ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅರಳಿಹಳ್ಳಿ ತಾಂಡದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವ : ಗಮನ ಸೆಳೆದ ಮಕ್ಕಳ ಛದ್ಮವೇಷ

ಕಂಪ್ಲಿ: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಮತ್ತು ಕೌಶಲಗಳನ್ನು ಹೊರತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ. ಅಕ್ಷರ ಜ್ಞಾನದ ಜೊತೆಗೆ ಕಲಾತ್ಮಕ ಚಟುವಟಿಕೆಗಳೂ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿವೆ ಎಂದು ಕನ್ನಡ ಹಿತರಕ್ಷಕ ಸಂಘದ ಗೌರವಾಧ್ಯಕ್ಷ ಕೆ. ಎಂ. ಹೇಮಯ್ಯಸ್ವಾಮಿ ಅಭಿಪ್ರಾಯಪಟ್ಟರು.
ತಾಲೂಕಿನ ಸಣಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಳಿಹಳ್ಳಿ ತಾಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಎಸ್.ಎನ್. ಪೇಟೆ ಸಮೂಹ ಸಂಪನ್ಮೂಲ ಕೇಂದ್ರದ (ಸಿಆರ್‌ಸಿ) ವತಿಯಿಂದ ಸೋಮವಾರ ಆಯೋಜಿಸಿದ್ದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸಿಆರ್‌ಪಿ ರೇಣುಕಾರಾಧ್ಯ, “ಕಳೆದ 23 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು, ಕ್ಲಸ್ಟರ್ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಗ್ರಾಮೀಣ ಭಾಗವಾದ ಅರಳಿಹಳ್ಳಿ ತಾಂಡದಲ್ಲಿ ಆಯೋಜಿಸಿರುವುದು ಹೆಮ್ಮೆಯ ಸಂಗತಿ. ಮಕ್ಕಳು ಕೇವಲ ಅಂಕಗಳಿಗೆ ಸೀಮಿತವಾಗದೆ, ಕೌಶಲಗಳನ್ನು ಬೆಳೆಸಿಕೊಂಡಾಗ ಮಾತ್ರ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಸಾಧನೆಗೆ ತಕ್ಕ ಬೆಲೆ ಸಿಕ್ಕೇ ಸಿಗುತ್ತದೆ” ಎಂದರು.
ಶಾಲೆಯ ಮುಖ್ಯಗುರು ಹನುಮನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಕ್ಲಸ್ಟರ್ ಮಟ್ಟದ ಸ್ಪರ್ಧೆಯಲ್ಲಿ ಒಟ್ಟು 31 ಶಾಲೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು. 43 ವೈಯಕ್ತಿಕ ಹಾಗೂ 3 ಸಾಮೂಹಿಕ ವಿಭಾಗಗಳಲ್ಲಿ ಸ್ಪರ್ಧೆಗಳು ಜರುಗಿದವು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಧರಿಸಿದ್ದ ವಿವಿಧ ಬಗೆಯ ಆಕರ್ಷಕ ಛದ್ಮವೇಷಗಳು ನೋಡುಗರ ಗಮನ ಸೆಳೆದವು.
ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಉಪಾಧ್ಯಕ್ಷ ಬಸವರಾಜ, ಎನ್‌ಪಿಎಸ್ ರಾಜ್ಯಾಧ್ಯಕ್ಷ ಎಂ.ಎ. ನಾಗನಗೌಡ, ಉಪ ಪ್ರಾಚಾರ್ಯೆ ಸುಜಾತ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಚ್. ದೊಡ್ಡಬಸಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹನುಮಂತಪ್ಪ, ಪ್ರಧಾನ ಕಾರ್ಯದರ್ಶಿ ಜಡೆಪ್ಪ, ಸರ್ಕಾರಿ ಅಂಗವಿಕಲ ನೌಕರರ ಸಂಘದ ತಾಲೂಕು ಅಧ್ಯಕ್ಷ ರುದ್ರಪ್ಪ ನಾಯಕ್, ಖಾಸಗಿ ಶಾಲೆಗಳ ಸಂಘದ ಅಧ್ಯಕ್ಷ ಯುಗಾದಿ ಶಿವರಾಜ ಉಪಸ್ಥಿತರಿದ್ದರು.
ಅಲ್ಲದೆ, ಇಸಿಒಗಳಾದ ಟಿ.ಎಂ. ಬಸವರಾಜ, ಎಂ. ರೇವಣ್ಣ, ಸಿಆರ್‌ಪಿಗಳಾದ ಎ. ಗಂಗಾಧರ, ಎ.ಎಸ್. ಭೂಮೇಶ್ವರ, ಪ್ರಭಾಕರ, ಕರುಣಾಕರ, ರಮೇಶ, ಬಡ್ತಿ ಮುಖ್ಯಗುರು ಬಾಗಲಿ ಖಲೀಲ್ ಸಾಬ್, ಶಿಕ್ಷಕರಾದ ಚಂದ್ರಶೇಖರ, ಚಂದ್ರಯ್ಯ ಜಿ.ಎಸ್. ಸೊಪ್ಪಿನಮಠ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!