ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾಳಸಂತೆಗೆ ಹೊರಟ ಅಕ್ಕಿ ಜಪ್ತಿ !

ಸಿರುಗುಪ್ಪ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ಆಹಾರ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, 2.90 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

ನಗರದಿಂದ ಸಿಂಧನೂರು ಕಡೆಗೆ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸೋಮವಾರ ಆಹಾರ ನಿರೀಕ್ಷಕ ಎಂ. ವಿಜಯಕುಮಾರ್ ನೇತೃತ್ವದಲ್ಲಿ ಸಿರುಗುಪ್ಪ ಪೊಲೀಸ್ ಠಾಣೆಯ ಸಿಬ್ಬಂದಿ ದಾಳಿ ನಡೆಸಿದರು.

ಈ ವೇಳೆ ಕೆಎ 34 ಡಿ 2912 ನೋಂದಣಿ ಸಂಖ್ಯೆಯ ಗೂಡ್ಸ್ ವಾಹನವನ್ನು ತಡೆದು ಪರಿಶೀಲಿಸಿದಾಗ 2.90 ಕ್ವಿಂಟಲ್ ಪಡಿತರ ಅಕ್ಕಿ ಪತ್ತೆಯಾಗಿದೆ. ವಶಪಡಿಸಿಕೊಂಡ ಅಕ್ಕಿಯ ಅಂದಾಜು ಮೌಲ್ಯ ₹9,570 ಎಂದು ಆಹಾರ ನಿರೀಕ್ಷಕ ವಿಜಯಕುಮಾರ್ ತಿಳಿಸಿದ್ದಾರೆ.

ವಾಹನ ಚಾಲಕ ಸೈಯದ್ ಅಜೀಂ ಪೀರ್ ಖಾದ್ರಿಯನ್ನು ವಶಕ್ಕೆ ಪಡೆದು, ಅವರ ವಿರುದ್ಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಶಪಡಿಸಿಕೊಂಡ ಅಕ್ಕಿ ಹಾಗೂ ವಾಹನವನ್ನು ಮುಂದಿನ ತನಿಖೆಗಾಗಿ ಪೊಲೀಸರಿಗೆ ಒಪ್ಪಿಸಲಾಗಿದೆ.

ವರದಿ : ಮಸೀದಿ,ಅಬ್ದುಲ್ ಗೌಸ್, ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!