ಕಂಪ್ಲಿ: ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ವಿಶೇಷ ಪೂಜೆ ಮತ್ತು ಪುಷ್ಪಾರ್ಚನೆ ಅರ್ಪಿಸುವ ಮೂಲಕ ಭಾರತ ಸಂವಿಧಾನ ದಿನಾಚರಣೆ ಗುರುವಾರ ಆಚರಿಸಲಾಯಿತು.
ಸಮಾನ ಮನಸ್ಕರ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಕೆ.ಲಕ್ಷ್ಮಣ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಭಾರತದ ಸಂವಿಧಾನವು ಪ್ರತಿಯೊಬ್ಬ ಭಾರತೀಯನಿಗೂ ಸಮಾನತೆ, ಸ್ವಾತಂತ್ರ‍್ಯ, ನ್ಯಾಯ ಹಾಗೂ ಸಹೋದರತ್ವದ ಮೌಲ್ಯಗಳನ್ನು ನೀಡಿದೆ. ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೆ ನೀಡಿರುವ ಮೂಲಭೂತ ಹಕ್ಕುಗಳ ಜೊತೆಗೆ ಮೂಲಭೂತ ಕರ್ತವ್ಯಗಳನ್ನೂ ಅರಿತು ಪಾಲಿಸುವುದು ಅತ್ಯಂತ ಅಗತ್ಯವಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಸಮಾನ ಅವಕಾಶಗಳು ದೊರೆಯಬೇಕು. ಜಾತಿ, ಧರ್ಮ, ಭಾಷೆ ಹಾಗೂ ವರ್ಗಗಳ ಭೇದವಿಲ್ಲದೆ ಎಲ್ಲರೂ ಸಮಾನರು ಎಂಬ ಸಂವಿಧಾನದ ಆಶಯವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು
ನಂತರ ಭಾತರದ ಸಂವಿಧಾನದ ಪೀಠಿಕೆಯ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಆರ್.ಕೆ.ಶ್ರೀಕುಮಾರ್, ಸಹಾಯಕ ನಿರ್ದೇಶಕ ಮಲ್ಲನಗೌಡ ಕೆ.ಎಸ್, ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ, ಶಿರಸ್ತಿದಾರ ರಮೇಶ್, ಪ್ರಾಂಶುಪಾಲ ಸಿದ್ದಣ್ಣ, ಅಸ್ಪೃಶ್ಯ ವಿಮೋಚನಾ ಸಮಿತಿ ಜಿಲ್ಲಾಧ್ಯಕ್ಷ ಎನ್.ಬುಜ್ಜಿಕುಮಾರ, ಮುಖಂಡರಾದ ಜಿ.ರಾಮಣ್ಣ, ಭಾವೈಕ್ಯ ವೆಂಕಟೇಶ್, ಟಿ.ವಿ.ಸುದರ್ಶನರೆಡ್ಡಿ, ಕರಿಯಪ್ಪ ಗುಡಿಮನಿ, ಮರಿಸ್ವಾಮಿ ಸಣಾಪುರ, ಡಿ.ಬಸವರಾಜ್, ಮೆಟ್ರಿ ಬಸವರಾಜ್, ಡಿ.ಬಸವರಾಜ, ಯಲ್ಲಪ್ಪ. ಹೊನ್ನೂರ, ಹನುಮಂತ, ಎ.ಹುಸೇನಪ್ಪ, ಬಿ.ಕೆ.ವಿರುಪಾಕ್ಷಿ, ಮುತ್ತಣ್ಣ, ಚನ್ನಬಸವರಾಜ ಸೇರಿದಂತೆ ಅನೇಕರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















