
ಬಸವಕಲ್ಯಾಣ: ತಾಲೂಕಿನ ಮುಡಬಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ ಹೊರವಲಯದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಆತಂಕ ಮೂಡಿಸಿದೆ.
ದಿನಾಂಕ 22/11/2026 ರಂದು ಬೆಳಿಗ್ಗೆ ಸುಮಾರು 8:10 ಗಂಟೆಗೆ ಸದಾಲಾಪುರ ಗ್ರಾಮಕ್ಕೆ ಹೋಗುವ ರಸ್ತೆಯ ಎಡಬದಿಯಲ್ಲಿರುವ ಹೊಲದ ಬಳಿ ಸುಮಾರು 50ರಿಂದ 55 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಮೃತ ವ್ಯಕ್ತಿಯ ಗುರುತು ಹಾಗೂ ವಿಳಾಸ ಪತ್ತೆಯಾಗಿಲ್ಲ. ಮೃತ ವ್ಯಕ್ತಿ ಬಣ್ಣದ ಟೀ-ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದ ಎನ್ನಲಾಗಿದೆ. ಶವದ ಸಮೀಪ ನೀರಿನ ಬಾಟಲಿ ಹಾಗೂ ನವಿಲುಗರಿಯ ಸೂಡು ಪತ್ತೆಯಾಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ನವೆಂಬರ್ 21ರ ಸಂಜೆ 6 ಗಂಟೆಯಿಂದ ನವೆಂಬರ್ 22ರ ಬೆಳಿಗ್ಗೆ 8 ಗಂಟೆಯ ನಡುವಿನ ಅವಧಿಯಲ್ಲಿ ಈ ಘಟನೆ ನಡೆದಿರಬಹುದೆಂದು ಶಂಕಿಸಲಾಗಿದೆ.
ಅಪರಿಚಿತ ವ್ಯಕ್ತಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡ ಮುಡಬಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಮೃತ ವ್ಯಕ್ತಿಯ ಗುರುತು ಪತ್ತೆಹಚ್ಚಲು ಹಾಗೂ ವಾರಸುದಾರರಿಗೆ ಮಾಹಿತಿ ನೀಡಲು ಪೊಲೀಸರು ಶವಕ್ಕೆ ಬಸವಕಲ್ಯಾಣದ ಸರಕಾರಿ ಆಸ್ಪತ್ರೆಯಲ್ಲಿ ವಾರಸುದಾರ ಪತ್ತೆಗಾಗಿ ಹಾಗೂ ಪಿ. ಎಂ. ಇ. ಸಲುವಾಗಿ ಆಸ್ಪತ್ರೆಯ ಶೀತಲ ಶವಗಾರರದಲ್ಲಿಟ್ಟಿರುತ್ತಾರೆಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಪೋಲಿಸ್ ದೂರವಾಣಿ ಸಂಖ್ಯೆ: 9480803462.
ವರದಿ: ಶ್ರೀನಿವಾಸ ಬಿರಾದಾರ




















