ಬಂಟ್ವಾಳ: ಕರ್ನಾಟಕ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬಾಲ ಭವನ ಸೊಸೈಟಿ (ರಿ.) ಕಬ್ಬನ್ ಪಾರ್ಕ್, ಬೆಂಗಳೂರು ಇಲ್ಲಿ ಆಯೋಜಿದ ರಾಜ್ಯ ಮಟ್ಟದ ಕಲಾಶ್ರೀ ಶಿಬಿರದ ಸೃಜನಾತ್ಮಕ ಪ್ರದರ್ಶನ ಕಲೆಯಲ್ಲಿ ಏಕಪಾತ್ರಾಭಿನಯವನ್ನು ಪ್ರದರ್ಶಿಸಿ ಪ್ರಥಮ ಸ್ಥಾನ ಪಡೆದು ರಾಜ್ಯದ ಮುಖ್ಯಮಂತ್ರಿಯವರಿಂದ ಕಲಾಶ್ರೀ ಪ್ರಶಸ್ತಿಯನ್ನು ಪಡೆಯಲಿರುವ ಶ್ರೀರಾಮ ಪ್ರಾಥಮಿಕ ವಿಭಾಗದ 5ನೇ ತರಗತಿಯ ಹಿಮಾನಿ ಕೆ. ಇವರನ್ನು ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಇವರು ಅಭಿನಂದಿಸಿ ಆಶೀರ್ವದಿಸಿದರು ಎಂದು ವರದಿ ತಿಳಿಸಿದೆ.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ/ಮೈಸೂರು




















