ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಭಕ್ತಿ-ಭಾವದ ಕನಕ ಜಯಂತಿ: ತತ್ವ, ಆದರ್ಶ ಪಾಲನೆಗೆ ಗಣ್ಯರ ಕರೆ

ಕಂಪ್ಲಿ: “ಭಕ್ತ ಕನಕದಾಸರ ಸಾಹಿತ್ಯ ಮತ್ತು ಕೀರ್ತನೆಗಳು ಸಮಾಜಕ್ಕೆ ಉತ್ತಮ ಸಂದೇಶ ನೀಡುವುದರ ಜೊತೆಗೆ, ಸಂಗೀತ ಕ್ಷೇತ್ರಕ್ಕೂ ಅಮೂಲ್ಯ ಕೊಡುಗೆ ನೀಡಿವೆ” ಎಂದು ತಹಶೀಲ್ದಾರ್ ಜೂಗಲ ಮಂಜುನಾಯಕ ಅಭಿಪ್ರಾಯಪಟ್ಟರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಕನಕದಾಸರ ಜಯಂತ್ಯುತ್ಸವ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು.

ಕುರುಬರ ಸಂಘದಿಂದ ಆಚರಣೆ :

ಇಲ್ಲಿನ ಕನಕದಾಸ ವೃತ್ತದಲ್ಲಿ ತಾಲ್ಲೂಕು ಕುರುಬರ ಸಂಘದಿಂದ ಆಯೋಜಿಸಿದ್ದ ಜಯಂತ್ಯುತ್ಸವದಲ್ಲಿ ಸಂಘದ ಅಧ್ಯಕ್ಷ ಗೌಡ್ರು ಡಿಂಡಿ ಮಹರ್ಷಿ ಮಾತನಾಡಿ, “ಕನಕದಾಸರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಭಾರಿ ಉಪ ತಹಶೀಲ್ದಾರ್ ಎಸ್.ಡಿ. ರಮೇಶ, ಸಂಘದ ಉಪಾಧ್ಯಕ್ಷ ಬಂಡಿ ಮಂಜುನಾಥ, ಪದಾಧಿಕಾರಿಗಳಾದ ನಾಗೇಂದ್ರಪ್ಪ, ಮಲ್ಲಿಕಾರ್ಜುನ, ದೊಡ್ಡಬಸಪ್ಪ, ಪಾಂಡುರಂಗಪ್ಪ, ಹರಿನಾಥಗೌಡ, ಪಕ್ಕೀರಪ್ಪ, ಅಳ್ಳಳ್ಳಿ ನಾಗರಾಜ, ಶೇಖರ್, ಯಮುನಪ್ಪ, ಭೀಮಲಿಂಗಪ್ಪ, ಶರಣಪ್ಪ, ಜಕ್ಕಪ್ಪ, ಗಣಪತಿ, ಜಿ. ಬಲಕುಂದೆಪ್ಪ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಬಿಜೆಪಿ ಕಚೇರಿಯಲ್ಲಿ ಜಯಂತಿ :

ಪಟ್ಟಣದ ಬಿಜೆಪಿ ತುಂಗಭದ್ರಾ ಕಚೇರಿಯಲ್ಲಿ ನಡೆದ ಕನಕ ಜಯಂತ್ಯುತ್ಸವದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಸಿ.ಡಿ. ಮಹಾದೇವ ಮಾತನಾಡಿ, “ಸಮಾಜದಲ್ಲಿನ ಅಸಮಾನತೆ ಹಾಗೂ ಜಾತಿ ವ್ಯವಸ್ಥೆಯ ವಿರುದ್ಧ ತಮ್ಮ ಕೀರ್ತನೆಗಳ ಮೂಲಕ ಜಾಗೃತಿ ಮೂಡಿಸಿದ ಕನಕದಾಸರ ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿವೆ. ಯುವಪೀಳಿಗೆ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು” ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಟಿ.ವಿ. ಸುದರ್ಶನರೆಡ್ಡಿ, ಸಿ.ಎ. ಚನ್ನಪ್ಪ, ಕೆ. ಪ್ರಶಾಂತ್, ಕೆ. ರಂಗಪ್ಪ, ಬಂಡಿ ಜಡೆಪ್ಪ ಇತರರು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!