ಗದಗ : ನಗರದ ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಕಾನೂನು ಮಹಾವಿದ್ಯಾಲಯದಲ್ಲಿ ನವೆಂಬರ್ 26, 2026 ರ ಗುರುವಾರದಂದು ಬೆಳಿಗ್ಗೆ 10:30ಕ್ಕೆ 2026-27ನೇ ಸಾಲಿನ “ಕಾನೂನು ಅರಿವು ಮತ್ತು ನೆರವು ವಿಭಾಗದ ಉದ್ಘಾಟನಾ ಸಮಾರಂಭ” ಹಾಗೂ “ಭಾರತ ಸಂವಿಧಾನ ದಿನಾಚರಣೆ” ಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸಮಾರಂಭದ ಮುಖ್ಯ ಅತಿಥಿಗಳಾಗಿ ಗದಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಗೌರವಾನ್ವಿತ ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ಸಿ. ಎಸ್. ಶಿವನಗೌಡ್ರ ಅವರು ಆಗಮಿಸಿ, ಗಣ್ಯರೊಂದಿಗೆ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಭಾರತೀಯ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವುದರ ಜೊತೆಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಉಚಿತ ಕಾನೂನು ನೆರವು ಮತ್ತು ಅರಿವು ತಲುಪಿಸುವಲ್ಲಿ ಕಾನೂನು ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಗಣ್ಯರಿಗೆ ಗುಲಾಬಿ ಹೂವು ಮತ್ತು ಪುಸ್ತಕಗಳನ್ನು ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು ಹಾಗೂ ಎಲ್ಲರೂ ಒಟ್ಟಾಗಿ ಸಂವಿಧಾನದ ಪೀಠಿಕೆಯನ್ನು ವಾಚಿಸಿದರು. ಕೆ-ಸೆಟ್ (KSET) ಪರೀಕ್ಷೆಯಲ್ಲಿ ಅರ್ಹತೆ ಪಡೆದ ಮಹಾವಿದ್ಯಾಲಯದ ಉಪನ್ಯಾಸಕರಿಗೆ ವಿಶೇಷ ಸನ್ಮಾನ ನೆರವೇರಿಸಲಾಯಿತು.
ಜೊತೆಗೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಗೌರವ ಅತಿಥಿಗಳಾಗಿ ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಆರ್. ಎಂ. ಮೂಲಿಮನಿ ಅವರು ಪಾಲ್ಗೊಂಡು ಇರುತ್ತದೆ. ಸಮಾರಂಭದ ಅಧ್ಯಕ್ಷತೆಯನ್ನು ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯರು ವಹಿಸಿದ್ದರು.
ಈ ಸಂದರ್ಭದಲ್ಲಿ ವಕೀಲರು ಹಾಗೂ ಸಂಸ್ಥೆಯ ಉಪಾಧ್ಯಕ್ಷರು ಹಾಗೂ ಬೆಂಗಳೂರಿನ ಎ.ಡಬ್ಲ್ಯೂ.ಸಿ, ಇ.ಎಸ್.ಬಿ.ಸಿ ಸದಸ್ಯರಾದ ಶ್ರೀ ಎಸ್. ಕೆ. ನದಾಫ್, ಮಹಾವಿದ್ಯಾಲಯದ ಉಪನ್ಯಾಸಕ ವೃಂದಗಾಳದ ಶ್ರೀ ಎಸ್. ಐ ಅಣ್ಣಿಗೇರಿ, ಶ್ರೀ ಬಿ ಎ ಹಿರೇಮಠ್, ಶ್ರೀ ಎಂ ವಿ ಹಿರೇಮಠ್, ಶ್ರೀ ವಿ ಎಸ್ ಹಿರೇಮಠ, ಶ್ರೀಕಾಂತ ಐಲಿ ಮಿಸ್ ನಿವೇದಿತಾ ಮಾಲಿ ಪಾಟೀಲ ಮತ್ತುಮಿಸ್ ಮೇಘಾ ಡಿ, ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿ/ವಿದ್ಯಾರ್ಥಿನಿಯರು ಹಾಗೂ ಕಾನೂನು ಅರಿವು ಮತ್ತು ನೆರವು ವಿಭಾಗದ ಅಧ್ಯಕ್ಷರಾದ ಮಿಸ್ ಎನ್. ಎನ್ ಮುಲ್ಲಾ, ಉಪಾಧ್ಯಕ್ಷರಾದ ಮಿಸ್. ರೇಷ್ಮಾ ಲಕ್ಷ್ಮೇಶ್ವರ ಸೇರಿದಂತೆ ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವು ರಾಷ್ಟ್ರಗೀತೆಯೊಂದಿಗೆ ಮುಕ್ತಾಯಗೊಂಡಿತು.




















