ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕ.ರ.ವೇ.ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಡಿಸೋಜಗೆ ಗೋವರ್ಧನ ಗೋಪಾಲ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

ಸೋಮವಾರಪೇಟೆ : ನಾಡು-ನುಡಿ ಹಾಗೂ ನಿಸ್ವಾರ್ಥ ಸಮಾಜ ಸೇವೆಯಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿರುವ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಕೊಡಗು ಜಿಲ್ಲಾಧ್ಯಕ್ಷರು ಹಾಗೂ ಸಮಾಜ ಸೇವಕರಾದ ಶ್ರೀ ಫ್ರಾನ್ಸಿಸ್ ಡಿಸೋಜ ಅವರಿಗೆ ಪ್ರತಿಷ್ಠಿತ ‘ಗೋವರ್ಧನ ಗೋಪಾಲ ಕನ್ನಡ ರಾಜ್ಯೋತ್ಸವ ಪ್ರಶಸ್ತಿ – 2026’ ನೀಡಿ ಸನ್ಮಾನಿಸಲಾಗಿದೆ.

ಮೈಸೂರಿನ ಯುವಂ ಯುಗಂ ಮಾಸಪತ್ರಿಕೆಯ ಮೂರನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ, ಶಾನ್ ಗ್ಲೋಬಲ್ ಹ್ಯೂಮಾನಿಟಿ ಟ್ರಸ್ಟ್ ಬೋಗಾದಿ, ಮೈಸೂರು ಕಾವೇರಿ ನ್ಯೂಸ್ ಕನ್ನಡ ಹಾಗೂ ಶ್ರೀಗರಿ ಸಮೂಹ ಸಂಸ್ಥೆಗಳ ಸಹಯೋಗದೊಂದಿಗೆ ನವೆಂಬರ್ 25ರಂದು ಮೈಸೂರಿನ ಕಿರು ರಂಗಮಂದಿರದಲ್ಲಿ (ಕರ್ನಾಟಕ ಕಲಾಮಂದಿರದ ಹತ್ತಿರ) ಈ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಸಮಾರಂಭದಲ್ಲಿ ಯುವಂ ಯುಗಂ ಮಾಸಪತ್ರಿಕೆಯ ಮಾಲೀಕರು ಹಾಗೂ ಸಂಪಾದಕರಾದ ಶ್ರೀ ಗ್ರಹೇಶ್ವರ್ ಗಾರುಡಿಗೇಂದ್ರಮ್, ಉಪ ಸಂಪಾದಕರಾದ ಶ್ರೀ ಸಂದೇಶ್ ಜೋಸೆಫ್ ಡಿಸೋಜ ಮತ್ತು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮೈಸೂರು ನಗರ ಘಟಕದ ಅಧ್ಯಕ್ಷರು ಹಾಗೂ ನಾಡಿನ ಸುಪ್ರಸಿದ್ಧ ಕವಿಗಳಾದ ಡಾ. ಜಯಪ್ಪ ಹೊನ್ನಾಳಿ ಅವರು ಉಪಸ್ಥಿತರಿದ್ದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಫ್ರಾನ್ಸಿಸ್ ಡಿಸೋಜ ಅವರು, ನನ್ನ ಕನ್ನಡ ಸೇವೆ ಹಾಗೂ ಸಮಾಜ ಸೇವೆಯನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಿ ಗೌರವಿಸಿರುವ ಯುವಂ ಯುಗಂ ಪತ್ರಿಕೆಯ ಬಳಗಕ್ಕೆ ಹಾಗೂ ಕಾರ್ಯಕ್ರಮದ ಎಲ್ಲಾ ಆಯೋಜಕರಿಗೆ ನನ್ನ ಹೃದಯಪೂರ್ವಕ ಹಾರ್ದಿಕ ಧನ್ಯವಾದಗಳನ್ನು ಅರ್ಪಿಸುತ್ತೇನೆ,” ಎಂದು ತಿಳಿಸಿದ್ದಾರೆ.

ವರದಿ : ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!