ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಶಾಸಕ ಜೆ. ಎನ್. ಗಣೇಶ್

ಕಂಪ್ಲಿ: ‘ಅಧಿಕಾರ ಶಾಶ್ವತವಲ್ಲ, ಆದರೆ ಅಧಿಕಾರವಿದ್ದಾಗ ಮಾಡುವ ಜನಸೇವೆ ಶಾಶ್ವತವಾಗಿ ಉಳಿಯುತ್ತದೆ. ಕಾರ್ಮಿಕರ ಸಂಕಷ್ಟಗಳಿಗೆ ತಾಯಿ ಹೃದಯದಿಂದ ಸ್ಪಂದಿಸಿ, ಅವರಿಗೆ ಅಗತ್ಯ ಸೌಲಭ್ಯ ಹಾಗೂ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ’ ಎಂದು ಶಾಸಕ ಜೆ.ಎನ್. ಗಣೇಶ್ ಹೇಳಿದರು.
ಪಟ್ಟಣದ ಸಕ್ಕರೆ ಕಾರ್ಖಾನೆಯ ಕೋದಂಡರಾಮ ದೇವಸ್ಥಾನದ ಆವರಣದಲ್ಲಿ ಬುಧವಾರ ಕರ್ನಾಟಕ ರಾಜ್ಯ ಶ್ರಮಜೀವಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸೇವಾ ಸಂಘದ ಜಿಲ್ಲಾ ಮತ್ತು ತಾಲ್ಲೂಕು ಘಟಕ ಹಾಗೂ ಕೊಪ್ಪಳದ ಕೆ. ಎಸ್. ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಿದ್ದ ಸಂಘದ ಪ್ರಥಮ ವಾರ್ಷಿಕೋತ್ಸವ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಬಡತನದಲ್ಲಿರುವ ಕಾರ್ಮಿಕ ವರ್ಗ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು, ದುಶ್ಚಟಗಳಿಂದ ದೂರವಿದ್ದು, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಸಮಾಜದ ಬದಲಾವಣೆಗೆ ಕೈಜೋಡಿಸಬೇಕು’ ಎಂದು ಸಲಹೆ ನೀಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಶಿವಕುಮಾರಗೌಡ, ‘ರಾಜ್ಯದ ಲಕ್ಷಾಂತರ ಕಟ್ಟಡ ಕಾರ್ಮಿಕರಿಗೆ ಗುಣಮಟ್ಟದ ಆರೋಗ್ಯ ಸೌಲಭ್ಯ ದೊರೆಯಬೇಕು. ಸಂಘದ ಕಟ್ಟಡ ನಿರ್ಮಾಣಕ್ಕೆ ಸರ್ಕಾರಿ ನಿವೇಶನ ಮಂಜೂರು ಮಾಡುವ ಜೊತೆಗೆ ಕಾರ್ಮಿಕರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಮನವಿ ಮಾಡಿದರು.
ನಂತರ ಕೊಪ್ಪಳದ ಕೆ.ಎಸ್. ಆಸ್ಪತ್ರೆಯ ಡಾ. ಮಂಜುನಾಥ ಅವರ ನೇತೃತ್ವದಲ್ಲಿ ನಡೆದ ಶಿಬಿರದಲ್ಲಿ ನೂರಾರು ಕಾರ್ಮಿಕರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ಜೆಸ್ಕಾಂ ನಿರ್ದೇಶಕ ಕೆ. ಷಣ್ಮುಖಪ್ಪ, ಪುರಸಭೆ ಮಾಜಿ ಅಧ್ಯಕ್ಷ ಬಿ. ಸಿದ್ದಪ್ಪ, ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ, ಗ್ರಾ.ಪಂ. ಮಾಜಿ ಸದಸ್ಯ ತಿಮ್ಮಪ್ಪ, ಸಂಘದ ಕೊಪ್ಪಳ ಜಿಲ್ಲಾಧ್ಯಕ್ಷ ಪಂಪಾಪತಿ ಇಂಗಳಗಿ, ಗಂಗಾವತಿ ತಾಲ್ಲೂಕು ಅಧ್ಯಕ್ಷ ಹನುಮಂತಪ್ಪ ಡಣಾಪುರ, ಗೌರವ ಸಲಹೆಗಾರ ಸೋಮಣ್ಣ ಶ್ರೇಷ್ಠಿ, ಮುಖಂಡರಾದ ನೆಣಕಿ ಗಿರೀಶ, ಹರೀಶ, ಸುರೇಶ, ಬಿ. ರಾಜಶೇಖರ ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!