ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

​ನಂದವಾಡಗಿ ಶ್ರೀಮಠದ ಸುವರ್ಣ ಮಹೋತ್ಸವ : ಪತ್ರಕರ್ತರಿಗೆ ಗೌರವ ಸತ್ಕಾರ

ಇಳಕಲ್: ತಾಲೂಕಿನ ಸುಕ್ಷೇತ್ರ ನಂದವಾಡಗಿ ಇಲ್ಲಿನ ಮಹಾಂತೇಶ್ವರ ಸಂಸ್ಥಾನ ಬೃಹನ್ಮಠದ 50ನೇ ವರ್ಷದ ಸುವರ್ಣ ಮಹೋತ್ಸವದ ಸಂಭ್ರಮದ ಅಂಗವಾಗಿ, ನವೆಂಬರ್ 24ರ ಮಂಗಳವಾರ ನಡೆದ ಸಮಾರಂಭದಲ್ಲಿ ನಗರದ ಪತ್ರಕರ್ತರನ್ನು ಗೌರವಪೂರ್ವಕವಾಗಿ ಸತ್ಕರಿಸಲಾಯಿತು.
​ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿದ್ದ ಶ್ರೀ ಅಭಿನವ ಚನ್ನಬಸವ ಶಿವಾಚಾರ್ಯ ಮಹಾಸ್ವಾಮಿಗಳು, ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಪತ್ರಿಕಾ ಮಿತ್ರರಿಗೆ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಆಶೀರ್ವದಿಸಿದರು.
ಪತ್ರಿಕಾ ರಂಗದ ಸೇವೆಯನ್ನು ಗುರುತಿಸಿ ಗೌರವಿಸಿದ ಶ್ರೀಮಠದ ಪೂಜ್ಯ ಶ್ರೀಗಳಿಗೆ ಪತ್ರಕರ್ತರು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು.
​ಈ ಸಂದರ್ಭದಲ್ಲಿ ಹಿರಿಯ ವರದಿಗಾರರಾದ ಮಹಾಂತೇಶ ಗೊರಜನಾಳ, ವಿಜಯ ಪಲ್ಲೇದ, ಸೈಯದ್ ಸಿರಾಜ್ ಖಾಜಿ, ಮುರ್ತುಜಾ ಬಾದಾಮಿ, ಖಾಜಾ ಸೋಲಾಪುರ, ಇಮಾಮ್ ಹುಸೇನ್ ಮುಲ್ಲಾ, ಶರಣಗೌಡ ಕಂದಕೂರ, ಮೆಹಬೂಬ ದೋಟಿಹಾಳ ಹಾಗೂ ವೀರೇಶ ಸಿಂಪಿ ಸೇರಿದಂತೆ ಅನೇಕ ಪತ್ರಿಕಾ ಮಿತ್ರರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!