
ಈ ದಿನ ಸಿರುಗುಪ್ಪ ತಾಲೂಕಿನ ಶ್ರೀ ಮಹಾಶಕ್ತಿ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿ ನಂತರ ನಗರದ ವಿಶೇಷ ಚೇತನ ಪೌಂಡೇಷನ್ ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಇವರ ವತಿಯಿಂದ ಪರಮಪೂಜ್ಯ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನುಮ ದಿನದ ಪ್ರಯುಕ್ತ ವಿಶೇಷ ಚೇತನ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ ಮತ್ತು ಅನ್ನ ಸಂತರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಕೋಟಿ ರೆಡ್ಡಿ ಅವರು ಮಾತನಾಡಿ ಪೂಜ್ಯರ ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ಮಾತನಾಡಿದರು. ನಿಸ್ವಾರ್ಥ ಸೇವೆಯ ಹರಿಕಾರರಾದ ಪೂಜ್ಯ ವೀರೇಂದ್ರ ಹೆಗ್ಗಡೆಯವರ ದಾಸೋಹ ಪರಂಪರೆ, ಹೀಗೆ ಮುಂದುವರೆಯಲಿ ಮತ್ತು ಪೂಜ್ಯರಿಗೆ ಇನ್ನಷ್ಟು ಆಯುಷ್ಯ ಆರೋಗ್ಯ ವೃದ್ಧಿಯಾಗಲಿ ಎಂದು ಶುಭ ಕೋರಿದರು.
ಈ ಶುಭ ಸಂದರ್ಭದಲ್ಲಿ ಸಿರುಗುಪ್ಪ ತಾಲೂಕಿನ ಯೋಜನಾಧಿಕಾರಿ ವಸಂತ ಎಸ್, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಕಿರಣ ಕುಮಾರ್ ಜೈನ್, ತಾಲೂಕಿನ ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ : ಮಸೀದಿ,ಅಬ್ದುಲ್ ಗೌಸ್, ಸಿರುಗುಪ್ಪ




















