
ಗಂಗಾವತಿ: ತಾಲೂಕಿನ ಮರಳಿಯ ಎಂ. ಎಸ್. ಎಂ. ಎಸ್. ಕಾನೂನು ಮಹಾವಿದ್ಯಾಲಯದಲ್ಲಿ ಸೋಮವಾರ ಆಯೋಜಿಸಿದ್ದ ಪ್ರಥಮ ವರ್ಷದ ಕಾನೂನು ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ‘ಅಭ್ಯುದಯ’ಪ್ರಥಮ ವರ್ಷದ ಕಾನೂನು ವಿದ್ಯಾರ್ಥಿಗಳ ಶೈಕ್ಷಣಿಕ ಪಯಣಕ್ಕೆ ಚಾಲನೆ ನೀಡಿ, ವಿದ್ಯಾರ್ಥಿಗಳು ಸತ್ಯದ ಪರ ಧ್ವನಿ ಎತ್ತುವ ಧೈರ್ಯ ಬೆಳೆಸಿಕೊಂಡು, ಶಿಸ್ತು, ಉತ್ತಮ ನಡವಳಿಕೆ ಹಾಗೂ ಸೇವಾ ಮನೋಭಾವದೊಂದಿಗೆ ಸಮಾಜಕ್ಕೆ ನ್ಯಾಯ ಒದಗಿಸುವ ವಕೀಲರಾಗಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶ್ರೀ ನಾಗೇಶ ಪಾಟೀಲ್ ಹೇಳಿದರು.
ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶ್ರೀ ಮಂಜುನಾಥ ಶಿವಲಿಂಗಪ್ಪ ಮಾತನಾಡಿ, ಪತ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರೊಂದಿಗೆ ಮಾಕ್ ಟ್ರಯಲ್ಗಳ ಮೂಲಕ ಪ್ರಾಯೋಗಿಕ ಜ್ಞಾನ ಬೆಳೆಸಿಕೊಳ್ಳಬೇಕು.ಕಾನೂನು ಪದವೀಧರರಿಗೆ
ಕಾರ್ಪೊರೇಟ್ ಕ್ಷೇತ್ರದಲ್ಲಿಯೂ ಉತ್ತಮ ಅವಕಾಶಗಳಿವೆ ಎಂದರು.
ವಕೀಲರ ಸಂಘದ ಕಾರ್ಯದರ್ಶಿ ಎಚ್.ಎಂ. ಮಂಜುನಾಥ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷೆಗಾಗಿ ಮಾತ್ರ ಓದದೆ ಕಾನೂನು ವಿಷಯಗಳನ್ನು ಆಳವಾಗಿ ಅಧ್ಯಯನ ಮಾಡಬೇಕು ಎಂದರು.
ಪ್ರಾಂಶುಪಾಲೆ ಶಿಲ್ಪಾ ಜಿ. ಬಿರಾದಾರ ಮಾತನಾಡಿ, ಕಾಲೇಜಿನಲ್ಲಿ ಉಚಿತ ಕಾನೂನು ಅರಿವು ಕೇಂದ್ರ ಸ್ಥಾಪಿಸಿ ಗ್ರಾಮೀಣ ಭಾಗದ ಬಡವರಿಗೆ ಕಾನೂನು ನೆರವು ಒದಗಿಸುವ ಉದ್ದೇಶವಿದೆ ಎಂದರು.
ಕಾರ್ಯಕ್ರಮದಲ್ಲಿ ಗಣ್ಯರನ್ನು ಸನ್ಮಾನಿಸಲಾಯಿತು. ವಿವಿಧ ಕ್ರೀಡಾಕೂಟಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಗಣ್ಯರನ್ನು ಎಚ್. ಸಂಸ್ಥೆಯ ಕಾರ್ಯದರ್ಶಿ ಎಚ್.ಎಂ. ಪಾರ್ವತಮ್ಮ, ಆಡಳಿತಾಧಿಕಾರಿಗಳು, ವಿವಿಧ ವಿಭಾಗಗಳ ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.




















