಕಾರಿ ಜಿಲ್ಲಾಸ್ಪತ್ರೆ ನಿರ್ಮಿಸಲಾಗುತ್ತಿದೆ. ಕೊರಟಗೆರೆಯಲ್ಲಿ ರೂ.42 ಕೋಟಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣವಾಗುತ್ತಿದೆ. ರೂ 38 ಕೋಟಿ ವೆಚ್ಚದಲ್ಲಿತೋವಿನಕೆರೆಯಲ್ಲಿ ಆಸ್ಪತ್ರೆ ನಿರ್ಮಾಣ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಿದ್ಧವಾಗಿದೆ. ಕೋಳಾಲ ಆಸ್ಪತ್ರೆಯನ್ನು ಉನ್ನತೀಕರಿಸಲಾಗುವುದು ಎಂದು ತಿಳಿಸಿದರು.
ರಾಜ್ಯ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಭೀಕರ ಬರಗಾಲ ಎದುರಾಗಿದೆ. ಈ ವರ್ಷ ಶೇ.80ರಷ್ಟು ಬೆಳೆ ಬಂದಿಲ್ಲ. ರಾಜ್ಯದಲ್ಲಿ ಬರದಿಂದ ಸುಮಾರು ರೂ.62 ಸಾವಿರ ಕೋಟಿ ನಷ್ಟವಾಗಿದೆ.
ಬರಪೀಡಿತ ಪ್ರದೇಶಗಳ ಪ್ರತಿಯೊಬ್ಬ ಅರ್ಹ ರೈತರಿಗೆ ಒಟ್ಟು ರೂ.5,000 ಪರಿಹಾರ ನೀಡಲು ಘೋಷಿಸಲಾಗಿದೆ.
ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಸುಮಾರು ರೂ.22 ಸಾವಿರ ಕೋಟಿ ನೆರವು ಕೋರಲಾಗಿದೆ.
ಕೊರಟಗೆರೆ ಜನರ ಆಶೀರ್ವಾದವೇ ನನ್ನ ಶಕ್ತಿ ಕೊರಟಗೆರೆ ಕ್ಷೇತ್ರದ ಜನರ ಆಶೀರ್ವಾದದಿಂದ ಎರಡು ಬಾರಿ ಉಪಮುಖ್ಯಮಂತ್ರಿಯಾಗುವ ಅವಕಾಶ ದೊರೆತಿದೆ. ಈ ಕ್ಷೇತ್ರದ ಜನರು ನೀಡಿರುವ ಪ್ರೀತಿ, ವಿಶ್ವಾಸ ಹಾಗೂ ಬೆಂಬಲವನ್ನು ಎಂದಿಗೂ ಮರೆಯುವುದಿಲ್ಲ ಎಂದು ಡಾ. ಜಿ. ಪರಮೇಶ್ವರ ಅವರು ಭಾವುಕರಾಗಿ ನುಡಿದರು.

ಜನಸೇವೆಯೇ ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಮುಖ್ಯಮಂತ್ರಿ, ಸಚಿವರು ಹಾಗೂ ಶಾಸಕರು ಜನರ ಸೇವಕರಾಗಿ ಅವರ ಬಳಿಗೆ ತೆರಳಿ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಪ್ರಜಾಸೇವೆ ಅಭಿಯಾನವೂ ಇದೇ ಆಶಯದೊಂದಿಗೆ ರೂಪುಗೊಂಡಿದ್ದು, ಜನರ ಸಮಸ್ಯೆಗಳಿಗೆ ಸಾಧ್ಯವಾದಷ್ಟು ತ್ವರಿತವಾಗಿ ಪರಿಹಾರ ಕಲ್ಪಿಸಲು ಸರ್ಕಾರ ಬದ್ಧವಾಗಿದೆ, ಸರ್ಕಾರದ ದೂರ ದೃಷ್ಟಿ ಪ್ರಜಾ ಸೇವೆ ಎಂದು ವಾಗ್ದಾನ ನೀಡಿದರು.

ವರದಿ ಪ್ರಸನ್ನಕುಮಾರ್. ಎಸ್. ಕೊರಟಗೆರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!