ಕೂಡ್ಲಿ ಗ್ರಾಮ ಪಂಚಾಯಿತಿಯ 5ನೇ ವಾರ್ಡಿನಲ್ಲಿ ನೀರಿನ ಸಮಸ್ಯೆ ಇಂದು ಬೆಳಿಗ್ಗೆ 10 ಗಂಟೆಗೆ ಸತ್ಯಾಗ್ರಹ
ಕೂಡ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 5ನೇ ವಾರ್ಡಿನಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆಯಿಂದಾಗಿ ಸಾರ್ವಜನಿಕರು, ಅದರಲ್ಲೂ ಮಹಿಳೆಯರು ದಿನನಿತ್ಯ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕುಡಿಯುವ ನೀರಿಗಾಗಿ ಕೊಡಗಳನ್ನು ಹಿಡಿದು ಬೀದಿಗಿಳಿಯಬೇಕಾದ ದುಸ್ಥಿತಿ ಎದುರಾಗಿದೆ.
ಈ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಕೂಡ್ಲಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರಿಗೆ ಈಗಾಗಲೇ ಸಾರ್ವಜನಿಕರ ಪರವಾಗಿ ಮನವಿ ಪತ್ರ ಸಲ್ಲಿಸಲಾಗಿತ್ತು.
ಸಮಸ್ಯೆಗೆ ಸೂಕ್ತ ಸ್ಪಂದನೆ ನೀಡದಿದ್ದರೆ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆಯನ್ನೂ ನೀಡಲಾಗಿತ್ತು.
ಆದರೆ, ಸಾರ್ವಜನಿಕರ ಮನವಿಗೆ ಯಾವುದೇ ಸಮರ್ಪಕ ಉತ್ತರ ಅಥವಾ ಪರಿಹಾರ ದೊರೆಯದಿರುವುದು ಗ್ರಾಮ ಪಂಚಾಯಿತಿಯ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಜನರ ಮೂಲಭೂತ ಅವಶ್ಯಕತೆಯಾದ ಕುಡಿಯುವ ನೀರಿನ ಸಮಸ್ಯೆಯನ್ನೇ ಗಂಭೀರವಾಗಿ ಪರಿಗಣಿಸದಿರುವುದು ಖಂಡನೀಯ.
ಈ ಹಿನ್ನೆಲೆಯಲ್ಲಿ 5ನೇ ವಾರ್ಡಿನ ಸಾರ್ವಜನಿಕರ ಪರವಾಗಿ ನಾಳೆ ಬೆಳಿಗ್ಗೆ 10 ಗಂಟೆಗೆ ಕೂಡ್ಲಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
ಬೋರ್‌ವೆಲ್ ಕೊರೆಸಿ ಕುಡಿಯುವ ನೀರಿನ ಶಾಶ್ವತ ವ್ಯವಸ್ಥೆ ಕಲ್ಪಿಸುವವರೆಗೆ ಸತ್ಯಾಗ್ರಹವನ್ನು ಹಿಂಪಡೆಯುವುದಿಲ್ಲ ಎಂದು ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ.
ಮಹಿಳೆಯರು ಕೊಡಗಳನ್ನು ಹಿಡಿದು ಬೀದಿಗಿಳಿಯುವ ಪರಿಸ್ಥಿತಿ ಬಂದಿರುವಾಗಲೂ ಅಧಿಕಾರಿಗಳು ಎಚ್ಚೆತ್ತುಕೊಳ್ಳದಿದ್ದರೆ ಜನಸಾಮಾನ್ಯರು ತಮ್ಮ ಹಕ್ಕಿಗಾಗಿ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ.
ಆದ್ದರಿಂದ 5ನೇ ವಾರ್ಡಿನ ಸಮಸ್ತ ಸಾರ್ವಜನಿಕರು, ಮಹಿಳೆಯರು, ಯುವಕರು ಹಾಗೂ ಹೋರಾಟದ ಮನೋಭಾವ ಹೊಂದಿರುವ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ನ್ಯಾಯಯುತ ಹೋರಾಟಕ್ಕೆ ಬೆಂಬಲ ನೀಡಬೇಕೆಂದು ಕಳಕಳಿಯ ಮನವಿ.
ಹೋರಾಟದಲ್ಲಿ ಭಾಗವಹಿಸುವವರು :
ಸಂಗಮೇಶ ತಾಂಡೂರ್,
ಮಾಣಿಕ್ ಬುಬುಲಿ,
ರಮೇಶ್ ಪೊಲಾ,
ಸಿದ್ದು ಎಸ್. ಬುಬುಲಿ,
ರಮೇಶ್ ನಾಲ್ವಡೇ,
ಸಿದ್ದರಾಮಪ್ಪ ಹಳ್ಳಿ,
ಕೃಷ್ಣ ಸೇರಿ,
ಇಸಾಕ್ ಮಿಯಾ,
ಸಿದ್ದು ಪೂಜಾರಿ,
ಚೆನ್ನಪ್ಪ ಸುಂಟನಾ,
ಸೈಯದ್ ಹುಸೇನ್,
ಉಮಾದೇವಿ ಪೂಜಾರಿ,
ಪಾಪಮ್ಮ ಗುತ್ತೇದಾರ್,
ಮಂಗಳ ಭೂಮಯ್ಯ,
ಕವಿತಾ ಚಿಂತಪಲ್ಲಿ ಇನ್ನೂ ಅನೇಕರು ಉಪಸ್ಥಿತರಿದ್ದರು.




















