ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳ ಹೆಸರು ನೋಂದಣಿ ಹಾಗೂ ಔಷಧಿ ವಿತರಣಾ ವಿಭಾಗಗಳಲ್ಲಿನ ವಿಳಂಬದಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಬರುವ ರೋಗಿಗಳು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ಕಾಯಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.
ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳಿಗೆ ತ್ವರಿತ ಚಿಕಿತ್ಸೆ ನೀಡಬೇಕಾದ ಆಸ್ಪತ್ರೆಯಲ್ಲೇ ಇಂತಹ ವಿಳಂಬ ಉಂಟಾಗುತ್ತಿರುವುದು ಬೇಸರದ ಸಂಗತಿ. ನೋಂದಣಿ ಮತ್ತು ಔಷಧಿ ವಿತರಣೆಗೆ ಸಮರ್ಪಕ ಸಿಬ್ಬಂದಿ ಹಾಗೂ ಅಗತ್ಯ ವ್ಯವಸ್ಥೆ ಕಲ್ಪಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಗಮನಹರಿಸಬೇಕು.
” ರೋಗಿಗಳನ್ನು ಅನಗತ್ಯವಾಗಿ ಕಾಯಿಸುವ ವ್ಯವಸ್ಥೆಗೆ ಕಡಿವಾಣ ಹಾಕಿ, ಸಾರ್ವಜನಿಕರಿಗೆ ತ್ವರಿತ ಹಾಗೂ ಸುಗಮ ಆರೋಗ್ಯ ಸೇವೆ ಒದಗಿಸಬೇಕು. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಆಗ್ರಹಿಸುತ್ತೇನೆ “.
- ವಿನಾಯಕ ಆಚಾರಿ ಜಿಲ್ಲಾ ಅಧ್ಯಕ್ಷರು, ಜೆಡಿಎಸ್ ಮೀನುಗಾರ ಘಟಕ




















