ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೆಪಿಎಸ್ ಮ್ಯಾಗ್ನೆಟ್ ನೀತಿ ವಿರೋಧಿಸಿ ಕೋಳೂರಿನಲ್ಲಿ ಎಐಡಿಎಸ್ಓ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಕುರುಗೋಡು :ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ ಜೊತೆಗೆ ರಾಜ್ಯ ಸರ್ಕಾರ ಮಾಡಿಕೊಂಡಿರುವ ಒಪ್ಪಂದವನ್ನು ಹಾಗೂ ಸರ್ಕಾರಿ ಶಾಲೆಗಳನ್ನು ಕಾರ್ಪೊರೇಟ್ ಕಂಪನಿಗಳಿಗೆ ಹಸ್ತಾಂತರಿಸಿ, ಬಡ ವಿದ್ಯಾರ್ಥಿಗಳಿಂದ ಸಾರ್ವಜನಿಕ ಶಿಕ್ಷಣವನ್ನು ಶಾಶ್ವತವಾಗಿ ಕಸಿಯುತ್ತಿರುವ ಕೆಪಿಎಸ್ ಮ್ಯಾಗ್ನೆಟ್ ನೀತಿಯನ್ನು ಖಂಡಿಸಿ ಪಟ್ಟಣ ಸಮೀಪದ ಕೋಳೂರು ಗ್ರಾಮದಲ್ಲಿ ಎಐಡಿಎಸ್ಓ ಸಂಘಟನೆಯ ನೇತೃತ್ವದಲ್ಲಿ ಪೋಷಕರು ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದರು.
ಸಂಘದ ಜಿಲ್ಲಾ ಖಜಾಂಚಿ ಅನುಪಮಾ ಮಾತನಾಡಿ, ಎನ್ ಇ ಪಿ ಹಾಗೂ ಕೆಪಿಎಸ್ ಮ್ಯಾಗ್ನೆಟ್ ಯೋಜನೆಗಳು ಶಿಕ್ಷಣದ ಮೂಲ ಆಶಯವನ್ನೇ ಹೋಲುತ್ತಿದೆ. ಈ ಮೂಲಕ ಉಳ್ಳವರಿಗೆ ಒಂದು ರೀತಿ ಹಾಗೂ ಇಲ್ಲದವರಿಗೆ ಒಂದು ರೀತಿಯ ಶಿಕ್ಷಣವನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಇದು ಸಮಾಜ ದ್ರೋಹಿ ಹಾಗೂ ಶಿಕ್ಷಣ ದ್ರೋಹಿ ಕೆಲಸ. ಶಾಲೆ ಮುಚ್ಚುವುದನ್ನು ಬಿಟ್ಟು, ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ಆಗ್ರಹಿಸಿದರು.
ಇನ್ನೂ ರಾಜ್ಯ ಸರ್ಕಾರವು ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಿ, ವೃತ್ತಿಪರ ಶಿಕ್ಷಣ ನೀಡಲು ನಿರ್ಧರಿಸಿದೆ. ಈ ಮೂಲಕ ತಮ್ಮ ಕಾರ್ಖಾನೆಗಳಿಗೆ ಬೇಕಾದ ಜೀತದಾಳುಗಳನ್ನು ಸೃಷ್ಟಿ ಮಾಡುವ ಸಿದ್ಧತೆಯನ್ನು ನಡೆಸುತ್ತಿದೆ ಎಂದು ಸರ್ಕಾರದ ನೀತಿಯನ್ನು ಖಂಡಿಸಿದರು.

ಜಿಲ್ಲಾ ಉಪಾಧ್ಯಕ್ಷರಾದ ಎಂ ಶಾಂತಿ ಮಾತನಾಡಿ, ಖಾಸಗಿ ಸಂಸ್ಥೆಗಳು ಸರ್ಕಾರಿ ಶಾಲೆಗಳಿಗೆ ಶಿಕ್ಷಣ ನೀಡಲು ಬರುವುದಿಲ್ಲ, ಬದಲಿಗೆ ಆ ಶಾಲೆಗಳ ಭೂಮಿಯನ್ನು ಕೊಳ್ಳೆ ಹೊಡೆಯುವ ಉದ್ದೇಶದಿಂದ ಬರುತ್ತವೆ. ಸರ್ಕಾರವು ಆಕರ್ಷಣೆಯ ಕ್ರಮಗಳ ಬದಲಿಗೆ ಒತ್ತಡ ಹೇರಿ ಶಾಲೆಗಳನ್ನು ಮುಚ್ಚುತ್ತಿದೆ, ಈ ನೀತಿಯ ವಿರುದ್ಧ ಜನ ಹೋರಾಟ ಮಾಡಲು ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸರಕಾರದ ವಿರುದ್ಧ ಹೋರಾಡಲು ಬಲಪಡಿಸಬೇಕು ಎಂದು ಕರೆ ನೀಡಿದರು.

ಗ್ರಾಮದ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಸದಸ್ಯ ನಾಗರಾಜ ಮಾತನಾಡಿ, ನಾವು ರೈತರು ನಮ್ಮ ಮಕ್ಕಳನ್ನು ದುಡ್ಡು ಕೊಟ್ಟು ಶಾಲೆಗೆ ಕಳಿಸುವ ಪರಿಸ್ಥಿತಿ ನಮ್ಮಿಂದ ಸಾಧ್ಯವಿಲ್ಲ. ಹಾಗಾಗಿ ನಮಗೆ ಸರ್ಕಾರಿ ಶಾಲೆ ಬೇಕೇ ಬೇಕು ಜೊತೆಗೆ ಯಾರಾದರೂ ಶಾಲೆಯನ್ನು ಮುಚ್ಚಲು ಬಂದರೆ ನಾವು ನಮ್ಮೂರಿನ ಎಲ್ಲಾ ಜನಗಳು ಸೇರಿ ನಮ್ಮೂರ ಶಾಲೆ ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಎಐಡಿಎಸ್ಓ ಸಂಘದ ಸದಸ್ಯ ಕಂಬಳಿ ಮಂಜುನಾಥ, ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಸದಸ್ಯ ಭೀಮೇಶಪ್ಪ, ಶೇಖರ್, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!